Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಉದ್ಯೋಗ ಕ್ರಾಂತಿಗೆ ಹೊಸ ಮುನ್ನುಡಿ |...

ಉದ್ಯೋಗ ಕ್ರಾಂತಿಗೆ ಹೊಸ ಮುನ್ನುಡಿ | ಕರ್ನಾಟಕದ 94 ಮಂದಿಗೆ ಸ್ಲೊವಾಕಿಯಾ ರಾಷ್ಟ್ರದಲ್ಲಿ ಉದ್ಯೋಗ

ವಾರ್ತಾಭಾರತಿವಾರ್ತಾಭಾರತಿ22 Jun 2024 9:40 PM IST
share
ಉದ್ಯೋಗ ಕ್ರಾಂತಿಗೆ ಹೊಸ ಮುನ್ನುಡಿ | ಕರ್ನಾಟಕದ 94 ಮಂದಿಗೆ ಸ್ಲೊವಾಕಿಯಾ ರಾಷ್ಟ್ರದಲ್ಲಿ ಉದ್ಯೋಗ

ಬೆಂಗಳೂರು : ಕೌಶಲ್ಯಾಭಿವೃದ್ದಿ ನಿಗಮವು ರಾಜ್ಯದ ಯುವಕರಿಗೆ ವಿದೇಶಗಳಲ್ಲಿ ಉದ್ಯೋಗ ಒದಗಿಸುವ ಮಹತ್ವದ ಯೋಜನೆ ಅನುಷ್ಠಾನಗೊಳಿಸಿದ್ದು, ಇದರ ಭಾಗವಾಗಿ ಸ್ಲೊವಾಕಿಯಾ ರಾಷ್ಟ್ರದಲ್ಲಿ ಬಿಇ, ಡಿಪ್ಲೊಮೊ, ಐಟಿಐ ಮತ್ತಿತರ ವೃತ್ತಿಪರ ಕೋರ್ಸ್ ಮುಗಿಸಿದ 94 ಯುವಕರಿಗೆ ಉದ್ಯೋಗ ಕಲ್ಪಿಸುವಲ್ಲಿ ಕೌಶಲ್ಯಾಭಿವೃದ್ಧಿ ನಿಗಮವು ಯಶಸ್ವಿಯಾಗಿದೆ.

ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತೆಗೆದುಕೊಂಡ ದಿಟ್ಟ ನಿರ್ಧಾರದಿಂದಾಗಿ ಉದ್ಯೋಗವಿಲ್ಲದೆ ಕೆಲಸ ಹರಸುತ್ತಿದ್ದ ಯುವಕರು ಇದೀಗ ವಿದೇಶದಲ್ಲಿ ಕೈತುಂಬ ಸಂಬಳ ಪಡೆಯುತ್ತಿದ್ದು, ತಮ್ಮ ಭವಿಷ್ಯವ ರೂಪಿಸಿಕೊಂಡಿದ್ದಾರೆ.

ಯುವಕರ ಕೌಶಲ್ಯ ಅರ್ಹತೆಗೆ ತಕ್ಕಂತೆ ಉದ್ಯೋಗಗಳನ್ನು ನೀಡಲಾಗುತ್ತಿದೆ. ಅವರಿಗೆ ಇಲ್ಲಿಯೇ ತರಬೇತಿ, ವೀಸಾ ವ್ಯವಸ್ಥೆ, ಗೃಹ ಇಲಾಖೆಯಲ್ಲಿ ದಾಖಲಾತಿಗಳ ಪ್ರಮಾಣಪತ್ರ ಪರಿಶೀಲನೆ ಮಾತ್ರವಲ್ಲದೆ, ಹೊರರಾಷ್ಟ್ರಗಳಿಗೆ ತೆರಳುವವರಿಗೆ ಊಟ, ವಸತಿ ವ್ಯವಸ್ಥೆ, ಸಂಬಂಧಪಟ್ಟವರ ಭೇಟಿಗೆ ಬೇಕಾದ ಇನ್ನಿತರ ಸೌಲಭ್ಯಗಳನ್ನು ಇಲಾಖೆಯ ಅಧಿಕಾರಿಗಳೇ ನಿಗಾವಹಿಸುತ್ತಾರೆ ಎಂದು ತಿಳಿಸಲಾಗಿದೆ.

ಐಟಿ-ಬಿಟಿ, ವಿಜ್ಞಾನ, ಕೈಗಾರಿಕೆ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕರ್ನಾಟಕ ಇತರೆ ರಾಜ್ಯಗಳಿಗೆ ಹೋಲಿಸಿದರೆ ಸಾಕಷ್ಟು ಮುಂಚೂಣಿಯಲ್ಲಿದೆ. ಇದನ್ನು ಮನಗಂಡ ಸ್ಲೊವಾಕಿಯಾ ರಾಷ್ಟ್ರವು ಎರಡೂವರೆ ಸಾವಿರ ಅಸೆಂಬ್ಲಿ ಲೈನ್ ಆಪರೇಟರ್ ಗಳನ್ನು ನೇಮಕ ಮಾಡಿಕೊಳ್ಳಲು ಮುಂದೆ ಬಂದಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಡಾ.ಶರಣಪ್ರಕಾಶ್ ಪಾಟೀಲ್ ತಮ್ಮ ಅಧಿಕಾರಿಗಳ ತಂಡವನ್ನು ಸಿದ್ದವಿರಿಸಿ ವಿದೇಶಾಂಗ ವ್ಯವಹಾರಗಳ ಇಲಾಖೆ ಜೊತೆ ಒಡಂಬಡಿಕೆ ಮಾಡಿಕೊಂಡರು.

ಸ್ಲೊವೆನಿಯಾ ರಾಷ್ಟ್ರವು 2500 ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆ‌ ಆರಂಭಿಸುತ್ತಿದ್ದಂತೆ ಇಲಾಖೆ ವತಿಯಿಂದ ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಲಾಯಿತು. ಇದರ ಮೊದಲ ಭಾಗವಾಗಿ 94 ಅಭ್ಯರ್ಥಿಗಳಿಗೆ 54 ಮಂದಿ ಐಟಿಐ, 31 ಮಂದಿ ಡಿಪ್ಲೊಮಾ ಅಭ್ಯರ್ಥಿಗಳನ್ನು ಆ ದೇಶಕ್ಕೆ ಬೀಳ್ಕೊಡಲಾಗಿದೆ

ಉಚಿತ ತರಬೇತಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಬಿಡದಿ ಸಮೀಪದಲ್ಲಿನ ಟೊಯೋಟಾ ಕೀರ್ಲೋಸ್ಕರ್ ಕಂಪೆನಿಯಲ್ಲಿ ತರಬೇತಿ ನೀಡಲಾಯಿತು.

ತರಬೇತಿ ಪಡೆದ ನಂತರ ಸ್ಲೊವೆನಿಯಾದಲ್ಲಿ ಇವರಿಗೆ ತಿಂಗಳಿಗೆ 970 ಯೂರೋ (86 ಸಾವಿರ ರೂ.) ವೇತನ ನೀಡಲಾಗುತ್ತಿದೆ. ಜೂ.5ರಂದು ಮೊದಲ ತಂಡ ಹಾಗೂ ಜೂ.20ರಂದು 2ನೇ ತಂಡವನ್ನು ಬೀಳ್ಕೊಡಲಾಗಿದೆ. ಜೂ.24 ಮತ್ತು ಜು.1ರಂದು ಉಳಿದ ತಂಡಗಳು ಸ್ಲೋವಾಕಿಯಾಕ್ಕೆ ತೆರಳಲಿದೆ ಎಂದು ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಇಂಗ್ಲೀಷ್ ತರಬೇತಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲಿಷ್ ಭಾಷಾ ಅಗತ್ಯ ಇರುವುದನ್ನು ಮನಗಂಡಿರುವ ಕೌಶಲ್ಯಾಭಿವೃದ್ಧಿ ನಿಗಮ ಆಯ್ಕೆಯಾಗುವ ಉದ್ಯೋಗ ಆಕಾಂಕ್ಷಿಗಳಿಗೆ ಉಚಿತವಾಗಿ ಇಂಗ್ಲಿಷ್ ಭಾಷಾ ತರಬೇತಿ ನೀಡಲು ಮುಂದಾಗಿದೆ. ಇದಕ್ಕಾಗಿಯೇ ಪರಿಣಿತಿ ಹೊಂದಿರುವವರನ್ನು ಆಯ್ಕೆ ಮಾಡಿಕೊಂಡು ತರಬೇತಿ ನೀಡಲಿದೆ ಎಂದು ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X