ಜ.22 ರಿಂದ ವಿಶೇಷ ಅಧಿವೇಶನ : ಸಚಿವ ಸಂಪುಟದಲ್ಲಿ ತೀರ್ಮಾನ

ಬೆಂಗಳೂರು, ಜ.14:ವಿಬಿ ಜಿ ರಾಮ್ ಜಿ ಕಾಯ್ದೆ ಕುರಿತು ಅಧಿವೇಶನದಲ್ಲಿ ವಿಶೇಷ ಚರ್ಚೆ ಕುರಿತು ಜ.22 ರಿಂದ 31ರವರೆಗೆ ವಿಶೇಷ ವಿಧಾನ ಮಂಡಲದ ಜಂಟಿ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ತೀರ್ಮಾನ ಮಾಡಿದೆ.
ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ತುರ್ತು ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರು ಸುದ್ದಿಗೋಷ್ಠಿ ನಡೆಸಿ ನಿರ್ಣಯಗಳಿಗೆ ಸಂಬಂಧಿಸಿದಂತೆ ವಿವರಿಸಿದರು.
ಕೇಂದ್ರ ಸರ್ಕಾರ ಮನರೇಗಾ ಯೋಜನೆ ಹೆಸರು ಬದಲಾವಣೆ ಮಾಡಿದ್ದು, ಈ ಬಗ್ಗೆ ವಿಶೇಷ ಅಧಿವೇಶನದಲ್ಲಿ ಚರ್ಚಿಸಲು ನಿರ್ಧರಿಸಲಾಗಿದೆ. ಅಲ್ಲದೆ ಈ ವಿಶೇಷ ಅಧಿವೇಶನದಲ್ಲಿ ವಿಬಿಜಿ ರಾಮ್‌ಜಿ ಕಾಯ್ದೆಯನ್ನು ಹಿಂಪಡೆದು ಮನರೇಗಾ ಕಾಯ್ದೆಯನ್ನೇ ಮರು ಸ್ಥಾಪಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ನಿರ್ಣಯ ಅಂಗೀಕರಿಸುವ ಸಾಧ್ಯತೆ ಇದೆ ಎಂದೂ ಅವರು ಉಲ್ಲೇಖಿಸಿದರು.
Next Story





