Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅಕ್ರಮ ಗಣಿಗಾರಿಕೆಯ ಮೂಲ ಪಕ್ಷ ಯಾವುದೆಂದು...

ಅಕ್ರಮ ಗಣಿಗಾರಿಕೆಯ ಮೂಲ ಪಕ್ಷ ಯಾವುದೆಂದು ದೇಶಕ್ಕೆ ಗೊತ್ತು : ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ23 Jun 2024 9:29 PM IST
share
ಅಕ್ರಮ ಗಣಿಗಾರಿಕೆಯ ಮೂಲ ಪಕ್ಷ ಯಾವುದೆಂದು ದೇಶಕ್ಕೆ ಗೊತ್ತು : ಈಶ್ವರ್ ಖಂಡ್ರೆ

ಹೊಸದಿಲ್ಲಿ : ಅಕ್ರಮ ಗಣಿಗಾರಿಕೆಯ ಮೂಲ ಪಕ್ಷ ಯಾವುದೆಂಬುದು ಇಡೀ ದೇಶಕ್ಕೆ ತಿಳಿದಿದೆ. ಕಿಕ್ ಬ್ಯಾಕ್, ಸೂಟ್ ಕೇಸ್ ಪಡೆದು ಅಭ್ಯಾಸ ಇರೋರು ಬೇರೆಯವರೂ ತಮ್ಮಂತೆ ಎಂದು ತಿಳಿಯುತ್ತಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿರುಗೇಟು ನೀಡಿದ್ದಾರೆ.

ಸಿಇಸಿ ನೀಡಿದ್ದ ನಿರ್ದೇಶನಗಳನ್ನು ಪರಿಪಾಲಿಸುವವರೆಗೆ ದೇವದಾರಿ ಅರಣ್ಯದಲ್ಲಿ ಕೆ.ಐ.ಓ.ಸಿ.ಎಲ್.ಗೆ ಗಣಿಗಾರಿಕೆಗೆ ಒಪ್ಪಂದ ಮಾಡಿಕೊಳ್ಳದಂತೆ ತಾವು ನೀಡಿರುವ ನಿರ್ದೇಶನಕ್ಕೆ ಸಂಬಂಧಿಸಿದಂತೆ ‘ಕಿಕ್ ಬ್ಯಾಕ್ ಕೊಟ್ಟಿಲ್ಲ–ಹೀಗಾಗಿ ತಡೆ ಒಡ್ಡಿದ್ದಾರೆ’ ಎಂಬ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ತಾನು ಕಳ್ಳ ಪರರನ್ನು ನಂಬ ಎಂಬ ಗಾದೆ ನೆನಪಿಗೆ ತರುತ್ತದೆ ಎಂದು ಹೇಳಿದ್ದಾರೆ.

ಕೇಂದ್ರ ಸರಕಾರಿ ಸ್ವಾಮ್ಯದ ಕೆ.ಐ.ಓ.ಸಿ.ಎಲ್. ಈ ಹಿಂದೆ ನಿಯಮಗಳನ್ನು ಉಲ್ಲಂಘನೆ ಮಾಡಿದೆ, ನ್ಯಾಯಾಲಯಗಳ ಆದೇಶವನ್ನೂ ಪರಿಪಾಲನೆ ಮಾಡಿಲ್ಲ. ಹೀಗಾಗಿ ಸಿಇಸಿ ನೀಡಿರುವ ನಿರ್ದೇಶನಗಳನ್ನು ಪರಿಪಾಲನೆ ಮಾಡುವವರೆಗೆ ಒಪ್ಪಂದ ಮಾಡಿಕೊಳ್ಳದಂತೆ ತಿಳಿಸಲಾಗಿದೆ. ಅವರು ಹಿಂದೆ ಮಾಡಿರುವ ತಪ್ಪು ಸರಿಪಡಿಸಲಿ ನಂತರ ಅನುಮತಿ ಪಡೆದುಕೊಳ್ಳಲಿ ಎಂದು ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿಯ ಕೆಲವು ನಾಯಕರಿಗೂ ಅಕ್ರಮ ಗಣಿಗಾರಿಕೆಗೂ ಇದ್ದ ಸಂಬಂಧ ಜಗಜ್ಜಾಹೀರಾಗಿದೆ. ಅವರೇ ಪಕ್ಷದಿಂದ ಉಚ್ಚಾಚಿಸಿದ ಗಣಿ ಧಣಿಗಳನ್ನು ಈಗ ಅಪ್ಪಿಕೊಂಡು ರತ್ನಗಂಬಳಿ ಹಾಸಿ ಪಕ್ಷಕ್ಕೆ ಮತ್ತೆ ಕರೆದುಕೊಂಡಿದ್ದಾರೆ. ಇವರು ಪ್ರಾಮಾಣಿಕತೆ ಮಾತನಾಡುವುದು ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದಂತೆ ಎಂದು ಈಶ್ವರ್ ಖಂಡ್ರೆ ಲೇವಡಿ ಮಾಡಿದ್ದಾರೆ.

ಸಿ.ಟಿ.ರವಿ, ಎಲುಬಿಲ್ಲದ ನಾಲಿಗೆ ಎಂದು ಏನೇನೋ ಮಾತನಾಡಿದ್ದಾರೆ. ಸೂಟ್ ಕೇಸ್ ಕೊಡಲಿ ಎಂದು ನಾವು ತಡೆ ಒಡ್ಡಿದ್ದೇವೆ ಎಂದು ಆರೋಪಿಸಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ಎಷ್ಟು ಖಾಸಗಿ ಗಣಿಗಾರಿಕೆಗೆ ಅನುಮತಿ ಕೊಟ್ಟಿದೆ ಎಂಬುದು ರಾಜ್ಯದ ಜನರಿಗೆ ಗೊತ್ತಿದೆ. ಅದಕ್ಕೆಲ್ಲಾ ಇವರು ಎಷ್ಟೆಷ್ಟು ಸೂಟ್ ಕೇಸ್ ಪಡೆದಿದ್ದರು ಎಂದು ಹೇಳಲಿ. ಪಾಪ ಸಿ.ಟಿ.ರವಿ ತಮ್ಮ ಅನುಭವ ಹೇಳಿಕೊಂಡಿದ್ದಾರೆಂದು ಕಾಣುತ್ತದೆ ಎಂದು ಅವರು ಕುಹಕವಾಡಿದ್ದಾರೆ.

ಚಿಕ್ಕಮಗಳೂರು ಸುತ್ತಮುತ್ತ ಶುಂಠಿ ಬೆಳೆಯೋ ಹೆಸರಲ್ಲಿ ಮರ ಕಡಿಯುವವರ ಮತ್ತು ಅರಣ್ಯ ಒತ್ತುವರಿ ಮಾಡುವವರ ಬೆಂಬಲಕ್ಕೆ ಯಾರು ನಿಂತಿದ್ದಾರೆ ಎಂಬುದು ಜನತೆಗೆ ತಿಳಿದಿದೆ. ಎಲ್ಲವೂ ಶೀಘ್ರ ಹೊರಬರಲಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X