Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರೈಲ್ವೆ ಪರೀಕ್ಷೆ ಕನ್ನಡದಲ್ಲೇ ನಡೆಸಲು...

ರೈಲ್ವೆ ಪರೀಕ್ಷೆ ಕನ್ನಡದಲ್ಲೇ ನಡೆಸಲು ರೈಲ್ವೆ ಇಲಾಖೆಗೆ ಎ.15ರ ವರೆಗೆ ಗಡುವು : ಟಿ.ಎ.ನಾರಾಯಣಗೌಡ

ವಾರ್ತಾಭಾರತಿವಾರ್ತಾಭಾರತಿ18 March 2026 10:40 PM IST
share
ರೈಲ್ವೆ ಪರೀಕ್ಷೆ ಕನ್ನಡದಲ್ಲೇ ನಡೆಸಲು ರೈಲ್ವೆ ಇಲಾಖೆಗೆ ಎ.15ರ ವರೆಗೆ ಗಡುವು : ಟಿ.ಎ.ನಾರಾಯಣಗೌಡ

ಬೆಂಗಳೂರು : ರೈಲ್ವೆ ಇಲಾಖೆಯ ಎಲ್ಲ ಹಂತದ ಹುದ್ದೆಗಳ ಪರೀಕ್ಷೆಗಳು ಕಡ್ಡಾಯವಾಗಿ ಕನ್ನಡದಲ್ಲೂ ನಡೆಸುವ ಕುರಿತು ಎ.15ರ ವರೆಗೆ ಗಡುವು ನೀಡಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡ ಎಚ್ಚರಿಕೆ ನೀಡಿದ್ದಾರೆ.

ಬುಧವಾರ ಈ ಕುರಿತು ಪ್ರಕಟನೆ ನೀಡಿರುವ ಅವರು, ಭಾರತ ರೈಲ್ವೆ ಇಲಾಖೆ ಕರ್ನಾಟಕವನ್ನು ಮಲತಾಯಿ ಧೋರಣೆಯಿಂದ ನೋಡುತ್ತಿದೆ. ಇದಕ್ಕೆ ಅನೇಕ ಸಾಕ್ಷಿಗಳು ಇವೆ. ರೈಲ್ವೆ ಪದೋನ್ನತಿ ಹುದ್ದೆಗಳ ಪರೀಕ್ಷೆ ಸಂದರ್ಭದಲ್ಲಿ ಕನ್ನಡವನ್ನು ಕೈಬಿಟ್ಟು ರೈಲ್ವೆ ಅಧಿಕಾರಿಗಳು ಕರ್ನಾಟಕದಲ್ಲಿ ಏನನ್ನು ಬೇಕಾದರೂ ಮಾಡಿ ದಕ್ಕಿಸಿಕೊಳ್ಳುತ್ತೇವೆ ಎಂಬಂತೆ ವರ್ತಿಸಿದರು. ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಹೋರಾಟವನ್ನು ಸಂಘಟಿಸಿ ಪರೀಕ್ಷೆಗಳನ್ನು ಮುಂದೂಡುವಂತೆ ಮಾಡಿದೆ ಎಂದು ಹೇಳಿದ್ದಾರೆ.

ರೈಲ್ವೆ ಇಲಾಖೆಯಿಂದ ಆಗುತ್ತಿರುವ ಎಲ್ಲ ಅನ್ಯಾಯಗಳ ಕುರಿತು ನಾವು ಧ್ವನಿ ಎತ್ತಬೇಕಿದೆ. ಕನ್ನಡಿಗರು ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ ಎಂದು ಕೇಳಬೇಕಿದೆ. ಸ್ವಾತಂತ್ರ್ಯೋತ್ತರ ಭಾರತದಲ್ಲಿ ಭಾರತೀಯ ರೈಲ್ವೆಯಿಂದ ಕನ್ನಡಿಗರಿಗೆ ಆಗಿರುವ ವಂಚನೆಗಳ ಸರಮಾಲೆಯನ್ನು ಸಾರ್ವಜನಿಕರ ಮುಂದೆ ತೆರೆದು ಇಡಬೇಕಿದೆ. ಈ ದ್ರೋಹ ಈಗಲಾದರೂ ಕೊನೆಗೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

ರೈಲ್ವೆ ಇಲಾಖೆಯ ಕರ್ನಾಟಕ ಭಾಗದ ಎಲ್ಲ ಹಂತದ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ.50ರಷ್ಟು ಮೀಸಲಾತಿ ನೀಡಬೇಕು. ಕರ್ನಾಟಕದಲ್ಲಿ ನೆನೆಗುದಿಗೆ ಬಿದ್ದಿರುವ ಎಲ್ಲ ರೈಲು ಯೋಜನೆಗಳು ಆದಷ್ಟು ಬೇಗ ಜಾರಿಯಾಗಬೇಕು. ಕರ್ನಾಟಕದ ಎಲ್ಲ ರೈಲು ನಿಲ್ದಾಣಗಳಲ್ಲಿ, ರೈಲ್ವೆ ಕಚೇರಿಗಳಲ್ಲಿ ಕನ್ನಡೀಕರಣ ಪ್ರಕ್ರಿಯೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

ನಾಮಫಲಕಗಳು, ಸೂಚನಾ ಫಲಕಗಳಲ್ಲಿ ಕನ್ನಡಕ್ಕೆ ಅಗ್ರಸ್ಥಾನವಿರಬೇಕು. ಕನ್ನಡ ಭಾಷೆಯಲ್ಲಿ ಸಂವಹನಗಳು ನಡೆಯಬೇಕು. ಕರ್ನಾಟಕದ ಎಲ್ಲ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಿ ಮೂಲ ಸೌಕರ್ಯಗಳನ್ನು ಹೆಚ್ಚಿಸಬೇಕು. ಈ ಬೇಡಿಕೆಗಳನ್ನು ಈಡೇರಿಸುವ ಬದ್ಧತೆಯನ್ನು ಕೇಂದ್ರ ಸರಕಾರ ಹಾಗೂ ರೈಲ್ವೆ ಇಲಾಖೆ ಪ್ರದರ್ಶಿಸಬೇಕು ಎಂದು ತಿಳಿಸಿದ್ದಾರೆ.

ಕರ್ನಾಟಕದ ಜನತೆಗೆ ತನ್ನ ಭರವಸೆ ನೀಡಬೇಕು. ಇದಕ್ಕಾಗಿ ಕರ್ನಾಟಕ ರಕ್ಷಣಾ ವೇದಿಕೆ ರೈಲ್ವೆ ಇಲಾಖೆಗೆ ಎ.15ರವರೆಗೆ ಗಡುವು ನೀಡುತ್ತಿದೆ. ಒಂದು ವೇಳೆ ನಮ್ಮ ಬೇಡಿಕೆಗಳ ಕುರಿತು ಅವರು ತಾತ್ಸಾರ ತೋರಿದರೆ, ಪ್ರತಿಕ್ರಿಯೆ ನೀಡದಿದ್ದರೆ ಇಡೀ ಕರ್ನಾಟಕದ ಎಲ್ಲ ಸ್ವರೂಪದ ರೈಲುಗಳನ್ನು, ರೈಲು ನಿಲ್ದಾಣಗಳನ್ನು ಬಂದ್ ಮಾಡಿ ಪ್ರತಿಭಟಿಸುತ್ತೇವೆ. ಕರ್ನಾಟಕದ ಇಡೀ ರೈಲು ವ್ಯವಸ್ಥೆಯನ್ನು ಸಂಪೂರ್ಣ ಸ್ಥಗಿತಗೊಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Tags

T.A. Narayana Gowda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X