Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ʼಸ್ಟಿಂಗ್ ಆಪರೇಷನ್ʼ ಆರೋಪ; ಸಮಗ್ರ...

ʼಸ್ಟಿಂಗ್ ಆಪರೇಷನ್ʼ ಆರೋಪ; ಸಮಗ್ರ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ12 Oct 2026 7:33 PM IST
share
ʼಸ್ಟಿಂಗ್ ಆಪರೇಷನ್ʼ ಆರೋಪ; ಸಮಗ್ರ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

ಬೆಂಗಳೂರು : ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಮಸಿ ಹಾಕುವ ಉದ್ದೇಶದಿಂದ ಕುಟುಕು ಕಾರ್ಯಾಚರಣೆ (ಸ್ಟಿಂಗ್ ಆಪರೇಷನ್) ನಡೆಸಲಾಗಿದೆ ಎನ್ನುವ ಆರೋಪ ಇದ್ದು, ಈ ಸಂಬಂಧ ಸತ್ಯಾಸತ್ಯತೆ ಹೊರಬರಲು ಸರಕಾರ ಸಮಗ್ರ ತನಿಖೆ ನಡೆಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಯಾರು ಈ ಕಾರ್ಯಾಚರಣೆ ನಡೆಸಿದ್ದಾರೆ ಎಂಬುದನ್ನು ಪತ್ತೆಹಚ್ಚಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ತನಿಖೆ ನಡೆಸದೆ 'ಕಾಲವೇ ಉತ್ತರಿಸುತ್ತದೆ' ಎಂದು ಹೇಳುವುದು ಸರಿಯಲ್ಲ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದವರು. ಅವರ ವಿರುದ್ಧ ಸ್ಟಿಂಗ್ ಆಪರೇಷನ್ ನಡೆದಿರುವ ವಿಚಾರವನ್ನು ಲಘುವಾಗಿ ಪರಿಗಣಿಸಬಾರದು. ಈ ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೆ, ಯಾರಿಗೆ ಯಾವ ಪಾತ್ರವಿದೆ, ಸರಕಾರ ಇದುವರೆಗೆ ಏನು ಕ್ರಮ ಕೈಗೊಂಡಿದೆ ಎಂಬುದಕ್ಕೆ ಉತ್ತರ ನೀಡಬೇಕು ಎಂದು ಹೇಳಿದರು.

ನಾನು ಸಿದ್ದರಾಮಯ್ಯ ಅವರ ವಿರುದ್ಧ ರಾಜಕೀಯವಾಗಿ ಹೋರಾಟ ಮಾಡಿದ್ದೇನೆ. ನಮ್ಮ ಪಕ್ಷ ಬಿಟ್ಟ ನಂತರವೂ ಹಲವು ವಿಷಯಗಳಲ್ಲಿ ಅವರ ವಿರುದ್ಧ ಮಾತನಾಡಿದ್ದೇನೆ. ಆದರೆ ಮಾಜಿ ಮುಖ್ಯಮಂತ್ರಿ ಅವರ ಹೆಸರನ್ನು ಹಾಳು ಮಾಡುವ ಉದ್ದೇಶದಿಂದ ಇಂತಹ ಕಾರ್ಯಾಚರಣೆ ನಡೆದಿದ್ದರೆ ಅದರ ಬಗ್ಗೆ ಮೌನವಾಗಿರಲು ಸಾಧ್ಯವಿಲ್ಲ. ಇದು ಅನುಕಂಪಕ್ಕಾಗಿ ಮಾಡುತ್ತಿರುವ ಆಗ್ರಹವಲ್ಲ. ತಪ್ಪು ಮಾಡಿದವರು ಯಾರು ಎಂಬುದು ತಿಳಿದು ಅವರ ವಿರುದ್ಧ ಕ್ರಮವಾಗಬೇಕು ಎಂಬುದು ತಮ್ಮ ನಿಲುವು ಎಂದು ಅವರು ತಿಳಿಸಿದರು.

ಎಸ್‍ಐಆರ್:ಮತದಾರರ ಪಟ್ಟಿಗೆ ಸಂಬಂಧಿಸಿದ ಎಸ್‍ಐಆರ್ ಪ್ರಕ್ರಿಯೆ ಹೊಸದಲ್ಲ. ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ. ಆದರೆ, ಕೆಲವು ಸಮುದಾಯಗಳ ಮತದಾರರ ಸಂಖ್ಯೆ ಉದ್ದೇಶಪೂರ್ವಕವಾಗಿ ಇಳಿಸಲಾಗುತ್ತಿದೆ ಎಂಬ ಆರೋಪವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಮತದಾನದ ಹಕ್ಕು ಮಹತ್ವದ್ದೆಂಬುದನ್ನು ಒಪ್ಪಿಕೊಂಡರೂ, ಈ ವಿಚಾರವನ್ನು ರಾಜಕೀಯವಾಗಿ ಬಳಸುವ ಮೊದಲು ರಾಜ್ಯದ ಜನರ ಬದುಕು ಮತ್ತು ಸರಕಾರದ ಯೋಜನೆಗಳ ಅನುಷ್ಠಾನದ ಬಗ್ಗೆಯೂ ಮಾತನಾಡಬೇಕು ಎಂದು ಅವರು ಹೇಳಿದರು.

ಕಾಂಗ್ರೆಸ್ ನಾಯಕರು ಸಂವಿಧಾನದ ಬಗ್ಗೆ ಮಾತನಾಡುವಾಗ ಸಂವಿಧಾನಾತ್ಮಕ ಸಂಸ್ಥೆಗಳ ಶಿಷ್ಟಾಚಾರವನ್ನೂ ಗೌರವಿಸಬೇಕು ಎಂದು ಹೇಳಿದ ಅವರು, ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಗಳ ಬಳಿ ರಾಜಕೀಯ ವಿಷಯಗಳ ಬಗ್ಗೆ ಚರ್ಚಿಸಲು ಸಮಯ ಕೇಳಿರುವ ಕ್ರಮದ ಉದ್ದೇಶವೇನು. ಯಾವ ವಿಷಯ ಚರ್ಚಿಸಲು ಸಮಯ ಕೋರಲಾಗಿದೆ, ಸಂವಿಧಾನಾತ್ಮಕ ವ್ಯವಸ್ಥೆಯಲ್ಲಿರುವ ಶಿಷ್ಟಾಚಾರವನ್ನು ಹೇಗೆ ಪಾಲಿಸಬೇಕು ಎಂಬ ಕನಿಷ್ಠ ಅರಿವು ಇರಬೇಕು ಎಂದು ಟೀಕಿಸಿದರು.

ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ನಿಜವಾದ ಫಲಾನುಭವಿಗಳಿಗೆ ಹಣ ತಲುಪುವಲ್ಲಿ ಲೋಪಗಳಿವೆ ಹಾಗೂ ಅರ್ಹರಲ್ಲದವರೂ ಹಣ ಪಡೆಯುತ್ತಿದ್ದಾರೆ ಎಂಬ ಕಾರಣಕ್ಕೆ ಸಮೀಕ್ಷೆ ಮತ್ತು ಪರಿಶೀಲನೆ ನಡೆಸಲಾಗುತ್ತಿದೆ. ಗೃಹಲಕ್ಷ್ಮೀ ಯೋಜನೆ, ವಿಧವಾ ವೇತನ, ಅಂಗವಿಕಲರ ವೇತನ ಮತ್ತು ವೃದ್ಧಾಪ್ಯ ವೇತನಗಳ ಫಲಾನುಭವಿಗಳ ಸಂಖ್ಯೆಯಲ್ಲಿ 16ರಿಂದ 20 ಲಕ್ಷದಷ್ಟು ಕಡಿತ ಮಾಡಿರುವುದೇಕೆ, ಯಾವ ಆಧಾರದ ಮೇಲೆ ಕಡಿತ ಮಾಡಲಾಗಿದೆ ಎಂಬುದಕ್ಕೆ ಸರಕಾರ ಉತ್ತರಿಸಬೇಕು ಎಂದು ಅವರು ಕೇಳಿದರು.

Tags

sting operationH.D. Kumaraswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X