ವಿಶೇಷ ಅಧಿವೇಶನ; ನಾಳೆ(ಸೆ.22) ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು : ವಿಧಾನ ಮಂಡಲ ಉಭಯ ಸದನಗಳ ವಿಶೇಷ ಅಧಿವೇಶನದ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆಯನ್ನು ನಾಳೆ(ಸೆ.22) ಸಂಜೆ 7ಗಂಟೆಗೆ ನಗರದ ರೆಸಿಡೆನ್ಸಿ ರಸ್ತೆಯಲ್ಲಿನ ಖಾಸಗಿ ಹೊಟೇಲ್‍ನಲ್ಲಿ ಕರೆಯಲಾಗಿದೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ತಿನ ಸಭಾನಾಯಕ ಡಾ.ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಕಾರ್ಯಾಧ್ಯಕ್ಷರು, ಪಕ್ಷದ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಪಾಲ್ಗೊಳ್ಳಲಿದ್ದಾರೆ.
ರಾಜ್ಯದಲ್ಲಿನ ಬರ ಹಾಗೂ ಕಸ್ತೂರಿ ರಂಗನ್ ವರದಿಯ ಕುರಿತು ವಿಶೇಷ ಅಧಿವೇಶದನಲ್ಲಿ ಚರ್ಚೆ ನಡೆಯಲಿದೆ. ಬರ ಪರಿಹಾರಕ್ಕೆ ಕೇಂದ್ರಕ್ಕೆ ಒತ್ತಾಯ ಮಾಡುವುದು ಹಾಗೂ ಕಸ್ತೂರಿ ರಂಗನ್ ವರದಿ ಸಂಬಂಧ ಕೇಂದ್ರ ಹೊರಡಿಸಿರುವ ಅಧಿಸೂಚನೆ ವಿರುದ್ಧ ನಿರ್ಣಯ ಮಂಡಿಸಿ, ಅಂಗೀಕಾರ ಕೈಗೊಳ್ಳುವ ಕುರಿತು ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ.




