Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕರ್ನಾಟಕ ಹೈಕೋರ್ಟ್ ಗೆ ಮೇ 5ರಿಂದ...

ಕರ್ನಾಟಕ ಹೈಕೋರ್ಟ್ ಗೆ ಮೇ 5ರಿಂದ 31ರವರೆಗೆ ಬೇಸಿಗೆ ರಜೆ

ಎಂಟು ದಿನ ರಜಾಕಾಲದ ಪೀಠಗಳಿಂದ ವಿಚಾರಣೆ

ವಾರ್ತಾಭಾರತಿವಾರ್ತಾಭಾರತಿ4 May 2025 12:28 PM IST
share
ಕರ್ನಾಟಕ ಹೈಕೋರ್ಟ್ ಗೆ ಮೇ 5ರಿಂದ 31ರವರೆಗೆ ಬೇಸಿಗೆ ರಜೆ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಗೆ ಮೇ 5ರಿಂದ ಮೇ 31ರವರೆಗೆ ಬೇಸಿಗೆ ರಜೆ ಇರಲಿದೆ. ರಜಾ ಅವಧಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿಯಲ್ಲಿ ವಿಭಾಗೀಯ ಮತ್ತು ಏಕಸದಸ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ರಜಾಕಾಲದ ಪೀಠಗಳನ್ನು ರಚಿಸಲಾಗಿದೆ. ರಜಾಕಾಲದ ಪೀಠಗಳು ಮೇ 6, 8, 13, 15, 20, 22, 27 ಮತ್ತು 29ರಂದು ಕಾರ್ಯ ನಿರ್ವಹಿಸಲಿವೆ.

ರಜಾ ಸಂದರ್ಭದಲ್ಲಿ ಎಲ್ಲ ಮೂರು ಪೀಠಗಳಲ್ಲಿ ಒಟ್ಟು 8 ದಿನ ವಿಚಾರಣೆ ನಡೆಯಲಿದೆ. ಬೆಂಗಳೂರು ಮತ್ತು ಧಾರವಾಡ ಪೀಠಗಳಲ್ಲಿ ವಿಚಾರಣೆಯು ಎಂದಿನಂತೆ 10:30ಕ್ಕೆ ಆರಂಭವಾದರೆ, ತಾಪಮಾನ ಹೆಚ್ಚಾಗಿರುವುದರಿಂದ ಕಲಬುರಗಿ ಪೀಠದಲ್ಲಿ ವಿಚಾರಣೆಯು ಬೆಳಿಗ್ಗೆ 8ಕ್ಕೆ ಆರಂಭವಾಗಲಿದೆ. ಈ ಅವಧಿಯಲ್ಲಿ ಕಾರ್ಯ ನಿರ್ವಹಿಸುವ ರಜಾಪೀಠಗಳಿಗೆ ನ್ಯಾಯಮೂರ್ತಿಗಳನ್ನು ನಿಯೋಜಿಸಿ ಸಿಜೆ ಸೂಚನೆ ಮೇರೆಗೆ ರಿಜಿಸ್ಟ್ರಾರ್ ಜನರಲ್ ಆದೇಶ ಹೊರಡಿಸಿದ್ದಾರೆ.

ಪ್ರಧಾನ ಪೀಠದಲ್ಲಿ ಮೇ 6 ಮತ್ತು ಮೇ 8ರಂದು ನ್ಯಾಯಮೂರ್ತಿಗಳಾದ ಆರ್ ದೇವದಾಸ್ ಮತ್ತು ಸಿ.ಎಂ.ಪೂಣಚ್ಚ ನೇತೃತ್ವದ ವಿಭಾಗೀಯ ಪೀಠವು ಕಾರ್ಯ ನಿರ್ವಹಿಸಲಿದೆ. ನ್ಯಾಯಮೂರ್ತಿಗಳಾದ ಎಂ.ಜಿ.ಉಮಾ ಮತ್ತು ವಿ.ಶ್ರೀಶಾನಂದ ನೇತೃತ್ವದ ಏಸಕದಸ್ಯ ಪೀಠಗಳು ರಜಾಕಾಲೀನ ಪೀಠಗಳಾಗಿ ಕರ್ತವ್ಯ ನಿರ್ವಹಿಸಲಿವೆ.

ಧಾರವಾಡ ಪೀಠದಲ್ಲಿ ನ್ಯಾಯಮೂರ್ತಿಗಳಾದ ಎಸ್.ಜಿ.ಪಂಡಿತ್ ಮತ್ತು ಜಿ.ಬಸವರಾಜ ಮೊದಲಿಗೆ ವಿಭಾಗೀಯ ಪೀಠದ ಪ್ರಕರಣಗಳನ್ನು ಆಲಿಸಲಿದ್ದು, ಆನಂತರ ಏಕಸದಸ್ಯ ಪೀಠದಲ್ಲಿ ಕುಳಿತು ಅರ್ಜಿಗಳ ವಿಚಾರಣೆ ನಡೆಸಲಿದ್ದಾರೆ.

ಕಲಬುರಗಿ ಪೀಠದಲ್ಲಿ ನ್ಯಾಯಮೂರ್ತಿಗಳಾದ ಅಶೋಕ್ ಎಸ್. ಕಿಣಗಿ ಮತ್ತು ಎಸ್. ವಿಶ್ವಜಿತ್ ಶೆಟ್ಟಿ ಮೊದಲಿಗೆ ವಿಭಾಗೀಯ ಪೀಠದ ಪ್ರಕರಣಗಳ ವಿಚಾರಣೆ ಮುಗಿಸಿ, ಆನಂತರ ಏಕಸದಸ್ಯ ಪೀಠದಲ್ಲಿ ಕುಳಿತುಕೊಳ್ಳಲಿದ್ದಾರೆ.

ಬೆಂಗಳೂರಿನ ಪ್ರಧಾನ ಪೀಠದಲ್ಲಿ ಮೇ 13 ಮತ್ತು 15ರಂದು ನ್ಯಾಯಮೂರ್ತಿಗಳಾದ ಎಚ್. ಪಿ.ಸಂದೇಶ್ ಮತ್ತು ರಾಮಚಂದ್ರ ಡಿ. ಹುದ್ದಾರ್ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿಗಳಾದ ಶಿವಶಂಕರ್ ಅಮರಣ್ಣವರ್ ಮತ್ತು ಎಂಜಿಎಸ್ ಕಮಲ್ ನೇತೃತ್ವದ ಏಕಸದಸ್ಯ ಪೀಠಗಳು ಅರ್ಜಿಗಳ ವಿಚಾರಣೆ ನಡೆಸಲಿವೆ.

ಧಾರವಾಡ ಪೀಠದಲ್ಲಿ ನ್ಯಾಯಮೂರ್ತಿಗಳಾದ ಎಚ್.ಟಿ.ನರೇಂದ್ರ ಪ್ರಸಾದ್ ಮತ್ತು ಕೆ. ಎಸ್.ಹೇಮಲೇಖಾ ನೇತೃತ್ವದ ವಿಭಾಗೀಯ ಪೀಠವು ಮೊದಲಿಗೆ ವಿಭಾಗೀಯ ಪೀಠದ ಪ್ರಕರಣಗಳನ್ನು ಆಲಿಸಲಿದೆ. ನಂತರ ನ್ಯಾಯಮೂರ್ತಿಗಳು ಪ್ರತ್ಯೇಕವಾಗಿ ಏಕಸದಸ್ಯ ಪೀಠದಲ್ಲಿ ಕುಳಿತು ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ.

ಕಲಬುರಗಿ ಪೀಠದಲ್ಲಿ ಮೇ 13 ಮತ್ತು 15ರಂದು ನ್ಯಾಯಮೂರ್ತಿಗಳಾದ ಇ.ಎಸ್. ಇಂದಿರೇಶ್ ಮತ್ತು ಕೆ.ರಾಜೇಶ್ ರೈ ನೇತೃತ್ವದ ವಿಭಾಗೀಯ ಪೀಠವು ಮೊದಲಿಗೆ ವಿಭಾಗೀಯ ಪೀಠದ ಪ್ರಕರಣಗಳ ವಿಚಾರಣೆ ನಡೆಸಲಿದೆ. ಆನಂತರ ನ್ಯಾಯಮೂರ್ತಿಗಳು ಏಕಸದಸ್ಯ ಪೀಠದಲ್ಲಿ ಕುಳಿತು ವಿಚಾರಣೆ ನಡೆಸಲಿದ್ದಾರೆ.

ಬೆಂಗಳೂರಿನ ಪ್ರಧಾನ ಪೀಠದಲ್ಲಿ ಮೇ 20 ಮತ್ತು 22ರಂದು ನ್ಯಾಯಮೂರ್ತಿಗಳಾದ ಬಿ. ಎಂ.ಶ್ಯಾಮ್ ಪ್ರಸಾದ್ ಮತ್ತು ಕೆ.ವಿ.ಅರವಿಂದ್ ವಿಭಾಗೀಯ ಪೀಠದಲ್ಲಿ ಪ್ರಕರಣಗಳ ವಿಚಾರಣೆ ನಡೆಸಲಿದ್ದು, ನ್ಯಾಯಮೂರ್ತಿಗಳಾದ ಎಸ್.ರಾಚಯ್ಯ ಹಾಗೂ ಸಿ.ಎಂ.ಜೋಶಿ ನೇತೃತ್ವದ ಏಕಸದಸ್ಯ ಪೀಠವು ಕರ್ತವ್ಯ ನಿರ್ವಹಿಸಲಿವೆ.

ಧಾರವಾಡ ಪೀಠದಲ್ಲಿ ನ್ಯಾಯಮೂರ್ತಿಗಳಾದ ರವಿ ವಿ. ಹೊಸಮನಿ ಮತ್ತು ಅನಂತ್ ರಾಮನಾಥ್ ಹೆಗ್ಡೆ ನೇತೃತ್ವದ ವಿಭಾಗೀಯ ಪೀಠವು ಮೊದಲಿಗೆ ಪ್ರಕರಣ ಆಲಿಸಿ, ಆನಂತರ ನ್ಯಾಯಮೂರ್ತಿಗಳು ಏಕಸದಸ್ಯ ಪೀಠದ ಪ್ರಕರಣಗಳನ್ನು ಪ್ರತ್ಯೇಕವಾಗಿ ಆಲಿಸಲಿದ್ದಾರೆ.

ಕಲಬುರಗಿ ಪೀಠದಲ್ಲಿ ನ್ಯಾಯಮೂರ್ತಿಗಳಾದ ಚಿಲ್ಲಕೂರ್ ಸುಮಲತಾ ಮತ್ತು ಟಿ.ಎಂ.ನದಾಫ್ ಅವರು ವಿಭಾಗೀಯ ಪೀಠದ ಪ್ರಕರಣಗಳ ಬಳಿಕ ಏಕಸದಸ್ಯ ಪೀಠ ಅರ್ಜಿಗಳ ವಿಚಾರಣೆ ನಡೆಸಲಿದ್ದಾರೆ.

ಬೆಂಗಳೂರಿನ ಪ್ರಧಾನ ಪೀಠದಲ್ಲಿ ಮೇ 27ರ ಮತ್ತು 29ರಂದು ನ್ಯಾಯಮೂರ್ತಿಗಳಾದ ಮುಹಮ್ಮದ್ ನವಾಝ್ ಮತ್ತು ಟಿ.ವೆಂಕಟೇಶ್ ನಾಯ್ಕ್ ನೇತೃತ್ವದ ವಿಭಾಗೀಯ ಪೀಠ, ನ್ಯಾಯಮೂರ್ತಿಗಳಾದ ಸೂರಜ್ ಗೋವಿಂದರಾಜ್ ಹಾಗೂ ಎಂ.ಐ.ಅರುಣ್ ನೇತೃತ್ವದ ಏಕಸದಸ್ಯ ಪೀಠವುಗಳು ಅರ್ಜಿಗಳ ವಿಚಾರಣೆ ನಡೆಸಲಿವೆ.

ಧಾರವಾಡ ಪೀಠದಲ್ಲಿ ನ್ಯಾಯಮೂರ್ತಿಗಳಾದ ಸಚಿನ್ ಶಂಕರ್ ಮಗದುಮ್ ಮತ್ತು ವಿಜಯಕುಮಾರ್ ಎ. ಪಾಟೀಲ್ ನೇತೃತ್ವದ ವಿಭಾಗೀಯ ಪೀಠವು ಪ್ರಕರಣ ವಿಚಾರಣೆ ನಡೆಸಲಿದೆ. ಬಳಿಕ ನ್ಯಾಯಮೂರ್ತಿಗಳು ಪ್ರತ್ಯೇಕವಾಗಿ ಏಕಸದಸ್ಯ ಪೀಠದ ಪ್ರಕರಣಗಳನ್ನು ಆಲಿಸಲಿದ್ದಾರೆ.

ಕಲಬುರಗಿ ಪೀಠದಲ್ಲಿ ನ್ಯಾಯಮೂರ್ತಿಗಳಾದ ಆರ್.ನಟರಾಜ್ ಮತ್ತು ಉಮೇಶ್ ಎಂ. ಅಡಿಗ ಅವರು ವಿಭಾಗೀಯ ಪೀಠದ ಪ್ರಕರಣಗಳ ಬಳಿಕ ಏಕಸದಸ್ಯ ಪೀಠದಲ್ಲಿ ಕುಳಿತು ಅರ್ಜಿಗಳ ವಿಚಾರಣೆ ನಡೆಸಲಿದ್ದಾರೆ.

ರಜೆ ಅವಧಿಯಲ್ಲಿ ಯಾವುದೇ ಮೇಲ್ಮನವಿ ಹಾಗೂ ಹಳೆಯ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಳ್ಳುವುದಿಲ್ಲ. ಕೇವಲ ತುರ್ತು ಅರ್ಜಿಗಳನ್ನು ಮಾತ್ರ ವಿಚಾರಣೆಗೆ ಪರಿಗಣಿಸಲಾಗುವುದು ಎಂದು ರಿಜಿಸ್ಟ್ರಾರ್ (ಜುಡಿಷಿಯಲ್) ಸರಸ್ವತಿ ವಿಷ್ಣು ಕೋಸಂದರ್ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X