Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಆಡಳಿತದ ಪಾರದರ್ಶಕತೆಗೆ ಮಾಹಿತಿ...

ಆಡಳಿತದ ಪಾರದರ್ಶಕತೆಗೆ ಮಾಹಿತಿ ತಂತ್ರಜ್ಞಾನವೇ ಪ್ರಮುಖ ಸಾಧನ: ಥಾವರ್‌ ಚಂದ್ ಗೆಹ್ಲೋಟ್

ವಾರ್ತಾಭಾರತಿವಾರ್ತಾಭಾರತಿ14 Oct 2025 9:47 PM IST
share
ಆಡಳಿತದ ಪಾರದರ್ಶಕತೆಗೆ ಮಾಹಿತಿ ತಂತ್ರಜ್ಞಾನವೇ ಪ್ರಮುಖ ಸಾಧನ: ಥಾವರ್‌ ಚಂದ್ ಗೆಹ್ಲೋಟ್

ಬೆಂಗಳೂರು, ಅ. 14 : ಆಡಳಿತದ ಎಲ್ಲ ಹಂತಗಳಲ್ಲಿ ಮಾಹಿತಿ ತಂತ್ರಜ್ಞಾನದ ಬಳಕೆಯನ್ನು ಹೆಚ್ಚಿಸಿ ಇದರಿಂದ ಪಾರದರ್ಶಕತೆ ಸ್ವಯಂ ಚಾಲಿತವಾಗಿ ಸ್ಥಾಪನೆಯಾಗುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಲಹೆ ನೀಡಿದರು.

ಮಂಗಳವಾರ ನಗರದಲ್ಲಿ ನಡೆದ ‘ಮಾಹಿತಿ ಹಕ್ಕು ಅಧಿನಿಯಮ’ಕ್ಕೆ 20 ವರ್ಷಗಳ ಪೂರೈಕೆ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಾಹಿತಿ ಹಕ್ಕು ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸುವುದು, ಸರಳಗೊಳಿಸುವುದು, ಮಾಹಿತಿ ಆಯೋಗಗಳ ಸ್ವಾತಂತ್ರ್ಯ ಮತ್ತು ಸಾಮಥ್ರ್ಯವನ್ನು ಹೆಚ್ಚಿಸುವುದು, ಎಲ್ಲಕ್ಕಿಂತ ಹೆಚ್ಚಾಗಿ ಆಡಳಿತದಲ್ಲಿ ಪಾರದರ್ಶಕತೆಯನ್ನು ಕಾನೂನು ಬಾಧ್ಯತೆಯನ್ನಾಗಿ ಮಾಡದೆ ನೈತಿಕ ಸಂಸ್ಕೃತಿಯನ್ನಾಗಿ ಮಾಡುವುದು ಇಂದಿನ ಅಗತ್ಯವಾಗಿದೆ ಎಂದರು.

ಮಾಹಿತಿ ಹಕ್ಕು ಕಾಯ್ದೆಯು ಕೆಲವು ಸವಾಲುಗಳನ್ನು ಎದುರಿಸುತ್ತಿದೆ. ಕಾಯ್ದೆಯ ದುರುಪಯೋಗ, ಕಚೇರಿಗಳ ಮೇಲೆ ಹೆಚ್ಚುತ್ತಿರುವ ಹೊರೆ ಮತ್ತು ಸಾರ್ವಜನಿಕ ಅರಿವಿನ ಕೊರತೆ. ನಾವು ಮಾಹಿತಿ ಹಕ್ಕು ಕಾಯ್ದೆಯ ಶಕ್ತಿಯನ್ನು ಅರ್ಥಮಾಡಿಕೊಳ್ಳಬೇಕು, ಅದರ ದುರುಪಯೋಗವನ್ನು ತಡೆಯಬೇಕು ಮತ್ತು ಈ ಹಕ್ಕು ಪ್ರತಿಯೊಬ್ಬ ನಾಗರಿಕರಿಗೂ ಪರಿಣಾಮಕಾರಿಯಾಗಿ ತಲುಪುವಂತೆ ನೋಡಿಕೊಳ್ಳಬೇಕು ಎಂದು ಥಾವರ್ ಚಂದ್ ಗೆಹ್ಲೋಟ್ ಕರೆ ನೀಡಿದರು.

ಆಡಳಿತದ ಎಲ್ಲ ಹಂತಗಳಲ್ಲಿ ಮಾಹಿತಿ ತಂತ್ರಜ್ಞಾನದ ಬಳಕೆಯನ್ನು ಹೆಚ್ಚಿಸುವುದರಿಂದ ಪಾರದರ್ಶಕತೆಯ ಜೊತೆಗೆ ಸಾರ್ವಜನಿಕ ಜಾಗೃತಿಯನ್ನು ಮತ್ತಷ್ಟು ಬಲಪಡಿಸುತ್ತದೆ. ಇದರಿಂದ ಪ್ರತಿಯೊಬ್ಬ ನಾಗರಿಕನು ‘ಮಾಹಿತಿ ಹಕ್ಕು’ ತನ್ನ ಹಕ್ಕು ಎಂದು ತಿಳಿಯುತ್ತಾನೆ. ಮಾಹಿತಿ ಹಕ್ಕು ಕಾಯ್ದೆ, 2005' ಪ್ರಜಾಪ್ರಭುತ್ವದ ಚೈತನ್ಯವನ್ನೇ ಸಬಲಗೊಳಿಸುವ ಸರಕಾರ ಮತ್ತು ನಾಗರಿಕರ ನಡುವೆ ಹೊಣೆಗಾರಿಕೆ, ಪಾರದರ್ಶಕತೆ, ನಂಬಿಕೆಗೆ ಅಡಿಪಾಯ ಹಾಕುವ ಜನರ ಹಕ್ಕಾಗಿದೆ ಎಂದು ಅವರು ತಿಳಿಸಿದರು.

ಆರ್‍ಟಿಐ ಕಾಯ್ದೆಯು ಪ್ರಜಾಪ್ರಭುತ್ವವನ್ನು ಬಲಪಡಿಸುವಂತಹ ಕಾನೂನು ನಿಬಂಧನೆ ಮತ್ತು ಅಡಿಪಾಯ ಎರಡೂ ಆಗಿದೆ. ಇದು ನಾಗರಿಕರು ಮತ್ತು ಸರಕಾರದ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ.

ಪ್ರಜಾಪ್ರಭುತ್ವದ ನಿಜವಾದ ಶಕ್ತಿ ಜನರಲ್ಲಿದೆ. ಸಾರ್ವಜನಿಕರು ಜಾಗೃತರಾಗಿದ್ದರೆ, ಆಡಳಿತವು ಸ್ವಯಂಚಾಲಿತವಾಗಿ ಜವಾಬ್ದಾರಿಯುತವಾಗುತ್ತದೆ. ಮುಂಬರುವ ದಿನಗಳಲ್ಲಿ ಈ ಹಕ್ಕನ್ನು ಮತ್ತಷ್ಟು ಬಲಪಡಿಸುವುದು ಹೇಗೆ ಎಂಬುದರ ಕುರಿತು ಚಿಂತನಶೀಲ ಸಭೆ ನಡೆಸುವ ಅವಶ್ಯಕತೆಯಿದೆ ಎಂದು ಥಾವರ್ ಚಂದ್ ಗೆಹ್ಲೋಟ್ ಹೇಳಿದರು.

ಕಾರ್ಯಕ್ರಮದಲ್ಲಿ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರಾದ ಕೆ.ರಾಮನ್, ಎಸ್. ರಾಜಶೇಖರ, ಡಾ.ಹರೀಶ್ ಕುಮಾರ್, ಕೆ.ಬದ್ರುದ್ದೀನ್, ನಾರಾಯಣ ಜಿ.ಚನ್ನಾಳ್, ರುದ್ರಣ್ಣ ಹರ್ತಿಕೋಟೆ, ಡಾ.ಬಿ.ಆರ್.ಮಮತಾ ಹಾಗೂ ಆಯೋಗದ ಕಾರ್ಯದರ್ಶಿ ಸುಷ್ಮಾ ಗೋಡಬೋಲೆ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X