Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅಕ್ರಮವಾಗಿ ಅಧಿಕಾರಕ್ಕೆ ಬಂದು...

ಅಕ್ರಮವಾಗಿ ಅಧಿಕಾರಕ್ಕೆ ಬಂದು ಅನೈತಿಕವಾಗಿ ರಾಜ್ಯಭಾರ ಮಾಡುತ್ತಿರುವ ಕೇಂದ್ರ ಸರ್ಕಾರದ ಗೂಂಡಾಗಿರಿ ಮಿತಿ ಮೀರಿದೆ: ಶಿವರಾಜ ಎಸ್. ತಂಗಡಗಿ

"ಮೋ-ಶಾ ಜೋಡಿಗೆ ಅಧಿಕಾರ ಕಳೆದುಕೊಳ್ಳುವ ಭಯ ಶುರುವಾಗಿದೆ"

ವಾರ್ತಾಭಾರತಿವಾರ್ತಾಭಾರತಿ7 Oct 2026 3:34 PM IST
share
ಅಕ್ರಮವಾಗಿ ಅಧಿಕಾರಕ್ಕೆ ಬಂದು ಅನೈತಿಕವಾಗಿ ರಾಜ್ಯಭಾರ ಮಾಡುತ್ತಿರುವ ಕೇಂದ್ರ ಸರ್ಕಾರದ ಗೂಂಡಾಗಿರಿ ಮಿತಿ ಮೀರಿದೆ: ಶಿವರಾಜ ಎಸ್. ತಂಗಡಗಿ

ಬೆಂಗಳೂರು: ಮತದಾರರ ಹಕ್ಕು ಮತ್ತು ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆಗಾಗಿ ಆಗ್ರಹಿಸಿದ ರಾಹುಲ್ ಗಾಂಧಿ ಅವರ ಬಂಧನ ಹಾಗೂ ದೈಹಿಕ ಹಿಂಸೆ ಅತ್ಯಂತ ಖಂಡನೀಯ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ ಅವರು ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ಚುನಾವಣೆಯಲ್ಲಿ ಜನಾದೇಶ ತಿರುಚಿ ಅಕ್ರಮವಾಗಿ ಅಧಿಕಾರಕ್ಕೆ ಬಂದು ಅನೈತಿಕವಾಗಿ ರಾಜ್ಯಭಾರ ಮಾಡುತ್ತಿರುವ ಕೇಂದ್ರ ಸರ್ಕಾರದ ಗೂಂಡಾಗಿರಿ ಮಿತಿ ಮೀರಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯ ದಮನಕ್ಕೆ ಮುಂದಾಗಿರುವ ಮೋದಿ ಸರ್ವಾಧಿಕಾರಿ ಆಡಳಿತಕ್ಕೆ ಧಿಕ್ಕಾರವಿರಲಿ ಎಂದಿದ್ದಾರೆ.

ಜನಾದೇಶದಿಂದ ಆಯ್ಕೆಯಾದ ಪ್ರತಿಪಕ್ಷಗಳ ಜನಪ್ರತಿನಿಧಿಗಳನ್ನು ಐಟಿ-ಇಡಿ ಬ್ಲ್ಯಾಕ್ ಮೇಲ್, ಆಮಿಷಗಳಿಂದ ಸೆಳೆಯುತ್ತಿದ್ದ ಕೇಂದ್ರ ಸರ್ಕಾರ ಬಳಿಕ ಪ್ರತಿಪಕ್ಷಗಳನ್ನೇ ನಿರ್ನಾಮ ಮಾಡಿ ಜನಾದೇಶವನ್ನೇ ಹೈಜಾಕ್ ಮಾಡುತ್ತಿತ್ತು‌. ಇದೀಗ ಇನ್ನೂ ಕೆಳಮಟ್ಟಕ್ಕೆ ಇಳಿದು ಎಸ್ಐಆರ್ ಹಾಗೂ ಚುನಾವಣಾ ಆಯೋಗದ ದುರುಪಯೋಗದ ಮೂಲಕ ಜನರ ಮತ ಹಕ್ಕನ್ನೇ ಕಸಿಯುತ್ತಿದೆ ಎಂದು ಆರೋಪಿಸಿದ್ದಾರೆ.

"ಈ ಅಕ್ರಮ, ಅನೈತಿಕ ಚಟುವಟಿಕೆ ವಿರುದ್ಧ, ಮತದಾರರ ಹಕ್ಕು ಉಳಿಸಲು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹೋರಾಟಕ್ಕೆ ಇಳಿದಿದ್ದಾರೆ. ಕೇಂದ್ರ ಇಂತಹ ಹೋರಾಟವನ್ನು ಹತ್ತಿಕ್ಕುವ ಸರ್ವಾಧಿಕಾರಿ ಧೋರಣೆ ಪ್ರದರ್ಶಿಸಿದೆ. ರಾಹುಲ್ ಗಾಂಧಿ ಅವರನ್ನು ಬಂಧಿಸುವ ವೇಳೆ ಎಳೆದಾಡಿ, ದೈಹಿಕವಾಗಿ ಹಿಂಸೆ ಕೊಟ್ಟು ನಡೆಸಿಕೊಂಡ ರೀತಿ ಅತ್ಯಂತ ಖಂಡನೀಯ. ಈ ರೀತಿಯ ದೈಹಿಕ ಹಿಂಸೆ ಮತ್ತು ಬಲಪ್ರಯೋಗ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಳಿದ ಕಪ್ಪು ಮಸಿ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನದ್ರೋಹಿ ಅಕ್ರಮ ವಿರೋಧಿಸುವುದು, ಪ್ರಶ್ನಿಸುವುದು ಮತ್ತು ಪ್ರತಿಭಟಿಸುವುದು ಸಂವಿಧಾನಬದ್ಧ ಹಕ್ಕು. ಬಲಪ್ರಯೋಗದ ಮೂಲಕ ಈ ಹಕ್ಕನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಮೋ-ಶಾ ಜೋಡಿಗೆ ಅಧಿಕಾರ ಕಳೆದುಕೊಳ್ಳುವ ಭಯ ಶುರುವಾಗಿದೆ. ಹೀಗಾಗಿ ಸರ್ವಾಧಿಕಾರಿ ವರ್ತನೆ ಮೂಲಕ ಬಲಪ್ರಯೋಗ ಮತ್ತು ಬೆದರಿಕೆಗಳ ಮೊರೆ ಹೋಗಿದ್ದಾರೆ. ರಾಹುಲ್ ಗಾಂಧಿ ಅವರನ್ನು ದೈಹಿಕವಾಗಿ ತಡೆದಿರಬಹುದು. ಆದರೆ ಪ್ರಜಾಪ್ರಭುತ್ವ ಉಳಿಸುವ ಅವರ ಛಲವನ್ನು ಕುಗ್ಗಿಸಲು ಸಾಧ್ಯವಿಲ್ಲ. ಅವರ ಧ್ವನಿಯನ್ನು ಅಡಗಿಸುವುದು ಅಸಾಧ್ಯ ಎಂದು ಹೇಳಿದ್ದಾರೆ.

Tags

central governmentShivraj S. Thangadgi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X