Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ...

ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಆ.1ರಿಂದ ದಕ್ಷಿಣ ಭಾರತದಾದ್ಯಂತ ಲಾರಿಗಳ ಮುಷ್ಕರ

ವಾರ್ತಾಭಾರತಿವಾರ್ತಾಭಾರತಿ7 July 2026 10:40 PM IST
share
ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಆ.1ರಿಂದ ದಕ್ಷಿಣ ಭಾರತದಾದ್ಯಂತ ಲಾರಿಗಳ ಮುಷ್ಕರ

ಬೆಂಗಳೂರು : ವಾಣಿಜ್ಯ ವಾಹನಗಳಿಗೆ ಜಿಪಿಎಸ್ ಮತ್ತು ಪ್ಯಾನಿಕ್ ಬಟನ್ ಕಡ್ಡಾಯಗೊಳಿಸಿದ ನಿಯಮವನ್ನು ರದ್ದುಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ಆ.1ರಿಂದ ದಕ್ಷಿಣ ಭಾರತದಾದ್ಯಂತ ಲಾರಿಗಳ ಮುಷ್ಕರ ನಡೆಸಲಾಗುವುದು ಎಂದು ದಕ್ಷಿಣ ಭಾರತ ಲಾರಿ ಮಾಲಕರ ಸಂಘದ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರಕಾರಗಳು ಜು.30ರೊಳಗೆ ನಮ್ಮ ನ್ಯಾಯಸಮ್ಮತ ಬೇಡಿಕೆಗಳನ್ನು ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಆ.1ರಿಂದ ದಕ್ಷಿಣ ಭಾರತದ ಎಲ್ಲ ಲಾರಿಗಳು ನಿಂತಲ್ಲೇ ನಿಲ್ಲಲಿವೆ. ಈ ಮುಷ್ಕರದಿಂದಾಗಿ ದಕ್ಷಿಣ ಭಾರತದ ಸುಮಾರು 24ಲಕ್ಷ ಹಾಗೂ ಕರ್ನಾಟಕ ರಾಜ್ಯದ 7ಲಕ್ಷ ಲಾರಿಗಳು ಸಂಚಾರ ಸ್ಥಗಿತಗೊಳಿಸಲಿವೆ ಎಂದು ತಿಳಿಸಿದರು.

2012ರ ನಿರ್ಭಯಾ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ವಾಣಿಜ್ಯ ವಾಹನಗಳಿಗೂ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯಗೊಳಿಸಿತ್ತು. ಆದರೆ, ಇದರಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ. ಒಂದೊಂದು ರಾಜ್ಯದಲ್ಲಿ ಒಂದೊಂದು ರೀತಿಯ ದರ ನಿಗದಿ ಮಾಡಲಾಗಿದ್ದು, ಜಿಪಿಎಸ್ ಮತ್ತು ಪ್ಯಾನಿಕ್ ಬಟನ್ ಅಳವಡಿಕೆಗೆ ಒಂದು ರಾಜ್ಯದಲ್ಲಿ 3 ಸಾವಿರ ರೂ. ಇದ್ದರೆ, ಮತ್ತೊಂದು ರಾಜ್ಯದಲ್ಲಿ 15 ಸಾವಿರ ರೂ. ವಸೂಲಿ ಮಾಡಲಾಗುತ್ತಿದೆ. ಸಾರಿಗೆ ವಾಹನಗಳಲ್ಲಿ ಇದನ್ನು ಅಳವಡಿಸಲಾಗಿದೆಯಾದರೂ ಇಲ್ಲಿಯವರೆಗೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಹೀಗಿರುವಾಗ ಸರಕು ಸಾಗಣೆ ವಾಹನಗಳಿಗೆ ಇದರ ಅವಶ್ಯಕತೆ ಏನಿದೆ ಎಂದು ಅವರು ಪ್ರಶ್ನಿಸಿದರು.

ದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಗಡಿ ತಪಾಸಣಾ ಕೇಂದ್ರಗಳನ್ನು (ಬಾರ್ಡರ್ ಚೆಕ್‍ ಪೋಸ್ಟ್) ಈಗಾಗಲೇ ಸಂಪೂರ್ಣವಾಗಿ ತೆಗೆದುಹಾಕಲಾಗಿದೆ. ತೆಲಂಗಾಣದಲ್ಲಿಯೂ 6 ತಿಂಗಳ ಹಿಂದೆ ಹಾಗೂ ಆಂಧ್ರಪ್ರದೇಶದಲ್ಲಿ ಒಂದೂವರೆ ವರ್ಷದ ಹಿಂದೆಯೇ ಚೆಕ್‍ ಪೋಸ್ಟ್‌ ಗಳನ್ನು ಮುಚ್ಚಲಾಗಿದೆ. ಆದರೆ ಕಾಂಗ್ರೆಸ್ ಹಾಗೂ ಟಿವಿಕೆ ಅಧಿಕಾರದಲ್ಲಿರುವ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಮಾತ್ರ ಇನ್ನೂ ಗಡಿ ತಪಾಸಣಾ ಕೇಂದ್ರಗಳನ್ನು ಉಳಿಸಿಕೊಳ್ಳಲಾಗಿದೆ. ಇದನ್ನು ಕೂಡಲೇ ತೆರವುಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.

Tags

Strikes
share
ವಾರ್ತಾಭಾರತಿ
ವಾರ್ತಾಭಾರತಿ
Next Story
X