Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. 13 ರೋಪ್ ವೇ ಯೋಜನೆಗಳ ಅನುಷ್ಠಾನಕ್ಕೆ ವೇಗ...

13 ರೋಪ್ ವೇ ಯೋಜನೆಗಳ ಅನುಷ್ಠಾನಕ್ಕೆ ವೇಗ ನೀಡಿ: ಸಚಿವ ಕೆ.ಜೆ. ಜಾರ್ಜ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ13 July 2026 4:09 PM IST
share
13 ರೋಪ್ ವೇ ಯೋಜನೆಗಳ ಅನುಷ್ಠಾನಕ್ಕೆ ವೇಗ ನೀಡಿ: ಸಚಿವ ಕೆ.ಜೆ. ಜಾರ್ಜ್ ಸೂಚನೆ

ಬೆಂಗಳೂರು, ಜು.13: ರಾಜ್ಯದಲ್ಲಿ ಪ್ರಸ್ತಾಪಿಸಲಾಗಿರುವ 13 ರೋಪ್ ವೇ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಇಂದು ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕ್ ಚಂದ್ರ, ಆಯುಕ್ತ ಡಾ.ವಿ.ರಾಮ್ ಪ್ರಸಾತ್ ಮನೋಹರ್, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ ವಿವಿಧ ರೋಪ್‌ವೇ ಯೋಜನೆಗಳ ಪ್ರಗತಿಯನ್ನು ಸಚಿವರು ಸಮಗ್ರವಾಗಿ ಪರಿಶೀಲಿಸಿದರು.

ಸಭೆಯಲ್ಲಿ ಹಲವು ವರ್ಷಗಳಿಂದ ರೋಪ್‌ವೇ ಯೋಜನೆಗಳು ಪ್ರಸ್ತಾಪದ ಹಂತದಲ್ಲಿಯೇ ಉಳಿದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಯೋಜನೆಗಳಿಗೆ ಟೆಂಡರ್ ಆಹ್ವಾನಿಸುವ ಮುನ್ನವೇ ಅರಣ್ಯ, ಪರಿಸರ ಸೇರಿದಂತೆ ಸಂಬಂಧಿತ ಎಲ್ಲ ಇಲಾಖೆಗಳ ಅಗತ್ಯ ಅನುಮತಿಗಳನ್ನು ಪಡೆದುಕೊಳ್ಳುವ ವ್ಯವಸ್ಥೆಯನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದ 13 ರೋಪ್‌ವೇ ಯೋಜನೆಗಳಿಗೆ ಕಾರ್ಯಸಾಧ್ಯತಾ ವರದಿ (Feasibility Study) ಸಿದ್ಧಪಡಿಸುವ ಜವಾಬ್ದಾರಿಯನ್ನು RITES ಸಂಸ್ಥೆಗೆ ವಹಿಸಲಾಗಿದ್ದು, ಈಗಾಗಲೇ 8 ಯೋಜನೆಗಳ ವರದಿಗಳು ಪೂರ್ಣಗೊಂಡಿವೆ. ಉಳಿದ ಯೋಜನೆಗಳ ಕಾರ್ಯಸಾಧ್ಯತಾ ವರದಿಗಳನ್ನು ಆದ್ಯತೆಯ ಮೇರೆಗೆ ಶೀಘ್ರ ಪೂರ್ಣಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಮುಳ್ಳಯ್ಯನಗಿರಿ ರೋಪ್‌ವೇ ಯೋಜನೆಗೆ ಅಗತ್ಯ ಅನುಮತಿಗಳ ಕೊರತೆಯಿಂದ ಕಾರ್ಯಸಾಧ್ಯತಾ ವರದಿ ವಿಳಂಬವಾಗಿರುವುದನ್ನು ಗಮನಿಸಿದ ಸಚಿವರು, RITES ಸಂಸ್ಥೆಗೆ ತಕ್ಷಣವೇ ಅಗತ್ಯ ಅನುಮತಿಗಳನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿ, ಒಂದು ತಿಂಗಳೊಳಗೆ ಕಾರ್ಯಸಾಧ್ಯತಾ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದರು.

ಬೆಳಗಾವಿ ಜಿಲ್ಲೆಯ ಗೋಕಾಕ್ ಜಲಪಾತ, ಯಾದಗಿರಿ ಜಿಲ್ಲೆಯ ಮೈಲಾರ ಲಿಂಗೇಶ್ವರ ದೇವಸ್ಥಾನ, ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಹಾಗೂ ಹಾವೇರಿ ಜಿಲ್ಲೆಯ ದೇವರಗುಡ್ಡ ಮಾಲತೇಶ ದೇವಸ್ಥಾನದ ರೋಪ್‌ವೇ ಯೋಜನೆಗಳಿಗೆ ಪ್ರಾಥಮಿಕ ಕಾರ್ಯಸಾಧ್ಯತಾ ವರದಿಗಳು ಈಗಾಗಲೇ ಸಿದ್ಧಗೊಂಡಿದ್ದು, ಗೋಕಾಕ್ ರೋಪ್‌ವೇ ಯೋಜನೆಗೆ ಹಣಕಾಸು ಇಲಾಖೆಯ ಅನುಮತಿಯೂ ದೊರೆತಿದೆ. ಈ ಯೋಜನೆಯನ್ನು ಮುಂದಿನ ಸಚಿವ ಸಂಪುಟ ಸಭೆಯ ಅನುಮೋದನೆಗೆ ಮಂಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದರು.

ರೋಪ್‌ವೇ ಯೋಜನೆಗಳನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವ (PPP) ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಯೋಜನೆಗಳು ನಿಗದಿತ ಸಮಯದಲ್ಲಿ ಆರಂಭವಾಗಲು ಅರಣ್ಯ ಸೇರಿದಂತೆ ವಿವಿಧ ಇಲಾಖೆಗಳ ಅನುಮತಿಗಳನ್ನು ಆದ್ಯತೆಯ ಮೇರೆಗೆ ಪಡೆಯಬೇಕು ಎಂದು ಸಚಿವರು ತಿಳಿಸಿದರು. ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯ ಆಯುಕ್ತರು ದೆಹಲಿಗೆ ತೆರಳಿ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಅನುಮತಿಗಳನ್ನು ತ್ವರಿತವಾಗಿ ಪಡೆಯುವಂತೆ ಅವರು ನಿರ್ದೇಶಿಸಿದರು.

ಈ ರೋಪ್‌ವೇ ಯೋಜನೆಗಳ ಅನುಷ್ಠಾನದಿಂದ ರಾಜ್ಯದ ಪ್ರಮುಖ ಧಾರ್ಮಿಕ, ಪಾರಂಪರಿಕ ಹಾಗೂ ಪ್ರಕೃತಿ ಪ್ರವಾಸಿ ತಾಣಗಳಿಗೆ ಸುಲಭ ಸಂಪರ್ಕ ಕಲ್ಪಿಸುವುದರ ಜೊತೆಗೆ, ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಉತ್ತೇಜಿಸಿ, ಪ್ರವಾಸೋದ್ಯಮ ಆಧಾರಿತ ಸ್ಥಳೀಯ ಆರ್ಥಿಕ ಅಭಿವೃದ್ಧಿಗೆ ಹೊಸ ಚೈತನ್ಯ ನೀಡುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ ಎಂದು ಸಚಿವರು ಹೇಳಿದರು.

ರಾಜ್ಯದಲ್ಲಿ ಪ್ರಸ್ತಾಪಿಸಲಾಗಿರುವ 13 ರೋಪ್‌ವೇ ಯೋಜನೆಗಳು*

1. ತುಮಕೂರು ಜಿಲ್ಲೆ – ಮಧುಗಿರಿ ಕೋಟೆ

2. ಕೊಡಗು ಜಿಲ್ಲೆ – ಮಲ್ಲಹಳ್ಳಿ ಜಲಪಾತ

3. ಕೊಪ್ಪಳ ಜಿಲ್ಲೆ – ಅಂಜನಾದ್ರಿ ಬೆಟ್ಟ

4. ಬಳ್ಳಾರಿ ಜಿಲ್ಲೆ – ಬಳ್ಳಾರಿ ಕೋಟೆ

5. ಧಾರವಾಡ ಜಿಲ್ಲೆ – ನೃಪತುಂಗ ಬೆಟ್ಟ

6. ಯಾದಗಿರಿ ಜಿಲ್ಲೆ – ಯಾದಗಿರಿ ಕೋಟೆ

7. ಯಾದಗಿರಿ ಜಿಲ್ಲೆ – ಮೈಲಾರ ಲಿಂಗೇಶ್ವರ ದೇವಸ್ಥಾನ

8. ಗದಗ ಜಿಲ್ಲೆ – ಹೊಲಾಳಮ್ಮ ದೇವಸ್ಥಾನ

9. ಗದಗ ಜಿಲ್ಲೆ – ಕಾಲಕಾಳೇಶ್ವರ ದೇವಸ್ಥಾನ

10. ಬೆಳಗಾವಿ ಜಿಲ್ಲೆ – ಸವದತ್ತಿ ಯಲ್ಲಮ್ಮ ದೇವಸ್ಥಾನ

11. ಹಾವೇರಿ ಜಿಲ್ಲೆ – ದೇವರಗುಡ್ಡ ಮಾಲತೇಶ ದೇವಸ್ಥಾನ

12. ಬೆಳಗಾವಿ ಜಿಲ್ಲೆ – ಗೋಕಾಕ್ ಜಲಪಾತ

13. ಚಿಕ್ಕಮಗಳೂರು ಜಿಲ್ಲೆ – ಮುಳ್ಳಯ್ಯನಗಿರಿ ಬೆಟ್ಟ

Tags

KJ George
share
ವಾರ್ತಾಭಾರತಿ
ವಾರ್ತಾಭಾರತಿ
Next Story
X