Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಡವರು, ಉಳ್ಳವರು ಎಂದು ಹೇಗೆ ವಿಗಂಡಣೆ...

ಬಡವರು, ಉಳ್ಳವರು ಎಂದು ಹೇಗೆ ವಿಗಂಡಣೆ ಮಾಡುತ್ತೀರಿ: ಬಿಜೆಪಿ ನಾಯಕರಿಗೆ ಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ

ಬರಗಾಲದಲ್ಲಿ ರೈತರಿಗೆ ಗ್ಯಾರಂಟಿ ನೀಡುವ ಬದಲು ಬರ ಪರಿಹಾರ ನೀಡಿ ಎಂದ ಬಿಜೆಪಿ ನಾಯಕರಿಗೆ ಸಿಎಂ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ23 Sept 2026 10:03 PM IST
share
ಬಡವರು, ಉಳ್ಳವರು ಎಂದು ಹೇಗೆ ವಿಗಂಡಣೆ ಮಾಡುತ್ತೀರಿ: ಬಿಜೆಪಿ ನಾಯಕರಿಗೆ ಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ

ಬೆಂಗಳೂರು : "ಗ್ಯಾರಂಟಿ ಯೋಜನೆಗಳನ್ನು ಉಳ್ಳವರಿಗೆ ಕೊಡಬೇಡಿ ಎಂದು ಹೇಳುತ್ತಿದ್ದೀರ. ಹಾಗಾದರೆ ನಿಮ್ಮ ಪ್ರಕಾರ, ಬಡವರು, ಉಳ್ಳವರು ಅಂದರೆ ಯಾರು, ಹೇಗೆ ವಿಂಗಡಿಸುತ್ತೀರಿ ಎನ್ನುವುದನ್ನು ವಿವರಿಸಿ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ ವಿಪಕ್ಷಗಳಿಗೆ ತಿರುಗೇಟು ನೀಡಿದರು.

ವಿಧಾನಸಭೆಯಲ್ಲಿ ಬುಧವಾರ ಬರ ಪರಿಸ್ಥಿತಿಯ ಚರ್ಚೆಯ ಸಂದರ್ಭದಲ್ಲಿ ಶಾಸಕ ಸಿದ್ದು ಸವದಿ ಅವರು, ರೈತರಿಗೆ ಗ್ಯಾರಂಟಿಗಳನ್ನು ನಿಲ್ಲಿಸಿ. ಆ ಹಣವನ್ನು ಬರಪರಿಹಾರಕ್ಕೆ ಬಳಸಿ ಎಂದು ಸಲಹೆ ನೀಡಿದರು. ಇದಕ್ಕೆ ದನಿಗೂಡಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ, ಬರಗಾಲದಲ್ಲಿ ಗ್ಯಾರಂಟಿಗಳನ್ನು ಬಡವರಿಗೆ ಮಾತ್ರ ತಲುಪುವಂತೆ ಮಾಡಿ ಎಂದು ಆಗ್ರಹಿಸಿದರು. ಆಗ ಸಿಎಂ ಹೀಗೆ ಉತ್ತರಿಸಿದರು.

"ನಮ್ಮ ಶಕ್ತಿ ಯೋಜನೆ ಬಳಸಿ ರೈತ ಮಹಿಳೆಯರು ಓಡಾಡುತ್ತಿದ್ದಾರೆ. ರೈತನ ಮನೆಯ ಯಜಮಾನಿಗೆ ಗೃಹಲಕ್ಷ್ಮೀ ಯೋಜನೆ ತಲುಪುತ್ತಿದೆ. ರೈತರ ಮನೆಗೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ರೈತ ಕುಟುಂಬಕ್ಕೂ 10 ಕೆಜಿ ಅಕ್ಕಿಯನ್ನೂ ಕೊಡುತ್ತಿದ್ದೇವೆ. ಇವರಲ್ಲಿ ಯಾರಿಗೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕು ಅಂತ ಹೇಳಿ. ನಿಮ್ಮ ಸಲಹೆಯನ್ನು ಪರಿಗಣಿಸೋಣ" ಎಂದರು.

"ಸುರೇಶ್ ಅವರೇ, ನೀವು ಬಡವರು, ಉಳ್ಳವರು ಅಂತ ಹೇಗೆ ವಿಂಗಡಣೆ ಮಾಡ್ತೀರ? ಎನ್ನುವುದನ್ನು ವಿವರಿಸಿ" ಎಂದು ಸಿಎಂ ಕೇಳಿದಾಗ, ಸುರೇಶ್ ಗೌಡರು, ಬಿಪಿಎಲ್ ಕಾರ್ಡುದಾರರು ಮಾತ್ರ ಬಡವರು ಎಂದರು.

ಹಾಗಾದರೆ, ‘ಬಿಪಿಎಲ್ ಕಾರ್ಡ್ ದಾರರಿಗೆ ಮಾತ್ರ ಗ್ಯಾರಂಟಿಗಳನ್ನು ಕೊಟ್ಟು ಮಿಕ್ಕವರಿಗೆ ಗ್ಯಾರಂಟಿ ಯೋಜನೆಯನ್ನು ರದ್ದು ಮಾಡಬೇಕೆ, ಅದನ್ನು ಎದ್ದು ನಿಂತು ಸದನಕ್ಕೆ ಹೇಳಿ" ಎಂದು ಸಿಎಂ ಸೂಚಿಸಿದರು.

ಸುರೇಶ್ ಗೌಡರು, "ಹೌದು, ನಾನು ಧೈರ್ಯವಾಗಿ ಬಡವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳನ್ನು ಕೊಡಿ ಎಂದು ಹೇಳುತ್ತಿದ್ದೇನೆ. ಬರಗಾಲದಲ್ಲಿ ಸರ್ಕಾರ ನಡೆಸುವುದು ಕಷ್ಟ ಆಗುತ್ತದೆ" ಎಂದರು.

ಹಾಗಾದರೆ, "ನಿಮ್ಮ ಪ್ರಕಾರ ಬಿಪಿಎಲ್ ಕಾರ್ಡು ಹೊಂದಿರುವವರಿಗೆ ಮಾತ್ರ ಗ್ಯಾರಂಟಿ ಯೋಜನೆ ನೀಡಬೇಕಾ’ ಅಂತ ಮತ್ತೆ ಸಿಎಂ ಮರುಪ್ರಶ್ನೆ ಮಾಡಿದರು.

ಮಧ್ಯೆ ಪ್ರವೇಶ ಮಾಡಿದ ಶಾಸಕ ವಿಜಯೇಂದ್ರ "ಸರ್ಕಾರದಲ್ಲಿ ಹಣ ಇಲ್ಲ ಅಂತ ಬಿಪಿಎಲ್ ಕಾರ್ಡ್ ಗಳನ್ನು ಸರ್ಕಾರವೇ ರದ್ದು ಮಾಡುತ್ತಿದೆ. ಈ ಬಗ್ಗೆ ನಾವ್ಯಾಕೆ ಮಾತನಾಡಬೇಕು" ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, "ವಿಜಯೇಂದ್ರ ಅವರೇ, ನೀವ್ಯಾಕೆ ಕಷ್ಟ ಪಡುತ್ತಿದ್ದೀರಿ. ನಿಮ್ಮ ಶಾಸಕರು ಅವರ ಭಾವನೆ ವ್ಯಕ್ತಪಡಿಸುತ್ತಿದ್ದಾರೆ. ಅದಕ್ಕೆ ಅವಕಾಶ ಕೊಡಿ" ಎಂದು ಹೇಳಿದರು.

ಇದಕ್ಕೆ ಉತ್ತರಿಸಿದ ವಿಜಯೇಂದ್ರ, ನಿಮ್ಮ ಭಾವನೆಯನ್ನು ಅವರು ಬಹಳ ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ ಎಂದರು. ವಿಜಯೇಂದ್ರ ಅವರ ಮಾತಿಗೆ ಪ್ರತಿಕ್ರಿಯೆ ನೀಡಿದ ಸಿಎಂ, "ನಿಮ್ಮ ಶಾಸಕರು ನನ್ನ ಭಾವನೆ ಅರ್ಥ ಮಾಡಿಕೊಂಡಿರುವುದಕ್ಕೆ ನನಗೂ ಅವರಿಗೂ ಮಾತಿನ ಸಂಪರ್ಕ ಏರ್ಪಟ್ಟಿರುವುದು" ಎಂದು ಛೇಡಿಸಿದರು.

Tags

Special Session
share
ವಾರ್ತಾಭಾರತಿ
ವಾರ್ತಾಭಾರತಿ
Next Story
X