ಎಸೆಸೆಲ್ಸಿ ಪರೀಕ್ಷೆ-2ರ ವೇಳಾಪಟ್ಟಿ ಪ್ರಕಟ: ಮೇ 25ರಿಂದ ಪರೀಕ್ಷೆ ಆರಂಭ

ಸಾಂದರ್ಭಿಕ ಚಿತ್ರ
ಬೆಂಗಳೂರು : ಎಸೆಸೆಲ್ಸಿ ಪರೀಕ್ಷೆ-2ರ ವೇಳಾಪಟ್ಟಿ ಪ್ರಕಟವಾಗಿದ್ದು, ಮೇ 26ರಿಂದ ಜೂ.2ರ ವರೆಗೆ ಪರೀಕ್ಷೆಗಳು ನಡೆಯಲಿವೆ. ಮೇ 26ರಂದು ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ಇಂಗ್ಲಿಷ್, ಸಂಸ್ಕೃತ, ತಮಿಳು, ಉರ್ದು, ಮೇ 27ರಂದು ಗಣಿತ, ಸಮಾಜ ಶಾಸ್ತ್ರ, ಮೇ 28ರಂದು ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ, ಮೇ 29ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ.
ಮೇ 30ರಂದು ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲಿಷ್, ಉರ್ದು, ಸಂಸ್ಕೃತ, ಕೊಂಕಣಿ, ಅರೇಬಿಕ್, ಪರ್ಷಿಯನ್, ತುಳು ಪರೀಕ್ಷೆಗಳು ಹಾಗೂ ಎನ್ಎಸ್ಕ್ಯೂಎಫ್ ವಿಷಯಗಳಾದ ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಬ್ಯುಟಿ ಅಂಡ್ ವೆಲ್ನೆಸ್, ಅಪರೆಲ್ ಮೇಡ್ ಆಫ್ಸ್ ಮತ್ತು ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ಸ್ ಅಂಡ್ ಹಾರ್ಡ್ವೇರ್ ಪರೀಕ್ಷೆಗಳು ನಡೆಯಲಿವೆ.
ಮೇ 31ರಂದು ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಕ ಸಂಗೀತ ಪರೀಕ್ಷೆಗಳು ನಡೆಯಲಿವೆ. ಜೂ.2ರಂದು ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-4, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-4, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್-4, ಪ್ರೋಗ್ರಾಮಿಂಗ್ ಇನ್ ಎಎನ್ಎಸ್ಐ “ಸಿ” ಮತ್ತು ಅರ್ಥಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.
ಎಸೆಸೆಲ್ಸಿ ಪರೀಕ್ಷೆ-3 ಜೂ.23ರಿಂದ ಜೂ.30ರವರೆಗೆ ನಡೆಯಲಿದೆ. ಎಸೆಸೆಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದವರಿಗೆ ಪರೀಕ್ಷೆ-2 ಮತ್ತು 3ರ ಪರೀಕ್ಷೆಗಳಿಗೆ ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ. ಆದರೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳುವವರು ನಿಗಧಿತ ಶುಲ್ಕವನ್ನು ಪಾವತಿ ಮಾಡಬೇಕು.







