ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ವಿಶೇಷ ನೋಂದಣಿ ಅಭಿಯಾನ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ನಿಟ್ಟಿನಲ್ಲಿ ಡಿ.2, 3ರಂದು ಎರಡು ದಿನಗಳ ಕಾಲ ನಗರದಾದ್ಯಂತ ವಿಶೇಷ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಚುನಾವಣಾಧಿಕಾರಿಗಳು- ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಅ.27 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಡಿ.9 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಈ ಹಿನ್ನಲೆಯಲ್ಲಿ ವಿಶೇಷ ನೋಂದಣಿ ಅಭಿಯಾನವನ್ನು ಬಿಬಿಎಂಪಿಯ ಎಲ್ಲ ಕಂದಾಯ ಅಧಿಕಾರಿಗಳು /ಸಹ ಕಂದಾಯ ಅಧಿಕಾರಿಗಳು/ವಾರ್ಡ್ ಕಚೇರಿಗಳು /ಮತಗಟ್ಟೆಗಳಲ್ಲಿ ಆಯೋಜಿಸಲಾಗಿದೆ. ಬೂತ್ ಮಟ್ಟದ ಅಧಿಕಾರಿಗಳು ಸ್ಥಳದಲ್ಲಿದ್ದು, ನೋಂದಣಿ ಮಾಡಿಕೊಳ್ಳುವುದರ ಜೊತೆಗೆ ಹಕ್ಕು ಮತ್ತು ಆಕ್ಷೇಪಣೆಗಳ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





