Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸರಕಾರದ ಹಣಕಾಸಿನ ಸ್ಥಿತಿಗೆ...

ಸರಕಾರದ ಹಣಕಾಸಿನ ಸ್ಥಿತಿಗೆ ಸಂಬಂಧಿಸಿದಂತೆ ‘ಶ್ವೇತಪತ್ರ’ ಹೊರಡಿಸಲು ಪ್ರತಿಪಕ್ಷ ಸದಸ್ಯರ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ23 Sept 2026 9:41 PM IST
share
ಸರಕಾರದ ಹಣಕಾಸಿನ ಸ್ಥಿತಿಗೆ ಸಂಬಂಧಿಸಿದಂತೆ ‘ಶ್ವೇತಪತ್ರ’ ಹೊರಡಿಸಲು ಪ್ರತಿಪಕ್ಷ ಸದಸ್ಯರ ಒತ್ತಾಯ

ಬೆಂಗಳೂರು : ರಾಜ್ಯ ಸರಕಾರದ ಹಣಕಾಸಿನ ಸ್ಥಿತಿಗತಿಗೆ ಸಂಬಂಧಿಸಿದಂತೆ ಶ್ವೇತಪತ್ರವನ್ನು ಹೊರಡಿಸಲಿ ಎಂದು ಪ್ರತಿಪಕ್ಷದ ಸದಸ್ಯರು ಸರಕಾರದ ಗಮನ ಸೆಳೆದರು.

ಬುಧವಾರ ವಿಧಾನ ಪರಿಷತ್ತಿನ ಕಲಾಪದಲ್ಲಿ ಬರ ಕುರಿತಾದ ಚರ್ಚೆ ಆರಂಭಕ್ಕೂ ಮುನ್ನವೇ ಸರಕಾರದ ಆರ್ಥಿಕ ಪರಿಸ್ಥಿತಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆ ಬರೆದಿರುವ ಪತ್ರದ ವಿಚಾರ ಪ್ರಸ್ತಾಪವಾಯಿತು.

ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಆರ್ಥಿಕ ಇಲಾಖೆಯ ಪತ್ರವನ್ನು ಉಲ್ಲೇಖಿಸಿ, ರಾಜ್ಯ ಸರಕಾರ ಅಭಿವೃದ್ಧಿ ಕಾರ್ಯಗಳಿಗೆ ಮಾತ್ರವಲ್ಲದೆ, ಈಗಾಗಲೇ ಎದುರಾಗಿರುವ ಬರ ಪರಿಸ್ಥಿತಿಗೆ ಅಗತ್ಯವಾದ ಪರಿಹಾರ ಕ್ರಮಗಳಿಗೂ ಹಣಕಾಸು ಒದಗಿಸುವ ಸವಾಲು ಎದುರಿಸುತ್ತಿದೆ ಎಂದು ಟೀಕಿಸಿದರು.

ರಾಜ್ಯದ ಜನತೆ ಮತ್ತು ರೈತರು ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಪರಿಹಾರಕ್ಕೆ ಅಗತ್ಯವಿರುವ ಸಂಪನ್ಮೂಲಗಳ ಲಭ್ಯತೆ ಕುರಿತು ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಹಣ ಎಲ್ಲಿಂದ ಒದಗಿಸಲಾಗುತ್ತದೆ ಎಂಬುದನ್ನು ಸರಕಾರ ಸ್ಪಷ್ಟಪಡಿಸಬೇಕು ಎಂದು ರವಿಕುಮಾರ್ ಆಗ್ರಹಿಸಿದರು.

ಬರ ಪರಿಹಾರ, ಕುಡಿಯುವ ನೀರು, ಕೃಷಿ ಚಟುವಟಿಕೆಗಳಿಗೆ ನೆರವು ಸೇರಿದಂತೆ ತುರ್ತು ಕ್ರಮಗಳಿಗೆ ಹೆಚ್ಚಿನ ಹಣದ ಅಗತ್ಯವಿರುವಾಗ, ಈಗಾಗಲೇ ಈ ಸರಕಾರದ ಸಾಲದ ಹೊರೆ ಮಿತಿಮೀರಿದ್ದು, ಇದನ್ನು ಆರ್ಥಿಕ ಇಲಾಖೆಯೂ ಎಚ್ಚರಿಸಿದೆ. ಮತ್ತೊಂದು ಕಡೆ ಮುಖ್ಯಮಂತ್ರಿಗಳು 32 ಸಾವಿರ ಕೋಟಿ ಕೊಡುವುದಾಗಿ ಮಂಗಳೂರಿನ ಸಚಿವ ಸಂಪುಟದ ಸಭೆಯಲ್ಲಿ ಹೇಳುತ್ತಾರೆ. ಹಾಗಾಗಿ, ಸರಕಾರದ ನಿಜವಾದ ಆರ್ಥಿಕ ಪರಿಸ್ಥಿತಿ ಸದನದ ಮುಂದೆ ಬಹಿರಂಗವಾಗಬೇಕು. ಕೂಡಲೇ ಸರಕಾರ ಶ್ವೇತಪತ್ರವನ್ನು ಹೊರಡಿಸಲಿ ಎಂದು ರವಿಕುಮಾರ್ ಪಟ್ಟುಹಿಡಿದರು.

ಬರದಂತಹ ತುರ್ತು ಪರಿಸ್ಥಿತಿಯಲ್ಲಿ ಸರಕಾರದ ಬಳಿ ಲಭ್ಯವಿರುವ ಸಂಪನ್ಮೂಲ ಎಷ್ಟು, ಈಗಾಗಲೇ ಇರುವ ಹಣಕಾಸಿನ ಬದ್ದತೆ ಎಷ್ಟು, ಬರ ಪರಿಹಾರಕ್ಕೆ ಎಷ್ಟು ಅಗತ್ಯವಿದೆ ಎಂಬುದನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸುವ ಅಗತ್ಯವಿದೆ ಎಂದು ಪ್ರತಿಪಕ್ಷದ ಸದಸ್ಯರು ರವಿಕುಮಾರ್ ಮಾತಿಗೆ ದ್ವನಿಗೂಡಿಸಿದರು.

ಆಗ ಸಭಾಪತಿ ಮಧ್ಯಪ್ರವೇಶಿಸಿ, ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸೂಕ್ತ ಉತ್ತರ ಕೊಡಿಸಲಾಗುವುದು ಎಂದರು.

Tags

Special Session
share
ವಾರ್ತಾಭಾರತಿ
ವಾರ್ತಾಭಾರತಿ
Next Story
X