Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನ.11ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ...

ನ.11ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ರಾಷ್ಟ್ರೀಯ ಶಿಕ್ಷಣ ದಿನಾಚರಣೆ: ಸಚಿವ ಯು.ಟಿ.ಖಾದರ್

ಮೌಲಾನಾ ಆಝಾದ್ ಜನ್ಮದಿನದ ಅಂಗವಾಗಿ ವಿವಿಧ ಕಾರ್ಯಕ್ರಮಗಳ ಆಯೋಜನೆ

ವಾರ್ತಾಭಾರತಿವಾರ್ತಾಭಾರತಿ5 Nov 2026 12:40 PM IST
share
ನ.11ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ರಾಷ್ಟ್ರೀಯ ಶಿಕ್ಷಣ ದಿನಾಚರಣೆ: ಸಚಿವ ಯು.ಟಿ.ಖಾದರ್

ಬೆಂಗಳೂರು: ಭಾರತದ ಪ್ರಥಮ ಶಿಕ್ಷಣ ಸಚಿವ, ಸ್ವಾತಂತ್ರ್ಯ ಹೋರಾಟಗಾರ ಹಾಗೂ ಭಾರತ ರತ್ನ ಮೌಲಾನಾ ಅಬುಲ್ ಕಲಾಂ ಆಝಾದ್ ಅವರ ಜನ್ಮದಿನದ ಅಂಗವಾಗಿ ನವೆಂಬರ್ 11ರಂದು ರಾಜ್ಯಮಟ್ಟದ ರಾಷ್ಟ್ರೀಯ ಶಿಕ್ಷಣ ದಿನಾಚರಣೆಯನ್ನು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ನಗರದ ಮೌಲಾನಾ ಆಝಾದ್ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರು, ಪ್ರತಿಭಾವಂತ ವಿದ್ಯಾರ್ಥಿಗಳು, ಅತ್ಯುತ್ತಮ ಶಿಕ್ಷಕರು, ಪ್ರಾಂಶುಪಾಲರು ಹಾಗೂ ಶಿಕ್ಷಣ ಸಂಸ್ಥೆಗಳನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಮೌಲಾನಾ ಆಝಾದ್ ಮಾದರಿ ಶಾಲೆಗಳು ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ 2025-26ನೇ ಸಾಲಿನ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಸಲಾಗುವುದು. ಅತ್ಯುತ್ತಮ ಶಿಕ್ಷಕರು, ಪ್ರಾಂಶುಪಾಲರು, ಸ್ವಚ್ಛ ಹಾಗೂ ನೈರ್ಮಲ್ಯಯುತ ಶಾಲೆಗಳು ಮತ್ತು ವಿದ್ಯಾರ್ಥಿ ನಿಲಯಗಳು, ಅಡುಗೆ ಸಿಬ್ಬಂದಿಗೂ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರಿನ ಮಹಾರಾಣಿ ಕಾಲೇಜು, ಶೇಷಾದ್ರಿಪುರಂ ಕಾನೂನು ಕಾಲೇಜು, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಆಝಾದ್ ಮಾದರಿ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಮೌಲಾನಾ ಆಝಾದ್ ಅವರ ಜೀವನ, ಸ್ವಾತಂತ್ರ್ಯ ಹೋರಾಟದ ಕೊಡುಗೆ ಹಾಗೂ ಭಾರತದ ಶಿಕ್ಷಣ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ಅವರ ಪಾತ್ರವನ್ನು ಪರಿಚಯಿಸುವ ಛಾಯಾಚಿತ್ರ ಮತ್ತು ಮಾಹಿತಿ ಪ್ರದರ್ಶನವೂ ನಡೆಯಲಿದೆ.

ಮಕ್ಕಳ ಸುರಕ್ಷತೆ, ಆರೋಗ್ಯ, ಪೌಷ್ಟಿಕತೆ, ಅಗ್ನಿ ಸುರಕ್ಷತೆ ಹಾಗೂ ರಸ್ತೆ ಸಂಚಾರ ನಿಯಮಗಳ ಕುರಿತು ಆರೋಗ್ಯ ಇಲಾಖೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಹಾಗೂ ಸಂಚಾರ ಪೊಲೀಸ್ ಇಲಾಖೆಗಳ ಸಹಯೋಗದಲ್ಲಿ ಜಾಗೃತಿ ಪ್ರದರ್ಶನಗಳನ್ನು ಏರ್ಪಡಿಸಲಾಗಿದೆ.

ಸಮಾರಂಭದಲ್ಲಿ ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ ವಿಶ್ವವಿದ್ಯಾನಿಲಯದ (NLSIU) ಕುಲಪತಿ ಪ್ರೊ. ಸುಧೀರ್ ಕೃಷ್ಣಸ್ವಾಮಿ ವಿಶೇಷ ಪ್ರಧಾನ ಉಪನ್ಯಾಸ ನೀಡಲಿದ್ದಾರೆ.

ಶಿಕ್ಷಣದ ಮೂಲಕ ಸಾಮಾಜಿಕ ಸಮಾನತೆ, ಸಬಲೀಕರಣ ಹಾಗೂ ರಾಷ್ಟ್ರ ನಿರ್ಮಾಣದ ಆಶಯಗಳನ್ನು ಸಾಕಾರಗೊಳಿಸುವುದು ರಾಷ್ಟ್ರೀಯ ಶಿಕ್ಷಣ ದಿನಾಚರಣೆಯ ಉದ್ದೇಶವಾಗಿದೆ. ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು, ಶಿಕ್ಷಕರ ಸೇವೆಯನ್ನು ಗೌರವಿಸುವುದು ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಉತ್ತೇಜನ ನೀಡುವುದು ಕಾರ್ಯಕ್ರಮದ ಪ್ರಮುಖ ಆಶಯವಾಗಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕಿ ಕನೀಝ್ ಫಾತಿಮಾ ಹಾಗೂ ರಾಜ್ಯ ಉರ್ದು ಅಕಾಡಮಿಯ ಅಧ್ಯಕ್ಷ ಮೌಲಾನಾ ಮುಹಮ್ಮದ್ ಅಲಿ ಖಾಝಿ ಉಪಸ್ಥಿತರಿದ್ದರು.

Tags

State-Level National Education Day CelebrationU.T. Khader
share
ವಾರ್ತಾಭಾರತಿ
ವಾರ್ತಾಭಾರತಿ
Next Story
X