Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹೆಣ್ಣು ಭ್ರೂಣ ಹತ್ಯೆ ತಡೆಯಲು ಸಾಮಾಜಿಕ...

ಹೆಣ್ಣು ಭ್ರೂಣ ಹತ್ಯೆ ತಡೆಯಲು ಸಾಮಾಜಿಕ ಜಾಗೃತಿಯೂ ಬಹಳ ಮುಖ್ಯ : ಸಚಿವ ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ23 Jan 2026 3:22 PM IST
share
ಹೆಣ್ಣು ಭ್ರೂಣ ಹತ್ಯೆ ತಡೆಯಲು ಸಾಮಾಜಿಕ ಜಾಗೃತಿಯೂ ಬಹಳ ಮುಖ್ಯ : ಸಚಿವ ದಿನೇಶ್ ಗುಂಡೂರಾವ್
ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ

ಬೆಂಗಳೂರು: ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು, ಹೆಣ್ಣುಮಕ್ಕಳಿಗೆ ಗೌರವ ಹಾಗೂ ಮಾನ್ಯತೆ ನೀಡುವುದು ಸಮಾಜದ ಕರ್ತವ್ಯ ಎಂದು ಹೇಳಿದರು.

ಇಂದು ಹೆಣ್ಣು ಎಲ್ಲಾ ಕ್ಷೇತ್ರಗಳಲ್ಲೂ ಸಕ್ರಿಯವಾಗಿ ಭಾಗವಹಿಸುತ್ತಿರುವುದು ಸಂತಸದ ಸಂಗತಿ. ಆದರೂ ಸಮಾಜದಲ್ಲಿ ಇನ್ನಷ್ಟು ಬದಲಾವಣೆ ಆಗಬೇಕಾದ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

ಹೆಣ್ಣು ಭ್ರೂಣ ಹತ್ಯೆ ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಜಾರಿಗೆ ತಂದಿದ್ದು, ಈ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದೆ ಎಂದು ತಿಳಿಸಿದರು.

ಪ್ರಸಕ್ತ ರಾಜ್ಯದಲ್ಲಿ 1000 ಪುರುಷರಿಗೆ 947 ಮಹಿಳೆಯರ ಅನುಪಾತವಿದ್ದು, ಇದನ್ನು ಸರಿಪಡಿಸದಿದ್ದರೆ ಭವಿಷ್ಯದಲ್ಲಿ ಗಂಭೀರ ಸಾಮಾಜಿಕ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಕೇವಲ ಕಾನೂನು ಕ್ರಮಗಳು ಮಾತ್ರ ಸಾಕಾಗುವುದಿಲ್ಲ, ಸಾಮಾಜಿಕ ಜಾಗೃತಿಯೂ ಅಗತ್ಯವಾಗಿದೆ. ಕೆಲವೆಡೆ ಹೆಣ್ಣುಮಕ್ಕಳೇ ಈ ದುಷ್ಪ್ರವೃತ್ತಿಯಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಹೆಣ್ಣುಮಕ್ಕಳಿಗೆ ಸ್ವಾವಲಂಬನೆ ಮತ್ತು ಸ್ವಾತಂತ್ರ್ಯ ನೀಡುವ ಮೂಲಕ ಅವರ ಭವಿಷ್ಯ ಉಜ್ವಲಗೊಳಿಸಬೇಕೆಂದು ಸಚಿವರು ಕರೆ ನೀಡಿದರು.

ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ (RBSK) ಅಡಿಯಲ್ಲಿ 6 ವರ್ಷದೊಳಗಿನ ಅಂಗನವಾಡಿ ಮಕ್ಕಳಿಗೆ ಹಾಗೂ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲಾ–ಕಾಲೇಜುಗಳಲ್ಲಿ 1ರಿಂದ 12ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. 2025–26ನೇ ಸಾಲಿನ ಏಪ್ರಿಲ್‌ನಿಂದ ಡಿಸೆಂಬರ್ ವರೆಗೆ ಒಟ್ಟು 52,02,647 ಹೆಣ್ಣುಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ʼಶುಚಿʼ ಕಾರ್ಯಕ್ರಮದಡಿ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲಾ–ಕಾಲೇಜುಗಳ 6ರಿಂದ 12ನೇ ತರಗತಿಯಲ್ಲಿ ಓದುತ್ತಿರುವ ಹೆಣ್ಣುಮಕ್ಕಳಿಗೆ ಮತ್ತು ವಿವಿಧ ವಸತಿ ನಿಲಯಗಳಲ್ಲಿರುವ ಒಟ್ಟು 19,64,507 ಹೆಣ್ಣುಮಕ್ಕಳಿಗೆ ಉಚಿತ ಸ್ಯಾನಿಟರಿ ನ್ಯಾಪ್‌ಕಿನ್ ಪ್ಯಾಡ್‌ಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.

ಇದಲ್ಲದೆ, ʼಮುಟ್ಟಿನ ಕಪ್ʼ ಯೋಜನೆಯಡಿ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಒಟ್ಟು 9,44,466 ಹೆಣ್ಣುಮಕ್ಕಳಿಗೆ ಮುಟ್ಟಿನ ಕಪ್ ಒದಗಿಸಲು ಇಲಾಖೆ ಸಜ್ಜಾಗಿದೆ ಎಂದರು.

ಗರ್ಭಕಂಠ ಕ್ಯಾನ್ಸರ್ ವಿರುದ್ಧ ಆರೋಗ್ಯ ಇಲಾಖೆ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕಲ್ಯಾಣ ಕರ್ನಾಟಕ ಸೇರಿದಂತೆ ವಿವಿಧ ಭಾಗಗಳ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ 14 ವರ್ಷದ ಒಂದು ಲಕ್ಷಕ್ಕೂ ಅಧಿಕ ಹೆಣ್ಣುಮಕ್ಕಳಿಗೆ HPV ಲಸಿಕೆ ನೀಡಲಾಗುತ್ತದೆ. ಈ ಯೋಜನೆಯನ್ನು ಶೀಘ್ರದಲ್ಲೇ ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಗರ್ಭಕಂಠ ಕ್ಯಾನ್ಸರ್ ನಿರ್ಮೂಲನೆ ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ ಎಂದು ಸಚಿವರು ತಿಳಿಸಿದರು.

Tags

Dinesh Gundu Rao
share
ವಾರ್ತಾಭಾರತಿ
ವಾರ್ತಾಭಾರತಿ
Next Story
X