Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ-2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ವಾರ್ತಾಭಾರತಿವಾರ್ತಾಭಾರತಿ21 Aug 2025 3:11 PM IST
share
ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ-2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಬೆಂಗಳೂರು, ಆ.21: ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲಿ ಗುರುವಾರ ಅಂಗೀಕಾರ ದೊರೆಯಿತು.

ವಿಧಾನಸಭೆಯಲ್ಲಿ ಅಂಗೀಕೃತ ಸ್ವರೂಪದಲ್ಲಿರುವ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025’ ಅನ್ನು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಮೇಲ್ಮನೆಯಲ್ಲಿ ಮಂಡಿಸಿದರು. ಅಲ್ಪಚರ್ಚೆ ಬಳಿಕ ಅನುಮೋದನೆ ನೀಡಲಾಯಿತು.

ತಿದ್ದುಪಡಿ ವಿಧೇಯಕದ ಪ್ರಸ್ತಾವದ ವೇಳೆ ಮಾತನಾಡಿದ ಡಿಕೆಶಿ, “ಈ ವಿಧೇಯಕದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಸಂವಿಧಾನದ 74ನೇ ತಿದ್ದುಪಡಿ ಅಡಿಯಲ್ಲಿ ಬರುವ ಪಾಲಿಕೆಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬ ಅಂಶವನ್ನು ಸ್ಪಷ್ಟಪಡಿಸಲಾಗಿದೆ. ಭವಿಷ್ಯದಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ನೀಡಬಾರದು ಎಂಬ ಉದ್ದೇಶದಿಂದ ಈ ತಿದ್ದುಪಡಿಯಲ್ಲಿ ಜಿಬಿಎ ಪಾಲಿಕೆಗಳ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬ ಸ್ಪಷ್ಟನೆ ನೀಡಲಾಗಿದೆ” ಎಂದು ಹೇಳಿದರು.

ಸದಸ್ಯರಾದ ಗೋವಿಂದರಾಜು, ಟಿ.ಎ ಶರವಣ, ಎಚ್.ಎಸ್ ಗೋಪಿನಾಥ್ ಕೋರಿದ ಸ್ಪಷ್ಟನೆಗೆ ಉತ್ತರ ನೀಡಿದ ಸಚಿವರು, “ನಾವು ಅನೇಕ ಬಾರಿ ನೋಡಿರುವಂತೆ ರಾಜ್ಯ ಸರಕಾರ ಒಂದು ಪಕ್ಷ ಅಧಿಕಾರದಲ್ಲಿದ್ದರೆ, ಪಾಲಿಕೆಯಲ್ಲಿ ಮತ್ತೊಂದು ಪಕ್ಷ ಅಧಿಕಾರದಲ್ಲಿರುತ್ತದೆ. ಇಂತಹ ಸಂದರ್ಭದಲ್ಲಿ ಸಂವಿಧಾನದ 74ನೇ ತಿದ್ದುಪಡಿಗೆ ಧಕ್ಕೆಯಾಗದಂತೆ ಹಾಗೂ ರಾಜ್ಯ ಸರಕಾರ ಪಾಲಿಕೆಗಳನ್ನು ನಿಯಂತ್ರಿಸುವಂತಾಗದಂತೆ ಎಚ್ಚರಿಕೆ ವಹಿಸಲು ಈ ತಿದ್ದುಪಡಿ ತರಲಾಗಿದೆ” ಎಂದರು.

“ಕೆಲವು ಶಾಸಕರು ಜನಸಂಖ್ಯೆ ಹಾಗೂ ವಾರ್ಡ್ ರಚನೆ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಈಗ ನಾವು ಬಳಸಿರುವುದು 2011ರ ಜನಗಣತಿ. ಆಗ ಒಂದು ವಾರ್ಡ್ ನಲ್ಲಿ 18 ಸಾವಿರ ಜನಸಂಖ್ಯೆ ಇದ್ದರೆ ಈಗಿನ ಪರಿಸ್ಥಿತಿಯಲ್ಲಿ 30 ಸಾವಿರದಷ್ಟು ಇರಲಿದೆ. ಮುಂದೆ ಹೊಸ ಪ್ರದೇಶಗಳನ್ನು ಪಾಲಿಕೆ ವ್ಯಾಪ್ತಿಯಲ್ಲಿ ಒಳಪಡಿಸುವ ಸಂದರ್ಭದಲ್ಲಿ ನಿಮ್ಮ ಪಕ್ಷದ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಲಾಗುವುದು. ಈ ವಿಚಾರವನ್ನು ಬೇರೆ ರೂಪದಲ್ಲಿ ಚರ್ಚೆಗೆ ಪ್ರಸ್ತಾವ ನೀಡಿ, ಆಗ ಈ ವಿಚಾರವಾಗಿ ನಿಮಗಿರುವ ಅನುಮಾನಗಳಿಗೆ ಸಂಪೂರ್ಣವಾಗಿ ವಿವರಣೆ ನೀಡುತ್ತೇನೆ. ಈಗ ಈ ವಿಧೇಯಕ ಅಂಗೀಕಾರ ಮಾಡಿಕೊಡಿ” ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X