Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮಿಮ್ಸ್ ಜಾಗದ ಒತ್ತುವರಿ ತೆರವಿಗೆ ಕ್ರಮ,...

ಮಿಮ್ಸ್ ಜಾಗದ ಒತ್ತುವರಿ ತೆರವಿಗೆ ಕ್ರಮ, ತಿಂಗಳೊಳಗೆ ಮಂಡ್ಯ ಕ್ಯಾನ್ಸರ್ ಆಸ್ಪತ್ರೆ ಆರಂಭ: ಸಚಿವ ಎನ್.ಚಲುವರಾಯಸ್ವಾಮಿ

ತಮಿಳು ಕಾಲೋನಿ ನಿವಾಸಿಗಳಿಗೆ ಪರ್ಯಾಯ ನಿವೇಶನ ಒದಗಿಸಿ ಸ್ಥಳಾಂತರಕ್ಕೆ ಸೂಚನೆ; ಜಯದೇವ ಆಸ್ಪತ್ರೆ ನಿರ್ಮಾಣಕ್ಕೆ 5 ಎಕರೆ ಜಾಗ ನೀಡಲು ಸರ್ಕಾರ ನಿರ್ಧಾರ

ಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿ19 Nov 2026 3:06 PM IST
share
ಮಿಮ್ಸ್ ಜಾಗದ ಒತ್ತುವರಿ ತೆರವಿಗೆ ಕ್ರಮ, ತಿಂಗಳೊಳಗೆ ಮಂಡ್ಯ ಕ್ಯಾನ್ಸರ್ ಆಸ್ಪತ್ರೆ ಆರಂಭ: ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು: ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್)ಗೆ ಸೇರಿದ ಜಾಗದ ಒತ್ತುವರಿ ತೆರವುಗೊಳಿಸಲು ಎಲ್ಲ ಆಯಾಮಗಳಲ್ಲಿಯೂ ಕ್ರಮ ಕೈಗೊಳ್ಳಬೇಕು. ಒತ್ತುವರಿದಾರರಿಗೆ ಪರ್ಯಾಯ ನಿವೇಶನ ಒದಗಿಸಲು ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವೈದ್ಯಕೀಯ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದ ಕಚೇರಿಯಲ್ಲಿ ನಡೆದ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಮಿಮ್ಸ್‌ಗೆ ಸೇರಿದ ಸುಮಾರು 9 ಎಕರೆ ಭೂಮಿಯನ್ನು ತಮಿಳು ಕಾಲೋನಿ ನಿವಾಸಿಗಳು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಪ್ರಕರಣ ನ್ಯಾಯಾಲಯದಲ್ಲಿದೆ. ಮಿಮ್ಸ್‌ಗೆ ಸೇರಿದ ಜಾಗದ ಕ್ಯಾಂಪಸ್‌ನಲ್ಲಿ ಆರೋಗ್ಯ ಸೇವೆಗಳು ಮುಂದುವರಿಯಬೇಕು ಎಂದು ಸಚಿವರು ಹೇಳಿದರು.

ಒಟ್ಟು 39.33 ಎಕರೆ ಭೂಮಿ ಮಿಮ್ಸ್ ಸಂಸ್ಥೆಗೆ ಸೇರಿದೆ. ಈ ಪೈಕಿ ಪ್ರಸ್ತುತ 25.08 ಎಕರೆ ಮಾತ್ರ ಸಂಸ್ಥೆಯ ವಶದಲ್ಲಿದೆ. ಉಳಿದ 14.24 ಎಕರೆ ಭೂಮಿಯಲ್ಲಿ ಸರ್ಕಾರಿ ಹಾಗೂ ಖಾಸಗಿ ಒತ್ತುವರಿಗಳಿದ್ದು, ತಮಿಳು ಕಾಲೋನಿ ನಿವಾಸಿಗಳು 9.17 ಎಕರೆ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು.

1956ರಿಂದ ತಮಿಳು ಕಾಲೋನಿ ನಿವಾಸಿಗಳು ಈ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಮಿಮ್ಸ್ ಜಾಗಕ್ಕೆ ಪರ್ಯಾಯವಾಗಿ ಚಿಕ್ಕಮಂಡ್ಯದಲ್ಲಿ 6 ಎಕರೆ ಪ್ರದೇಶದಲ್ಲಿ ಸ್ಲಂ ಬೋರ್ಡ್ ವತಿಯಿಂದ 576 ಮನೆಗಳನ್ನು ನಿರ್ಮಿಸಿ ನಾಲ್ಕು ವರ್ಷ ಕಳೆದಿದ್ದರೂ, ಒತ್ತುವರಿ ನಿವಾಸಿಗಳು ಸ್ಥಳಾಂತರಗೊಳ್ಳುತ್ತಿಲ್ಲ. ಮೂಲಸೌಕರ್ಯಗಳ ಕೊರತೆ ಹಾಗೂ ಮಂಡ್ಯ ನಗರದಿಂದ ದೂರದಲ್ಲಿ ಮನೆಗಳನ್ನು ನಿರ್ಮಿಸಿರುವುದು ಸ್ಥಳಾಂತರಕ್ಕೆ ಅಡ್ಡಿಯಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ಈಗಾಗಲೇ ನಿರ್ಮಿಸಿರುವ ಮನೆಗಳಿಗೆ ಮೂಲಸೌಕರ್ಯ ಕಲ್ಪಿಸಲು ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚಿಸಿದರು. ನಿವಾಸಿಗಳ ಮನವೊಲಿಸಿ ಸ್ಥಳಾಂತರಕ್ಕೆ ಮುಂದಾದ ತಕ್ಷಣ ಮನೆಗಳ ನವೀಕರಣ ಕಾಮಗಾರಿ ಆರಂಭಿಸಬೇಕು. ತಮಿಳು ಕಾಲೋನಿ ನಿವಾಸಿಗಳ ಬೇಡಿಕೆಯಂತೆ ನಗರದ ಐದು ಕಿ.ಮೀ. ವ್ಯಾಪ್ತಿಯಲ್ಲಿ ಸೂಕ್ತ ಸ್ಥಳ ಗುರುತಿಸಿ ಖಾಲಿ ನಿವೇಶನಗಳನ್ನು ಹಂಚಿಕೆ ಮಾಡಬೇಕು. ನಿವೇಶನ ಪಡೆದು ಮಿಮ್ಸ್‌ಗೆ ಸೇರಿದ ಜಾಗದಿಂದ ಸ್ಥಳಾಂತರಗೊಳ್ಳುವ ಕುರಿತು ಅವರಿಂದ ಒಪ್ಪಿಗೆ ಪತ್ರ ಪಡೆಯಬೇಕು. ಈಗಾಗಲೇ ಸ್ಲಂ ಬೋರ್ಡ್ ನಿರ್ಮಿಸಿರುವ ಮನೆಗಳನ್ನು ನವೀಕರಿಸಿ, ಇತರ ಉದ್ದೇಶಗಳಿಗೆ ಬಳಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ತಡೆಯಾಜ್ಞೆ ತೆರವಿಗೆ ಸೂಚನೆ :

ಸ್ಥಳಾಂತರ ಪ್ರಕ್ರಿಯೆಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿರುವ ತಡೆಯಾಜ್ಞೆ ತೆರವುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಒತ್ತುವರಿದಾರರಿಗೆ ಯಾವುದೇ ಸಮಸ್ಯೆಯಾಗದಂತೆ ಸರ್ಕಾರಿ ಆಸ್ತಿಯನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕು. ಹಲವು ವರ್ಷಗಳಿಂದ ಈ ಸಮಸ್ಯೆಗೆ ತಾರ್ಕಿಕ ಅಂತ್ಯ ದೊರೆತಿಲ್ಲ. ಸಭೆಯಲ್ಲಿ ನೀಡಿರುವ ಸೂಚನೆಗಳಂತೆ ಜಿಲ್ಲಾಧಿಕಾರಿಗಳು ಪರ್ಯಾಯ ಭೂಮಿ ಗುರುತಿಸಿ, ಅದನ್ನು ಅಭಿವೃದ್ಧಿಪಡಿಸುವುದರೊಂದಿಗೆ ತಮಿಳು ಕಾಲೋನಿ ನಿವಾಸಿಗಳು ನಿವೇಶನ ಪಡೆದು ಸ್ಥಳಾಂತರಗೊಳ್ಳುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದರು.

ತಿಂಗಳೊಳಗೆ ಕ್ಯಾನ್ಸರ್ ಆಸ್ಪತ್ರೆ ಆರಂಭಕ್ಕೆ ಸೂಚನೆ :

ಟಿಸಿಸಿಸಿ (TCCC) ಯೋಜನೆಯ ಪ್ರಗತಿ ಪರಿಶೀಲಿಸಿದ ಸಚಿವರು, ಕ್ಯಾನ್ಸರ್ ಆಸ್ಪತ್ರೆಯ ಕಟ್ಟಡ ನಿರ್ಮಾಣ ಹಾಗೂ ಅಗತ್ಯ ಸೌಲಭ್ಯಗಳ ಕಲ್ಪನೆ ಈಗಾಗಲೇ ಪೂರ್ಣಗೊಂಡಿದೆ. ಮೊದಲು 100 ಹಾಸಿಗೆಗಳ ಆಸ್ಪತ್ರೆ ಆರಂಭಿಸಲು ಅನುಮತಿ ಪಡೆದು ಕಾರ್ಯಾರಂಭಿಸಬೇಕು. ಬಳಿಕ ಅದನ್ನು 200 ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸಬಹುದು. ಶೀಘ್ರದಲ್ಲೇ ಆಸ್ಪತ್ರೆಯ ಉದ್ಘಾಟನೆಗೆ ದಿನಾಂಕ ನಿಗದಿಪಡಿಸಿ, ಒಂದು ತಿಂಗಳೊಳಗೆ ಆಸ್ಪತ್ರೆ ಕಾರ್ಯಾರಂಭಿಸಬೇಕು ಎಂದು ಸೂಚಿಸಿದರು.

ಮಿಮ್ಸ್ ಕ್ಯಾಂಪಸ್‌ನಲ್ಲಿರುವ ತುರ್ತು ಚಿಕಿತ್ಸಾ ವಿಭಾಗವನ್ನು ಮೇಲ್ದರ್ಜೆಗೇರಿಸಲು 7 ಕೋಟಿ ರೂ. ವೆಚ್ಚದ ಯೋಜನೆ ಸಿದ್ಧವಾಗಿದೆ. ಅಲ್ಲಿನ ಆಟದ ಮೈದಾನದಲ್ಲಿ ಟ್ರಾಮಾ ಸೆಂಟರ್ ನಿರ್ಮಿಸಲು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ) ಕಚೇರಿಯಲ್ಲಿರುವ ಖಾಲಿ ಜಾಗದಲ್ಲಿ ತರಗತಿಗಳನ್ನು ನಡೆಸಲು ಕಟ್ಟಡ ನಿರ್ಮಾಣದ ಯೋಜನೆ ಸಿದ್ಧಪಡಿಸುವಂತೆ ಸಚಿವರು ಸೂಚಿಸಿದರು.

ಮೂಲಸೌಕರ್ಯಗಳ ಸಮಗ್ರ ಅಭಿವೃದ್ಧಿ ಯೋಜನೆಗೆ ಅಧಿಕಾರಿಗಳು ಕೂಡಲೇ ಪ್ರಸ್ತಾವನೆ ಸಲ್ಲಿಸಬೇಕು. ಈ ಎಲ್ಲ ಯೋಜನೆಗಳ ಕಾಮಗಾರಿಗಳನ್ನು ಎರಡು ತಿಂಗಳೊಳಗೆ ಆರಂಭಿಸಬೇಕು. ವೈದ್ಯಕೀಯ ಕಾಲೇಜಿನಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಜಯದೇವ ಆಸ್ಪತ್ರೆಗೆ ಐದು ಎಕರೆ ಜಾಗ :

ಮಂಡ್ಯ ನಗರದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ಮಾಣಕ್ಕೆ ಅಗತ್ಯವಿರುವ ಐದು ಎಕರೆ ಜಾಗವನ್ನು ಸರ್ಕಾರ ಒದಗಿಸಲಿದೆ. ಈ ಬಾರಿಯ ಬಜೆಟ್‌ನಲ್ಲಿ ಘೋಷಣೆ ಮಾಡುವ ವೇಳೆಗೆ ಜಾಗ ನೀಡಲಾಗುವುದು. ಕಟ್ಟಡ ನಿರ್ಮಾಣಕ್ಕೂ ಮುನ್ನ ಹೊರರೋಗಿ ವಿಭಾಗದ (ಒಪಿಡಿ) ಸೇವೆ ಆರಂಭಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ವೈದ್ಯಕೀಯ ಶಿಕ್ಷಣ ಸಚಿವರಿಗೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಆದಷ್ಟು ಶೀಘ್ರದಲ್ಲಿ ಜಾಗ ಒದಗಿಸಿದರೆ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಿಸಲಾಗುವುದು. ಅಲ್ಲಿಯವರೆಗೆ ಮಿಮ್ಸ್ ಆವರಣದಲ್ಲಿ ಒಪಿಡಿ ಸೇವೆ ಆರಂಭಿಸಲಾಗುವುದು ಎಂದು ಘೋಷಿಸಿದರು.

ಸಭೆಯಲ್ಲಿ ಶಾಸಕ ರವಿಕುಮಾರ್ ಗಣಿಗ, ಜಿಲ್ಲಾಧಿಕಾರಿ ಡಾ. ಕುಮಾರ ಸೇರಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಸ್ಲಂ ಬೋರ್ಡ್ ಅಧಿಕಾರಿಗಳು ಉಪಸ್ಥಿತರಿದ್ದರು.

Tags

MIMSLand EncroachmentMandyaCancer HospitalN.Cheluvarayaswamy
share
ಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿ
ಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿ
Next Story
X