Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಫೆ.10ರೊಳಗೆ ಸಾಮಾಜಿಕ, ಶೈಕ್ಷಣಿಕ...

ಫೆ.10ರೊಳಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿ ಸರಕಾರಕ್ಕೆ ಸಲ್ಲಿಕೆ ಸಾಧ್ಯತೆ: ಸಚಿವ ತಂಗಡಗಿ

ವಾರ್ತಾಭಾರತಿವಾರ್ತಾಭಾರತಿ21 Jan 2026 3:39 PM IST
share
ಫೆ.10ರೊಳಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿ ಸರಕಾರಕ್ಕೆ ಸಲ್ಲಿಕೆ ಸಾಧ್ಯತೆ: ಸಚಿವ ತಂಗಡಗಿ

ಬೆಂಗಳೂರು: ಜ.21: ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸರಕಾರಕ್ಕೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್ .ತಂಗಡಗಿ ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಯನಾ ಸಭಾಂಗಣದಲ್ಲಿ ಬುಧವಾರ ಶಾಂತ ಭೀಷ್ಮ ಚೌಡಯ್ಯ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಆಯೋಜಿಸಿದ್ದ ಅಂಬಿಗರ ಚೌಡಯ್ಯ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ಅಂಕಿಅಂಶಗಳ ಕ್ರೋಡೀಕರಣ ನಡೆಯುತ್ತಿದ್ದು, ವರದಿ ಶೀಘ್ರ ಸಲ್ಲಿಸಲಿದ್ದಾರೆ. ಈ ವರದಿಯಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಗುರುತಿಸಿ ಸರಕಾರದ ಯೋಜನೆ ತಲುಪಿಸಲು ಸಾಧ್ಯವಾಗಲಿದೆ ಎಂದರು.

ಅಲ್ಲದೆ, ಕೆಲವರು ಯಾವುದೇ ಮಾಹಿತಿ ಕೇಳಿದರೂ ನಮ್ಮ ಸಮುದಾಯವರು ಅಷ್ಟಿದ್ದಾರೆ. ಇಷ್ಟಿದ್ದಾರೆ ಅನ್ನುತ್ತಾರೆ. ವರದಿಯಿಂದ ವಾಸ್ತವ ಅಂಶ ಗೊತ್ತಾಗಲಿದೆ ಎಂದು ತಿಳಿಸಿದರು.

ಹಿಂದುಳಿದ ವರ್ಗಗಳ ಬಗ್ಗೆ ಮುಖ್ಯಮಂತ್ರಿ ವಿಶೇಷ ಕಾಳಜಿ ಹೊಂದಿದ್ದಾರೆ. ಈ ಹಿಂದಿನ ಸರಕಾರಗಳು ನಿಗಮಕ್ಕೆ ಮೊದಲು ಐದು ಕೋಟಿಯಷ್ಟೇ ಅನುದಾನ ನೀಡುತ್ತಿದ್ದರು. ಕಳೆದ ವರ್ಷ ಮುಖ್ಯಮಂತ್ರಿ ಬಳಿ ಹೆಚ್ಚಿನ ಅನುದಾನಕ್ಕೆ ಬೇಡಿಕೆ ಇಟ್ಟಾಗ, ಅದಕ್ಕೆ ಸ್ಪಂದಿಸಿ ಇಲಾಖೆಯ ಎಲ್ಲ ನಿಗಮಗಳಿಗೆ 1,600 ಕೋಟಿ ರೂ. ಅನುದಾನ ಒದಗಿಸಿದ್ದರು. ಈ ಪೈಕಿ ರೂ. 23.24 ಕೋಟಿ ಅನುದಾನವನ್ನು ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಕ್ಕೆ ನೀಡಲಾಗಿದೆ. ಅಲ್ಲದೆ, ಗಂಗಾ ಕಲ್ಯಾಣ ಯೋಜನೆಯಡಿ ನೀಡುತ್ತಿದ್ದ ಘಟಕದ ವೆಚ್ಚವನ್ನು ರೂ.2.50 ಲಕ್ಷದಿಂದ ರೂ. 3.75 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ. ಹಿಂದಿನ ಸರಕಾರ ಮೂರುವರೆ ವರ್ಷದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಒಂದೇ ಒಂದು ಕೊಳವೆಬಾವಿ ಕೊರೆದಿಲ್ಲ. ನಾನು ಇಲಾಖೆ ಸಚಿವನಾದ ಬಳಿಕ 18 ಸಾವಿರ ಕೊಳವೆಬಾವಿ ಕೊರೆಸಲಾಗಿದೆ. ಇನ್ನು ಹಿಂದುಳಿದ ವರ್ಗಗಳ ಮಕ್ಕಳ ವಿದೇಶ ವ್ಯಾಸಂಗಕ್ಕೆ ರೂ. 20 ಲಕ್ಷ ಸಾಲ ನೀಡಲಾಗುತ್ತಿತ್ತು. ನಾವು ಆ ಮೊತ್ತವನ್ನು ಶೂನ್ಯ ಬಡ್ಡಿದರಲ್ಲಿ ರೂ.50 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಕೂಲಿ ಸಮಾಜ, ಗಂಗಾಮತಸ್ಥ ಸಮಾಜದ ಪ್ರತಿಯೊಬ್ಬರು ಎಚ್ಚೆತ್ತುಕೊಳ್ಳುವ ಕೆಲಸ ಆಗಬೇಕು. ಯಾವ ಜಿಲ್ಲೆಯಲ್ಲಿ ಜಯಂತಿ ಆಚರಣೆ ಮಾಡುತ್ತಿಲ್ಲ ಎಂದು ಹೇಳಿದರೆ ಅವರ ವಿರುದ್ಧ ಕ್ರಮ ವಹಿಸಲಾಗುವುದು ಎಂದು ವೇದಿಕೆಯಲ್ಲಿದ್ದ ಸಮಾಜದ ಮುಖಂಡರಿಗೆ ಸಚಿವರು ಭರವಸೆ ನೀಡಿದರು.

ಮಹಾನ್ ನಿಷ್ಠುರ ಮಾನವತಾವಾದಿ ಚೌಡಯ್ಯ:

ಹನ್ನೆರಡನೇ ಶತಮಾನದ ಬಸವಣ್ಣನವರ ವಚನ ಚಳವಳಿ ಹುಟ್ಟುಹಾಕಿದ ಹಲವಾರು ಪ್ರತಿಭೆಗಳಲ್ಲಿ ಅಂಬಿಗರ ಚೌಡಯ್ಯ ಅಗ್ರಸ್ಥಾನದಲ್ಲಿ ನಿಲ್ಲುತ್ತಾರೆ. ತಮ್ಮ ವಚನಗಳಲ್ಲಿ ವೈಚಾರಿಕ ನಿರೂಪಣೆಯ ಧಾರೆಯನ್ನು ಹರಿಸುವ ಮೂಲಕ ನಿಷ್ಠುರ ಮಾನವತಾವಾದಿ ಎಂದೇ ಹೆಸರಾಗಿದ್ದವರು ಎಂದರು.

ಶೋಷಣೆಗೆ ಒಳಗಾಗಿದ್ದ ಪರಿಸರದಲ್ಲಿ ಹುಟ್ಟಿ ಬೆಳೆದ ಚೌಡಯ್ಯ ತಮ್ಮ ಸಮುದಾಯದ ಬದಲಾವಣೆಯತ್ತ ಗಮನ ಹರಿಸಿದ್ದರು. ಶರಣರು ತಮ್ಮ ದಿಟ್ಟತನದಿಂದ ಗುರುತಿಸಿಕೊಂಡವರು. ಸಮಾಜದಲ್ಲಿನ ದುರ್ಗಣಗಳ ಕುರಿತು ನಿರ್ದಾಕ್ಷಿಣ್ಯವಾಗಿ ಹಲವು ಅಂಶಗಳನ್ನು ಅವರು ಖಂಡಿಸಿದ್ದಾರೆ. ಧಾರ್ಮಿಕ ಹೆಸರಿನಲ್ಲಿ ನಡೆಯುವ ಮಳಸ, ವಂಚನೆ, ಲಿಂಗಭೇದ, ತಾರತಮ್ಯಗಳನ್ನು ಅವರು ಖಂಡಿಸಿದ್ದರು ಎಂದು ನೆನೆದರು.

ಬೆಂಗಳೂರಿನಲ್ಲೇ ಪ್ರತಿಮೆ ನಿರ್ಮಾಣ: ಬೆಂಗಳೂರಿನಲ್ಲಿ ಅಂಬಿಗರ ಚೌಡಯ್ಯರ ಪ್ರತಿಮೆಯನ್ನು ನಿರ್ಮಾಣ ಮಾಡಲಾಗುವುದು. ಪ್ರತಿಮೆ ನಿರ್ಮಾಣಕ್ಕಾಗಿ ಈಗಾಗಲೇ ಸ್ಥಳ ಹುಡುಕಾಟ ನಡೆಸಿದ್ದೇವೆ. ಸ್ಥಳ ಗುರುತಿಸಿದ ಬಳಿಕ ಇಲಾಖೆ ವತಿಯಿಂದ ಪ್ರತಿಮೆ ನಿರ್ಮಾಣವನ್ನು ಬೆಂಗಳೂರಿನಲ್ಲಿ ಮಾಡಲಾಗುವುದು ಎಂದು ಸಚಿವ ಶಿವರಾಜ್ ತಂಗಡಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವರೂ ಆದ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್, ರೇಷ್ಮೆ ಮಾರುಕಟ್ಟೆ ಮಂಡಳಿ ಅಧ್ಯಕ್ಷ ಗಂಗಾಧರ್, ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ಮಾನಸ, ಇಲಾಖೆ ಕಾರ್ಯದರ್ಶಿ ಜೆ.ಮಂಜುನಾಥ್, ನಿರ್ದೇಶಕಿ ಕೆ.ಎಂ.ಗಾಯಿತ್ರಿ, ಪ್ರಾಧ್ಯಾಪಕ ಡಾ.ಸ್ವಾಮಿ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Shivaraj Thangadgi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X