Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಥಾವರ್‌ಚಂದ್ ಗೆಹ್ಲೋಟ್‍ಗೆ ರಾಜ್ಯಪಾಲರಾಗಿ...

ಥಾವರ್‌ಚಂದ್ ಗೆಹ್ಲೋಟ್‍ಗೆ ರಾಜ್ಯಪಾಲರಾಗಿ ಉಳಿಯುವ ನೈತಿಕತೆ ಇಲ್ಲ : ಟಿ.ಎ.ನಾರಾಯಣಗೌಡ

ಫ್ರೀಡಂ ಪಾರ್ಕ್‍ನಲ್ಲಿ ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ6 April 2026 9:11 PM IST
share
ಥಾವರ್‌ಚಂದ್ ಗೆಹ್ಲೋಟ್‍ಗೆ ರಾಜ್ಯಪಾಲರಾಗಿ ಉಳಿಯುವ ನೈತಿಕತೆ ಇಲ್ಲ : ಟಿ.ಎ.ನಾರಾಯಣಗೌಡ

ಬೆಂಗಳೂರು : ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅವರು ತಮ್ಮ ಕಾರ್ಯವ್ಯಾಪ್ತಿಯನ್ನು ಮೀರಿ ಕನ್ನಡಿಗರ ಆಶೋತ್ತರಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಹೀಗಾಗಿ ಅವರು ಕರ್ನಾಟಕದಲ್ಲಿ ಒಂದೇ ಒಂದು ನಿಮಿಷವೂ ರಾಜ್ಯಪಾಲರಾಗಿ ಉಳಿಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಖಂಡಿಸಿದ್ದಾರೆ.

ಸೋಮವಾರ ಇಲ್ಲಿನ ಫ್ರೀಡಂ ಪಾರ್ಕ್‍ನಲ್ಲಿ ಹಿಂದಿ ಹೇರಿಕೆ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರವು ಎಸೆಸೆಲ್ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ ಜಾರಿ ಮಾಡಿದೆ. ಈ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಹಿಂದೆ ಕರ್ನಾಟಕದಲ್ಲಿ ಹಿಂದಿಹೇರಿಕೆಯನ್ನು ಶಾಶ್ವತವಾಗಿ ನಡೆಸುವ ಹುನ್ನಾರವಿದೆ. ಹೀಗಾಗಿ ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ಹೊಂದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ರಾಜ್ಯಪಾಲರು ರಾಜ್ಯದ ದಿನನಿತ್ಯದ ಆಡಳಿತದಲ್ಲಿ ಮೂಗು ತೂರಿಸುವುದು ಅತ್ಯಂತ ಆಕ್ಷೇಪಾರ್ಹವಾದ ಬೆಳವಣಿಗೆಯಾಗಿದೆ. ರಾಜ್ಯ ಸರಕಾರವನ್ನು ಕರ್ನಾಟಕದ ಜನತೆ ಆಯ್ಕೆ ಮಾಡಿದ್ದಾರೆ. ನಾಡಿನ ಜನರ ಬೇಕು, ಬೇಡಗಳನ್ನು ರಾಜ್ಯ ಸರಕಾರ ತೀರ್ಮಾನಿಸುತ್ತದೆ. ಹೀಗಿರುವಾಗ ಸರಕಾರದ ಮುಖ್ಯಸ್ಥರಾಗಿ ನಾಡಪರ ಕಾಳಜಿಯ ನಿರ್ಧಾರಗಳನ್ನು ಬೆಂಬಲಿಸುವುದು ಅವರ ಕರ್ತವ್ಯವಾಗಿರುತ್ತದೆ. ಆದರೆ ಅವರು ಹಿಂದಿ ಮಾಫಿಯಾ ಪರವಾಗಿ ಕಾರ್ಯ ನಿರ್ವಹಿಸುತ್ತಿರುವಂತೆ ತೋರುತ್ತದೆ ಎಂದು ಹೇಳಿದರು.

‘ಬೆಂಗಳೂರು ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘ’ ಎಂಬ ಅನಾಮಧೇಯ ಸಂಘಟನೆಯ ಮನವಿಗೆ ರಾಜ್ಯಪಾಲರು ತುರ್ತಾಗಿ ಪ್ರತಿಕ್ರಿಯಿಸಿ, ರಾಜ್ಯ ಸರಕಾರಕ್ಕೆ ಪತ್ರ ಬರೆದಿರುವುದೇ ಒಂದು ದೊಡ್ಡ ದುಷ್ಟ ಹುನ್ನಾರವಾಗಿದೆ. ಕರ್ನಾಟಕವನ್ನು ವಲಸೆ ಬರುತ್ತಿರುವ ಹಿಂದಿಭಾಷಿಕರಿಗಾಗಿ ‘ಸುರಕ್ಷಿತ ಸ್ವರ್ಗ’ವನ್ನಾಗಿಸುವ ದೂರಗಾಮಿ ಉದ್ದೇಶಗಳು ಹಿಂದಿ ಮಾಫಿಯಾಗೆ ಇದೆ. ಅದರ ಭಾಗವಾಗಿಯೇ ರಾಜ್ಯಪಾಲರು ಈ ಪತ್ರ ಬರೆದಿದ್ದಾರೆ ಎಂದು ಟಿ.ಎ.ನಾರಾಯಣಗೌಡ ಹೇಳಿದರು.

ರಾಜ್ಯ ಸರಕಾರವು ಕರ್ನಾಟಕದ ಶಿಕ್ಷಣ ನೀತಿಯನ್ನು ತೀರ್ಮಾನಿಸುತ್ತದೆ. ರಾಜ್ಯ ಸರಕಾರವನ್ನು ಇದಕ್ಕಾಗಿಯೇ ನಾವು ಆಯ್ಕೆ ಮಾಡಿ ಕಳಿಸಿದ್ದೇವೆ. ಇದನ್ನು ಪ್ರಶ್ನಿಸಲು ರಾಜ್ಯಪಾಲರು ಯಾರು? ಸಂವಿಧಾನ ಅವರಿಗೆ ಈ ಅವಕಾಶ ನೀಡಿಲ್ಲ. ಹಿಂದಿ ಮಾಫಿಯಾ ಎಷ್ಟು ಬಲಶಾಲಿಯಾಗಿದೆ ಎಂಬುದು ಇದರಿಂದ ಗೊತ್ತಾಗುತ್ತಿದೆ. ಹುತ್ತದ ಒಳಗೆ ಇನ್ನೆಷ್ಟು ಹಾವುಗಳು ಇವೆಯೋ ಗೊತ್ತಿಲ್ಲ. ಎಲ್ಲವೂ ಹೊರಬರಲಿ ಎಂದು ನಾವು ಕಾಯುತ್ತಿದ್ದೇವೆ ಎಂದು ಅವರು ಹೇಳಿದರು.

ರಾಜ್ಯಪಾಲರ ಈ ಪತ್ರವನ್ನು ರಾಜ್ಯ ಸರಕಾರ ಕಸದ ಬುಟ್ಟಿಗೆ ಎಸೆಯಬೇಕು. ಕನ್ನಡಿಗರ ಹಿತದೃಷ್ಟಿಗೆ ವಿರುದ್ಧವಾಗಿ ಯಾರೇ ಏನೇ ಹೇಳಿದರೂ ಅದನ್ನು ರಾಜ್ಯ ಸರಕಾರ ಪರಿಗಣಿಸಬೇಕಿಲ್ಲ. ನಾವು ಹಿಂದೆ ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ಧ ಹೋರಾಡಿದ್ದೆವು. ಈಗ ಹಿಂದಿ ಸಾಮ್ರಾಜ್ಯಶಾಹಿ ನಮ್ಮನ್ನು ಆಳಲು ಯತ್ನಿಸುತ್ತಿದೆ. ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ. ನಮ್ಮ ಪ್ರಾಣ ಹೋದರೂ ನಮ್ಮ ನೆಲದ ಅಸ್ಮಿತೆಯನ್ನು ಉಳಿಸಿಕೊಳ್ಳುತ್ತೇವೆ ಎಂದು ಅವರು ತಿಳಿಸಿದರು. ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

‘ಸರಕಾರವು ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ ನೀಡುವ ನಿರ್ಧಾರ ಕೈಗೊಂಡಿದ್ದು, ಯಾರೇ ಇದನ್ನು ಬದಲಿಸುವ ಪ್ರಯತ್ನ ಮಾಡಿದರೂ ರಕ್ತಕ್ರಾಂತಿಯಾಗುತ್ತದೆ. ರಾಜ್ಯಪಾಲ ಗೆಹ್ಲೋಟ್ ಹಿಂದಿ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಲ್ಲೆಲ್ಲಾ ತೃತೀಯ ಭಾಷೆಯಾಗಿ ಕನ್ನಡ ಕಲಿಸಲು ತಾಕೀತು ಮಾಡಲಿ. ಅಷ್ಟೇಕೆ ಅವರ ಸ್ವಂತ ರಾಜ್ಯವಾದ ಮಧ್ಯಪ್ರದೇಶದಲ್ಲಿ ಈಗಲೂ ಎರಡೇ ಭಾಷೆಗಳನ್ನು ಕಲಿಸಲಾಗುತ್ತಿದೆ. ಮೂರನೇ ಭಾಷೆಯನ್ನಾಗಿ ಕಡ್ಡಾಯವಾಗಿ ಕನ್ನಡ ಕಲಿಸುವಂತೆ ಅಲ್ಲಿನ ಸರಕಾರದ ಮೇಲೆ ಅವರು ಒತ್ತಡ ಹೇರಲಿ. ಅದು ಸಾಧ್ಯವಿಲ್ಲದಿದ್ದರೆ ಕನ್ನಡಿಗರ ಮೇಲೆ ಯಾಕೆ ಹಿಂದಿ ಹೇರಲು ಯತ್ನಿಸುತ್ತಾರೆ. ಇಂಥ ನಾಡದ್ರೋಹಿ ರಾಜ್ಯಪಾಲ ಕರ್ನಾಟಕದಲ್ಲಿ ಇರಲು ಯೋಗ್ಯರಲ್ಲ’

-ಟಿ.ಎ.ನಾರಾಯಣಗೌಡ, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ

Tags

T.A. Narayana Gowda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X