Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪ್ರತಿಭಾವಂತ ವಿದ್ಯಾರ್ಥಿಗಳು ಉದ್ಯೋಗ...

ಪ್ರತಿಭಾವಂತ ವಿದ್ಯಾರ್ಥಿಗಳು ಉದ್ಯೋಗ ಹುಡುಕುವವರಲ್ಲ, ಉದ್ಯೋಗ ಸೃಷ್ಟಿಸುವವರಾಗಬೇಕು: ಸಿಎಂ ಡಿ.ಕೆ.ಶಿವಕುಮಾರ್

‘ವಿದೇಶದಲ್ಲಿ ಅಧ್ಯಯನ–2026’ ಕಾರ್ಯಕ್ರಮಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ6 Sept 2026 2:54 PM IST
share
ಪ್ರತಿಭಾವಂತ ವಿದ್ಯಾರ್ಥಿಗಳು ಉದ್ಯೋಗ ಹುಡುಕುವವರಲ್ಲ, ಉದ್ಯೋಗ ಸೃಷ್ಟಿಸುವವರಾಗಬೇಕು: ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಕರ್ನಾಟಕದ ಪ್ರತಿಭಾವಂತ ವಿದ್ಯಾರ್ಥಿಗಳು ಕೇವಲ ಉದ್ಯೋಗಿಗಳಾಗುವುದಲ್ಲ, ಉದ್ಯೋಗ ಸೃಷ್ಟಿಸುವ ಉದ್ಯೋಗದಾತರಾಗಬೇಕು ಎಂಬುದು ರಾಜ್ಯ ಸರ್ಕಾರದ ಆಶಯ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ‘ವಿದೇಶದಲ್ಲಿ ಅಧ್ಯಯನ–2026’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ ದೇಶದ ಇತರೆ ಯಾವುದೇ ರಾಜ್ಯಕ್ಕಿಂತ ಹೆಚ್ಚಿನ ಪ್ರತಿಭಾವಂತ ಮಾನವ ಸಂಪನ್ಮೂಲವಿದೆ. ಆ ಪ್ರತಿಭೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ಸರ್ಕಾರ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ಹೊಸ ಅವಕಾಶಗಳನ್ನು ಕಲ್ಪಿಸುತ್ತಿದೆ ಎಂದು ಹೇಳಿದರು.

ಜ್ಞಾನವೇ ಜೀವನದ ಅತ್ಯಮೂಲ್ಯ ಆಸ್ತಿ. ಅದನ್ನು ಯಾರೂ ಕಸಿಯಲು ಸಾಧ್ಯವಿಲ್ಲ. ವಿದೇಶದಲ್ಲಿ ಶಿಕ್ಷಣ ಪಡೆಯುವುದರಿಂದ ವಿದ್ಯಾರ್ಥಿಗಳು ಜಾಗತಿಕ ದೃಷ್ಟಿಕೋನ ಹಾಗೂ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

80ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳ ಭಾಗವಹಿಸುವಿಕೆ :

‘ವಿದೇಶದಲ್ಲಿ ಅಧ್ಯಯನ–2026’ ಕಾರ್ಯಕ್ರಮದಲ್ಲಿ 80ಕ್ಕೂ ಹೆಚ್ಚು ಅಂತರರಾಷ್ಟ್ರೀಯ ವಿಶ್ವವಿದ್ಯಾಲಯಗಳು ಭಾಗವಹಿಸಿದ್ದು, 300ಕ್ಕೂ ಹೆಚ್ಚು ಕೋರ್ಸ್‌ಗಳಲ್ಲಿ ಅಧ್ಯಯನಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿವಿಧ ಸರ್ಕಾರಿ ಇಲಾಖೆಗಳ ವಿದ್ಯಾರ್ಥಿವೇತನಗಳ ಜೊತೆಗೆ ಬ್ಯಾಂಕುಗಳಿಂದ 2 ಕೋಟಿ ರೂ. ವರೆಗೆ ಶಿಕ್ಷಣ ಸಾಲ ಸೌಲಭ್ಯವೂ ಲಭ್ಯವಿದೆ ಎಂದು ಹೇಳಿದರು.

ಕ್ವೀನ್ಸ್‌ಲ್ಯಾಂಡ್ ವಿಶ್ವವಿದ್ಯಾಲಯ ಸೇರಿದಂತೆ ಹಲವು ವಿದೇಶಿ ಶಿಕ್ಷಣ ಸಂಸ್ಥೆಗಳೊಂದಿಗೆ ರಾಜ್ಯ ಸರ್ಕಾರ ಒಡಂಬಡಿಕೆ ಮಾಡಿಕೊಂಡಿದ್ದು, ಈಗಾಗಲೇ 3,145 ವಿದ್ಯಾರ್ಥಿಗಳನ್ನು ವಿದೇಶದಲ್ಲಿ ವ್ಯಾಸಂಗಕ್ಕೆ ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ಜಾಗತಿಕ ಶಿಕ್ಷಣ ಮತ್ತು ಐಟಿ ಕೇಂದ್ರ :

ಬೆಂಗಳೂರು ಜಾಗತಿಕ ನಗರವಾಗಿದ್ದು, ಇಲ್ಲಿ ಸುಮಾರು 26 ಲಕ್ಷ ಐಟಿ ವೃತ್ತಿಪರರು ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರತಿ ವರ್ಷ ಒಂದು ಲಕ್ಷಕ್ಕೂ ಹೆಚ್ಚು ಇಂಜಿನಿಯರ್‌ಗಳು ಹಾಗೂ ಸುಮಾರು 13,940 ವೈದ್ಯರು ರಾಜ್ಯದಿಂದ ಹೊರಬರುತ್ತಿದ್ದಾರೆ. ಇಂತಹ ಮಾನವ ಸಂಪನ್ಮೂಲವನ್ನು ದೇಶದ ಬೇರೆ ಯಾವುದೇ ರಾಜ್ಯ ಸೃಷ್ಟಿಸುತ್ತಿಲ್ಲ ಎಂದು ಸಿಎಂ ಹೇಳಿದರು.

ಶಿಕ್ಷಕರಿಗೆ ‘Tr.’ ಬಿರುದು :

ರಾಜ್ಯ ಸರ್ಕಾರ ಶಿಕ್ಷಕರಿಗೆ ಗೌರವ ಸೂಚಿಸುವ ಉದ್ದೇಶದಿಂದ ಇನ್ನುಮುಂದೆ ಶಾಲಾ ಶಿಕ್ಷಕರು ತಮ್ಮ ಹೆಸರಿನ ಮುಂದೆ ‘Tr.’ (Teacher) ಎಂದು ಬಳಸಲು ಅವಕಾಶ ನೀಡಿದೆ. ಈ ನಿರ್ಧಾರಕ್ಕೆ ರಾಜ್ಯದ ಶಿಕ್ಷಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿದ್ಯಾರ್ಥಿಗಳು ತಮ್ಮ ಪೋಷಕರು, ಶಿಕ್ಷಕರು ಹಾಗೂ ತಮ್ಮ ಸಂಸ್ಕೃತಿ-ಮೂಲಗಳನ್ನು ಎಂದಿಗೂ ಮರೆಯಬಾರದು. ನಿಮ್ಮ ಭವಿಷ್ಯವೇ ರಾಜ್ಯದ ಹಾಗೂ ದೇಶದ ಭವಿಷ್ಯವಾಗಿದೆ ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

Tags

D.K.Shivakumarstudents
share
ವಾರ್ತಾಭಾರತಿ
ವಾರ್ತಾಭಾರತಿ
Next Story
X