ಸ್ಟಿಂಗ್ ಆಪರೇಶನ್ ಪ್ರಕರಣ: FIR ರದ್ದು ಕೋರಿ ರಾಕೇಶ್ ಶೆಟ್ಟಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಸ್ಟಿಂಗ್ ಆಪರೇಶನ್ ಪ್ರಕರಣಕ್ಕೆ ಸಂಬಂಧಿಸಿ ತನ್ನ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಖಾಸಗಿ ಸುದ್ದಿ ವಾಹಿನಿ ಪವರ್ ಟಿವಿ ಎಂ.ಡಿ.ರಾಕೇಶ್ ಶೆಟ್ಟಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇಂದು ಅರ್ಜಿ ವಿಚಾರಣೆಯ ನಡೆಯಲಿದೆ.
ಹೈಕೋರ್ಟ್ ನ ಜಸ್ಟೀಸ್ ಅನಂತ್ ರಾಮನಾಥ್ ಹೆಗಡೆಯವರಿರುವ ಏಕಸದಸ್ಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಲಿದೆ.
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಪ್ರಕರಣ ಸಂಬಂಧ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಎಫ್ಐ ಆರ್ ದಾಖಲಾಗಿತ್ತು. ಇದರ ಭಾಗವಾಗಿ ಪೊಲೀಸರು ರಾಕೇಶ್ ಶೆಟ್ಟಿ ಸೇರಿದಂತೆ ಹಲವರ ವಿಚಾರಣೆ ನಡೆಸಿದ್ದರು. ಅಲ್ಲದೆ ಸೆಷನ್ಸ್ ನ್ಯಾಯಾಲಯದಲ್ಲಿ ರಾಕೇಶ್ ಶೆಟ್ಟಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ 66ನೇ ಸಿಸಿಎಚ್ ನ್ಯಾಯಾಲಯ ರಾಕೇಶ್ ಶೆಟ್ಟಿ, ಕೃಪಾ ಆಳ್ವ ಸೇರಿದಂತೆ ಹಲವರ ನಿರೀಕ್ಷಣಾ ಜಾಮೀನು ಅರ್ಜಿಯನ್ನ ವಜಾ ಮಾಡಿತ್ತು.
ಈ ಹಿನ್ನಲೆಯಲ್ಲಿ ರಾಕೇಶ್ ಶೆಟ್ಟಿ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು ವಿಚಾರಣೆ ನಡೆಯಲಿದೆ.




