Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಉದ್ಯಾನವನಗಳು ರಿಯಲ್ ಎಸ್ಟೇಟ್ ದಂಧೆಗೆ...

ಉದ್ಯಾನವನಗಳು ರಿಯಲ್ ಎಸ್ಟೇಟ್ ದಂಧೆಗೆ ಬಲಿಯಾಗಲು ಬಿಡುವುದಿಲ್ಲ : ತೇಜಸ್ವಿ ಸೂರ್ಯ

ವಾರ್ತಾಭಾರತಿವಾರ್ತಾಭಾರತಿ23 Aug 2026 7:35 PM IST
share
ಉದ್ಯಾನವನಗಳು ರಿಯಲ್ ಎಸ್ಟೇಟ್ ದಂಧೆಗೆ ಬಲಿಯಾಗಲು ಬಿಡುವುದಿಲ್ಲ : ತೇಜಸ್ವಿ ಸೂರ್ಯ

ಬೆಂಗಳೂರು : ‘ಹಸಿರು ಉದ್ಯಾನವನಗಳು ಮಾರಾಟಕ್ಕಿಲ್ಲ, ಅವು ನಮ್ಮ ಹಕ್ಕು, ರಿಯಲ್ ಎಸ್ಟೇಟ್ ದಂಧೆಗೆ ಬಲಿಯಾಗಲು ಬಿಡುವ ಪ್ರಶ್ನೆಯೇ ಇಲ್ಲ. ರಾಜ್ಯ ಸರಕಾರದ ವಕ್ರದೃಷ್ಟಿ ಉದ್ಯಾನವನಗಳ ಮೇಲೆ ಬಿದ್ದಿದೆ. ಬೆಂಗಳೂರಿನ ಭವಿಷ್ಯದ ಮೇಲೆ ಕಲ್ಲು ಹಾಕಲು ಅವಕಾಶ ನೀಡಬಾರದು’ ಎಂದು ಸಂಸದ ತೇಜಸ್ವಿ ಸೂರ್ಯ ಮನವಿ ಮಾಡಿದ್ದಾರೆ.

ರವಿವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ‘ರಾಜ್ಯ ಸರಕಾರ ಸಾರ್ವಜನಿಕ ಉದ್ಯಾನವನಗಳ ಜಾಗವನ್ನು ಇತರೆ ಉದ್ದೇಶಗಳಿಗೆ ಬಳಸಲು ಕಾನೂನು ಬದಲಿಸುವ ನಿರ್ಧಾರ ಕೈಗೊಂಡಿರುವುದು ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಹಸಿರು ಹತ್ಯೆಗೆ ಮುನ್ನುಡಿ. ಇಂದು ಶೇ.5ರಷ್ಟು ಉದ್ಯಾನವನದ ಜಾಗ ಎನ್ನುತ್ತಾರೆ. ನಾಳೆ ಶೇ.10ರಷ್ಟು? ನಾಡಿದ್ದು ಸಂಪೂರ್ಣ ಉದ್ಯಾನವನವೇ?. ಒಮ್ಮೆ ಕಾಂಕ್ರಿಟ್ ಬಂದ ಮೇಲೆ ಮರಳಿ ಮರ ನೆಡಲು ಸಾಧ್ಯವಿಲ್ಲ’ ಎಂದು ಎಚ್ಚರಿಸಿದ್ದಾರೆ.

‘ಕೆಂಪೇಗೌಡರು ದೂರದೃಷ್ಟಿಯಿಂದ ಕಟ್ಟಿದ ಬೆಂಗಳೂರನ್ನು ಮುಂದಿನ ಪೀಳಿಗೆಗೆ ಕಾಂಕ್ರೀಟ್ ಕಾಡಾಗಿ ಹಸ್ತಾಂತರಿಸುವ ಯಾವುದೇ ಪ್ರಯತ್ನವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಇದು ಕೇವಲ ಉದ್ಯಾನವನದ ಜಾಗದ ಪ್ರಶ್ನೆಯಲ್ಲ. ಇದು ಬೆಂಗಳೂರಿನ ಗಾಳಿ, ನೀರು, ಪರಿಸರ ಮತ್ತು ಭವಿಷ್ಯದ ಪ್ರಶ್ನೆ. ಆದುದರಿಂದ ಎಲ್ಲ ಸಂಸದರು ಮತ್ತು ಶಾಸಕರಿಗೆ ನನ್ನ ಸ್ಪಷ್ಟ ಮನವಿ, ಪಕ್ಷಬೇಧ ಮರೆತು, ಸರಕಾರದ ಅಪಾಯಕಾರಿ ನಿರ್ಧಾರದ ವಿರುದ್ಧ ಒಗ್ಗಟ್ಟಾಗಿ ಧ್ವನಿ ಎತ್ತಲೇಬೇಕಾದ ಅನಿವಾರ್ಯತೆ ಇದೆ’ ಎಂದು ಅವರು ಹೇಳಿದ್ದಾರೆ.

‘ಸರಕಾರ ಬದಲಾಗಬಹುದು. ಆದರೆ ಒಮ್ಮೆ ಉದ್ಯಾನವನ ಹೋದರೆ, ಅದನ್ನು ಮರಳಿ ತರುವ ಅವಕಾಶವೇ ಇರುವುದಿಲ್ಲ. ಬೆಂಗಳೂರನ್ನು ರಿಯಲ್ ಎಸ್ಟೇಟ್ ರಣಹದ್ದುಗಳಿಗೆ ಬಲಿಕೊಡಲು ಬಿಡಬಾರದು. ಈ ಹೋರಾಟ ಯಾರದ್ದೋ ವಿರುದ್ಧವಲ್ಲ, ಬೆಂಗಳೂರಿನ ವಿನಾಶದ ವಿರುದ್ಧ. ಸರ್ ಎಂ.ವಿಶ್ವೇಶ್ವರಯ್ಯ ಹಾಗೂ ಕೆಂಪೇಗೌಡರಂತಹ ದೂರದೃಷ್ಟಿಯುಳ್ಳವರು ಕಟ್ಟಿದ ಈ ನಗರವನ್ನು ಮುಂದಿನ ಪೀಳಿಗೆಗೆ ಸುರಕ್ಷಿತವಾಗಿ ಹಸ್ತಾಂತರಿಸುವುದು ಪ್ರತಿಯೊಬ್ಬ ಜನಪ್ರತಿನಿಧಿಯ ಮತ್ತು ನಾಗರಿಕನ ನೈತಿಕ ಕರ್ತವ್ಯ ಎಂದು ಅವರು ಹೇಳಿದ್ದಾರೆ.

‘ಈಗಲೇ ನಾವು ಎಚ್ಚೆತ್ತುಕೊಳ್ಳದಿದ್ದರೆ, ಒಂದೊಂದೇ ಹಸಿರು ಪ್ರದೇಶಗಳನ್ನು ಕಳೆದುಕೊಳ್ಳಬೇಕಾಗುತ್ತದೆ. ಇವೆಲ್ಲವನ್ನೂ ಉಳಿಸುವ ನೈತಿಕ ಜವಾಬ್ದಾರಿ ಕೂಡ ನಮ್ಮದೇ ಆಗಿರುವುದರಿಂದ, ಸರಕಾರದ ನಿರ್ಧಾರವನ್ನು ವಿರೋಧಿಸುವಂತೆ ಎಲ್ಲ ಶಾಸಕರು, ಸಂಸದರು, ರಾಜ್ಯಸಭಾ ಸದಸ್ಯರು ಮತ್ತು ಸಚಿವರನ್ನು ನಾನು ಒತ್ತಾಯಿಸುತ್ತೇನೆ’ ಎಂದು ಅವರು ತಿಳಿಸಿದ್ದಾರೆ.

ಹಸಿರು ಉದ್ಯಾನವನಗಳು ಮಾರಾಟಕ್ಕಿಲ್ಲ, ಅವು ನಮ್ಮ ಹಕ್ಕು, ರಿಯಲ್ ಎಸ್ಟೇಟ್ ದಂಧೆಗೆ ಬಲಿಯಾಗಲು ಬಿಡುವ ಪ್ರಶ್ನೆಯೇ ಇಲ್ಲ.

ರಾಜ್ಯ ಸರ್ಕಾರದ ವಕ್ರದೃಷ್ಟಿ ಉದ್ಯಾನವನಗಳ ಮೇಲೆ ಬಿದ್ದಿದೆ. ಬೆಂಗಳೂರಿನ ಭವಿಷ್ಯದ ಮೇಲೆ ಕಲ್ಲು ಹಾಕಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು.

ರಾಜ್ಯ ಸರ್ಕಾರ ಸಾರ್ವಜನಿಕ ಉದ್ಯಾನವನಗಳ ಜಾಗವನ್ನು ಇತರೆ ಉದ್ದೇಶಗಳಿಗೆ… pic.twitter.com/xXUcvNOvnL

— Tejasvi Surya (@Tejasvi_Surya) August 23, 2026

Tags

Tejasvi Surya
share
ವಾರ್ತಾಭಾರತಿ
ವಾರ್ತಾಭಾರತಿ
Next Story
X