Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಎಸ್‍ಐಆರ್’ ಪ್ರಕ್ರಿಯೆ ಆರಂಭದ...

‘ಎಸ್‍ಐಆರ್’ ಪ್ರಕ್ರಿಯೆ ಆರಂಭದ ಬೆನ್ನಲ್ಲೆ ಅರ್ಹರಿಗೆ ‘ವಾಸ ಪ್ರಮಾಣ ಪತ್ರ’ ವಿತರಣೆಗೆ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರಕಾರ

ವಾರ್ತಾಭಾರತಿವಾರ್ತಾಭಾರತಿ29 Jun 2026 9:32 PM IST
share
‘ಎಸ್‍ಐಆರ್’ ಪ್ರಕ್ರಿಯೆ ಆರಂಭದ ಬೆನ್ನಲ್ಲೆ ಅರ್ಹರಿಗೆ ‘ವಾಸ ಪ್ರಮಾಣ ಪತ್ರ’ ವಿತರಣೆಗೆ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರಕಾರ

ಬೆಂಗಳೂರು : ಅರ್ಹ ವ್ಯಕ್ತಿಗಳಿಗೆ ಶಾಶ್ವತ ನಿವಾಸ ಪ್ರಮಾಣ ಪತ್ರ(ಪಿಆರ್‌ಸಿ)ಗಳ ಸುಗಮ ಹಾಗೂ ಕಾಲಬದ್ಧ ವಿತರಣೆಗೆ ಮತ್ತು ಇತರೆ ಸರಕಾರಿ ಪ್ರಮಾಣಪತ್ರಗಳು ಹಾಗೂ ನಾಗರಿಕ ಸೇವೆಗಳ ವಿತರಣೆಗೆ ಕಾರ್ಯಾಚರಣಾ ಮಾರ್ಗಸೂಚಿಗಳನ್ನು ನೀಡಿ ರಾಜ್ಯ ಸರಕಾರ ಸೋಮವಾರ ಆದೇಶಿಸಿದೆ.

ಪ್ರತಿ ಗ್ರಾಮ ಪಂಚಾಯಿತಿ ಹಾಗೂ ಪ್ರತಿಯೊಂದು ನಗರ ಸ್ಥಳೀಯ ಸಂಸ್ಥೆಯ ವಾರ್ಡ್ ಕಚೇರಿಯಲ್ಲಿ ಕಂಪ್ಯೂಟರ್, ಇಂಟರ್ನೆಟ್, ಮುದ್ರಣ, ಸ್ಕ್ಯಾನಿಂಗ್ ಮತ್ತು ಅಗತ್ಯ ಮೂಲಸೌಕರ್ಯಗಳೊಂದಿಗೆ ಸಹಾಯ ಮತ್ತು ಸೌಲಭ್ಯ ಕೌಂಟರ್ ಸ್ಥಾಪಿಸಬೇಕು. ಅಟಲ್ ಜನಸ್ನೇಹಿ ಕೇಂದ್ರಗಳು, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ಸಿಎಸ್‍ಸಿಗಳು ಮತ್ತು ಇತರೆ ಅಧಿಕೃತ ಕೇಂದ್ರಗಳು ಅರ್ಜಿಗಳನ್ನು ಪ್ರಕ್ರಿಯೆಗೊಳಿಸುತ್ತವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅರ್ಹ ಅರ್ಜಿದಾರರು ಸೇವಾ ಸಿಂಧು ಪೋರ್ಟಲ್, ಅಟಲ್ ಜನಸ್ನೇಹಿ ಕೇಂದ್ರ ಪೋರ್ಟಲ್ ಅಥವಾ ಸರಕಾರ ಕಾಲಕಾಲಕ್ಕೆ ಅಧಿಸೂಚಿಸುವ ಇತರೆ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಹೇಳಲಾಗಿದೆ.

ಜಿಲ್ಲಾ ಪಂಚಾಯಿತಿ ಸಿಇಒಗಳು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಕೌಂಟರ್‌ ಗಳನ್ನು ಸ್ಥಾಪಿಸಬೇಕು. ಮಹಾನಗರ ಪಾಲಿಕೆ ಆಯುಕ್ತರು ಹಾಗೂ ನಗರಸಭೆ/ಪುರಸಭೆ/ಪಟ್ಟಣ ಪಂಚಾಯಿತಿಗಳ ಮುಖ್ಯಾಧಿಕಾರಿಗಳು ನಗರ ಪ್ರದೇಶಗಳಲ್ಲಿ ಕೌಂಟರ್‍ಗಳನ್ನು ಸ್ಥಾಪಿಸಬೇಕು. ಈ ಆದೇಶದಿಂದ ಏಳು ದಿನಗಳೊಳಗೆ ಅಥವಾ ಸರಕಾರ ಅಧಿಸೂಚಿಸುವ ಅವಧಿಯಲ್ಲಿ ಕಾರ್ಯಾರಂಭ ಮಾಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಜಿಲ್ಲಾಧಿಕಾರಿಗಳು ಸಹಾಯ ಮತ್ತು ಸೌಲಭ್ಯ ಕೌಂಟರ್‍ಗಳ ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡಬೇಕು. ಎಲ್ಲ ಅನುಷ್ಠಾನ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ, ಸಹಾಯ ಸೌಲಭ್ಯ ಕೌಂಟರ್‍ಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸಬೇಕು ಮತ್ತು ಸಕಾಲ ಕಾಲಮಿತಿಯಲ್ಲಿ ಅನುಸರಣೆಯಾಗುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸರಕಾರವು ಪರಿಶೀಲನೆಯನ್ನು ಸುಗಮಗೊಳಿಸಲು, ದಾಖಲೆಗಳನ್ನು ಸಲ್ಲಿಸುವ ಅಗತ್ಯವನ್ನು ಕಡಿಮೆ ಮಾಡಲು ಮತ್ತು ಈಗಾಗಲೇ ಭರ್ತಿ ಮಾಡಿದ ಆನ್‍ಲೈನ್ ಅರ್ಜಿಗಳನ್ನು ಸಕ್ರಿಯಗೊಳಿಸಲು ಸೀಮಿತ ಉದ್ದೇಶಕ್ಕಾಗಿ, ಕುಟುಂಬ, ಶೈಕ್ಷಣಿಕ ದತ್ತಾಂಶಗಳು, ನಿವಾಸ ದತ್ತಾಂಶಗಳು, ಮತದಾರರ ಪಟ್ಟಿಗಳು ಮತ್ತು ಕಾಲಕಾಲಕ್ಕೆ ಸೂಚಿಸಬಹುದಾದ ಇತರೆ ಸರಕಾರಿ ದತ್ತಾಂಶಗಳು ಸೇರಿದಂತೆ ಅಧಿಕೃತ ಸರಕಾರಿ ದತ್ತಾಂಶಗಳನ್ನು ಬಳಸಿಕೊಳ್ಳಬಹುದು. ಆದರೆ, ಪ್ರಮಾಣಪತ್ರ ನೀಡುವ ಮೊದಲು ಅರ್ಹತೆಯನ್ನು ಸಕ್ಷಮ ಪ್ರಾಧಿಕಾರವು ಸ್ವತಂತ್ರವಾಗಿ ದೃಢೀಕರಿಸಿಕೊಳ್ಳಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.

ಸರಕಾರದ ಅಪರ ಮುಖ್ಯ ಕಾರ್ಯದರ್ಶಿ/ಸರಕಾರದ ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ ಇವರು ಈ ಯೋಜನೆಯ ಅನುಷ್ಠಾನವನ್ನು ಕಾಲಕಾಲಕ್ಕೆ ಪರಿಶೀಲಿಸಬೇಕು. ಎಲ್ಲ ಜಿಲ್ಲಾಧಿಕಾರಿಗಳು ಕಾಲಕಾಲಕ್ಕೆ ವರದಿಗಳನ್ನು ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Tags

SIR
share
ವಾರ್ತಾಭಾರತಿ
ವಾರ್ತಾಭಾರತಿ
Next Story
X