Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜ್ಯಾದ್ಯಂತ ‘ಎಸ್‍ಐಆರ್ ನಿಲ್ಲಲಿ’...

ರಾಜ್ಯಾದ್ಯಂತ ‘ಎಸ್‍ಐಆರ್ ನಿಲ್ಲಲಿ’ ಕೂಗು: ಬೆಂಗಳೂರು ಸೇರಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹೋರಾಟ

ವಾರ್ತಾಭಾರತಿವಾರ್ತಾಭಾರತಿ30 May 2026 11:28 PM IST
share
ರಾಜ್ಯಾದ್ಯಂತ ‘ಎಸ್‍ಐಆರ್ ನಿಲ್ಲಲಿ’ ಕೂಗು: ಬೆಂಗಳೂರು ಸೇರಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹೋರಾಟ

ಬೆಂಗಳೂರು : ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‍ಐಆರ್) ವಿರೋಧಿಸಿ ರಾಜಧಾನಿ ಬೆಂಗಳೂರು, ಕೊಪ್ಪಳ, ವಿಜಯಪುರ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳು ಮತ್ತು ತಾಲೂಕು ಕೇಂದ್ರಗಳಲ್ಲಿ ಶನಿವಾರ ವಿವಿಧ ಸಂಘಟನೆಗಳ ನಾಯಕರು, ಸಾಹಿತಿಗಳು, ಚಿಂತಕರು ಸೇರಿ ಎಸ್‍ಐಆರ್ ನಿಲ್ಲಿಸಬೇಕು ಎಂದು ಒತ್ತಾಯಿಸಿ ಧರಣಿ, ರ್ಯಾಲಿ, ಹೋರಾಟ ನಡೆಸಿದರು.

ಶನಿವಾರ ‘ಎಸ್‍ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು-ಜನಪರ ಸಂಘಟನೆಗಳ ಒಕ್ಕೂಟ’ದ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿತ್ತು. ‘ಕೇಂದ್ರ ಚುನಾವಣಾ ಆಯೋಗ ಈಗಾಗಲೇ ವಿವಿಧ ರಾಜ್ಯಗಳಲ್ಲಿ ನಡೆಸಿದ ಸ್ವರೂಪದಲ್ಲಿಯೇ ‘ಎಸ್‍ಐಆರ್’ ಅನ್ನು ಕರ್ನಾಟಕದಲ್ಲಿ ಜಾರಿ ಮಾಡಲು ಬಿಡುವುದಿಲ್ಲ. ಚುನಾವಣಾ ಆಯೋಗ ಕನಿಷ್ಠ ನಾಲ್ಕು ಬದಲಾವಣೆಗಳನ್ನು ಒಪ್ಪಲೇಬೇಕು. ಬಂಗಾಳದಲ್ಲಿ ಮಾಡಿದಂತೆ ತಾರ್ಕಿಕ ವ್ಯತ್ಯಾಸ ಸಾಫ್ಟ್‌ ವೇರ್ ಅನ್ನು ಬಳಸಿ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಕೆಲಸ ಕರ್ನಾಟಕದಲ್ಲಿ ನಡೆಯಬಾರದು. ಕರಡು ಪಟ್ಟಿ ತಯಾರಾದ ನಂತರ ಕಡ್ಡಾಯವಾಗಿ ಗ್ರಾಮಸಭೆ ಕರೆದು ಸಾರ್ವಜನಿಕ ಪರಿಶೀಲನೆ ನಡೆಸಿಯೇ ಪಟ್ಟಿಯನ್ನು ಅಂತಿಮಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಮತದಾರರ ಪಟ್ಟಿಯನ್ನು ಮೆಷಿನ್ ರೀಡಬಲ್ ಫಾಮ್ರ್ಯಾಟಿನಲ್ಲಿ ಕೊಡುವ ಮೂಲಕ ಪಾರದರ್ಶಕತೆ ಪಾಲಿಸಬೇಕು. ಮನವಿ ಸಲ್ಲಿಸಲು ಹಾಗೂ ಅಗತ್ಯ ದಾಖಲೆ ಒದಗಿಸಲು ಕನಿಷ್ಟ 6 ತಿಂಗಳ ಸಮಯವಕಾಶ ಒದಗಿಸಬೇಕು. ಈ ನಾಲ್ಕು ಪ್ರಜಾತಾಂತ್ರಿಕ ಹಾಗೂ ಜನಸ್ನೇಹಿ ಕ್ರಮಗಳಿಗೆ ಒಪ್ಪಿದರೆ ಕರ್ನಾಟಕ ನಾಗರಿಕ ಸಮಾಜ ಮತದಾರರ ಪರಿಷ್ಕರಣೆಗೆ ಸಹಕಾರ ನೀಡುತ್ತದೆ. ಒಂದು ವೇಳೆ ಇದನ್ನು ಒಪ್ಪದೆ ತಾನು ಅಂದುಕೊಂಡದ್ದನ್ನೇ ಹೇರಲು ಮುಂದಾದರೆ, ಅಸಹಕಾರವನ್ನು ಎದುರಿಸಬೇಕಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಸಿದ್ದಾರೆ.

ರಾಜ್ಯ ಸರಕಾರವೂ ಮತದಾರರ ಹಿತ ಕಾಯಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು. ವಿಶೇಷ ಗ್ರಾಮ ಸಭೆ ಮತ್ತು ವಾರ್ಡ್ ಸಭೆಗಳನ್ನು ಕರೆದು ಮತದಾರರ ಪಟ್ಟಿಯ ಮುಕ್ತ ಪರಿಶೀಲನೆ ಮಾಡಬೇಕು. ಅರ್ಹ ಮತದಾರರಿಗೆ ಸ್ಮಾರ್ಟ್‍ಕಾರ್ಡ್ ನೀಡಬೇಕು. ದಾಖಲೆ ಇಲ್ಲದವರಿಗೆ ದಾಖಲೆ ಒದಗಿಸುವ ಕೆಲಸ ಮಾಡಬೇಕು. ಚುನಾವಣಾ ಆಯೋಗ 15 ದಿನದೊಳಗೆ ನಮ್ಮ ಆಗ್ರಹಕ್ಕೆ ಸಕರಾತ್ಮಕವಾಗಿ ಸ್ಪಂದಿಸದೇ, ಸರಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳದೇ ಹೋದರೆ, ಎಸ್‍ಐಆರ್ ತರಬೇತಿ ಪ್ರಾರಂಭವಾಗುವ ಜೂ.20ರಂದು ಪ್ರತಿರೋಧವನ್ನು ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆ ನೀಡಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಹಮ್ಮಿಕೊಂಡಿದ್ದ ಹೋರಾಟದಲ್ಲಿ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್, ಅಂಕಣಕಾರ ಶಿವಸುಂದರ್, ಹೋರಾಟಗಾರರಾದ ನೂರ್ ಶ್ರೀಧರ್, ಕೆ.ವಿ.ಭಟ್, ವಿನಯ್ ಶ್ರೀನಿವಾಸ್, ಅರುಣ್ ಲೂಯಿಸ್, ಯೂಸಫ್ ಕನ್ನಿ, ಅಮ್ಜದ್ ಪಾಷಾ, ನಿಷಾ ಗೂಳೂರು, ಸುರೇಶ್ ಬೆಲ್ಲಮಕೊಂಡ, ಮಲ್ಲಿಗೆ ಸಿರಿಮನೆ, ತಾಹೇರ್ ಹುಸೇನ್, ರಘುನಂದನ್, ರವಿ ಮೋಹನ್, ನಾಗೇಶ್ ಅರಳಕುಪ್ಪೆ, ತನ್ವೀರ್ ಅಹ್ಮದ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

SIR
share
ವಾರ್ತಾಭಾರತಿ
ವಾರ್ತಾಭಾರತಿ
Next Story
X