Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಭೂ ರಹಿತರಿಗೆ ಭೂಮಿಗಾಗಿ ಹೋರಾಟ ಮತ್ತೆ...

ಭೂ ರಹಿತರಿಗೆ ಭೂಮಿಗಾಗಿ ಹೋರಾಟ ಮತ್ತೆ ಕಟ್ಟಬೇಕು: ಡಾ.ಪುರುಷೋತ್ತಮ ಬಿಳಿಮಲೆ

►ಕೆಪಿಸಿಎಲ್ ವತಿಯಿಂದ ಅಂಬೇಡ್ಕರ್ ಜಯಂತಿ ►ಎಸ್‍ಸಿ-ಎಸ್‍ಟಿ ನೌಕರರ ಮಕ್ಕಳಿಗೆ ಚಿನ್ನದ ಪದಕ’

ವಾರ್ತಾಭಾರತಿವಾರ್ತಾಭಾರತಿ4 Jun 2025 11:46 PM IST
share
ಭೂ ರಹಿತರಿಗೆ ಭೂಮಿಗಾಗಿ ಹೋರಾಟ ಮತ್ತೆ ಕಟ್ಟಬೇಕು: ಡಾ.ಪುರುಷೋತ್ತಮ ಬಿಳಿಮಲೆ

ಬೆಂಗಳೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಾದ ಮುಂದುವರಿಯಬೇಕೆಂದರೆ ಭೂ ರಹಿತರಿಗೆ ಭೂಮಿ ವಿತರಣೆ ಮಾಡುವ ಹೋರಾಟವನ್ನು ಮತ್ತೆ ಕಟ್ಟಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.

ಬುಧವಾರ ನಗರದಲ್ಲಿ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ಹಾಗೂ ನಿಗಮದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ನೌಕರರ ಸಂಘದ ಆಶ್ರಯದಲ್ಲಿ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ಸಭಾಂಗಣಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಹಿಂದೆ ಭೂ ರಹಿತರಿಗೆ ಭೂಮಿ ನೀಡುವ ಕೆಲಸ ಆಗಿತ್ತಾದರೂ ಮತ್ತೆ ಜಮೀನು ಕ್ರೋಢೀಕರಣವಾಗುತ್ತಿದೆ. ಇದು ಅಂಬೇಡ್ಕರ್ ಸಿದ್ಧಾಂತಕ್ಕೆ ವಿರುದ್ಧವಾಗಿದೆ. ಹೀಗಾಗಿ ಮತ್ತೆ ಭೂ ರಹಿತರಿಗೆ ಭೂಮಿ ನೀಡುವ ಹೋರಾಟವನ್ನು ಕಟ್ಟುವ ಅನಿವಾರ್ಯತೆ ಇದೆ. ಆ ಮೂಲಕ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವ ಕೆಲಸವಾಗಬೇಕಿದೆ ಎಂದು ಪುರುಷೋತ್ತಮ ಬಿಳಿಮಲೆ ಹೇಳಿದರು.

ಅಂಬೇಡ್ಕರ್ ರಚಿಸಿದ ಭಾರತ ಸಂವಿಧಾನ ಪೂರ್ಣ ಭಾರತೀಯ ಸಂವಿಧಾನ ಅಲ್ಲ ಎಂಬ ಕೂಗು ಈಗ ಬಲವಾಗುತ್ತಿದೆ. ಆ ಕೂಗು ಹಾಕುತ್ತಿರುವವರು ದೇಶದಲ್ಲಿ ಮನುಸ್ಮೃತಿಯನ್ನು ಮತ್ತೆ ಹೇರಲು ಪ್ರಯತ್ನಿಸುತ್ತಿದ್ದಾರೆ. ಆದರೆ, ವಿಶ್ವದಲ್ಲಿ ಎಲ್ಲರನ್ನೂ ಸಮನಾಗಿ ಕಾಣುವ ಗ್ರಂಥವೆಂದರೆ ಅದು ಭಾರತೀಯ ಸಂವಿಧಾನ ಮಾತ್ರ. ಹೀಗಾಗಿ ಈ ಸಂವಿಧಾನವನ್ನು ಎತ್ತಿ ಹಿಡಿಯಬೇಕಾಗಿದೆ ಎಂದು ಅವರು ತಿಳಿಸಿದರು.

ಭಾರತಕ್ಕೆ ಸ್ವಾತಂತ್ರ್ಯ ಬರುವ ಸಂದರ್ಭದಲ್ಲಿ ಎಲ್ಲರೂ ಬ್ರಿಟಿಷರಿಂದ ರಾಜಕೀಯ ಬಿಡುಗಡೆಯ ಬಗ್ಗೆ ಮಾತ್ರ ಯೋಚಿಸಿದ್ದರು. ಆದರೆ, ಅಂಬೇಡ್ಕರ್ ಅವರು ರಾಜಕೀಯ ಬಿಡುಗಡೆ ಜತೆಗೆ ಆರ್ಥಿಕ ಬಿಡುಗಡೆಯೂ ಆಗಬೇಕಾಗಿದೆ ಎಂದು ಗಟ್ಟಿ ಧ್ವನಿಯಲ್ಲಿ ಹೇಳಿದ ಏಕೈಕ ವ್ಯಕ್ತಿಯಾಗಿದ್ದಾರೆ. ಜತೆಗೆ ಸಾಮಾಜಿಕ ಭಾರತೀಯ ಸಮಾಜದ ಬಗ್ಗೆ ವಿಶ್ಲೇಷಣೆ ಮಾಡಿದ್ದರು ಎಂದು ಪುರುಷೋತ್ತಮ ಬಿಳಿಮಲೆ ತಿಳಿಸಿದರು.

ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡಿದ್ದ ನೇತ್ರ ತಜ್ಞ ಡಾ.ಎಚ್.ಆರ್.ಸುರೇಂದ್ರ ಮಾತನಾಡಿ, ಅಂಬೇಡ್ಕರ್ ಅವರು ಯಾವತ್ತೂ ಭಾರತಕ್ಕೆ ಏಕೆ ಪ್ರಸ್ತುತವಾಗಿರುತ್ತಾರೆ ಮತ್ತು ಅವರು ರಚಿಸಿದ ಸಂವಿಧಾನ ಏಕೆ ಶ್ರೇಷ್ಠ ಎಂಬ ಬಗ್ಗೆ ವಿವರಿಸಿದರು.

ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕ ಗಳಿಸಿದ ಕೆಪಿಸಿಎಲ್ ನ ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರ ಮಕ್ಕಳಿಗೆ ಚಿನ್ನದ ಪದಕಗಳನ್ನು ನೀಡಿ ಸತ್ಕರಿಸಲಾಯಿತು.

ಕೆಪಿಸಿಎಲ್ ಮಾನವ ಸಂಪನ್ಮೂಲ ನಿರ್ದೇಶಕ ನಾಗರಾಜ ಸಿ., ಹಣಕಾಸು ನಿರ್ದೇಶಕ ಆರ್.ನಾಗರಾಜ, ತಾಂತ್ರಿಕ ನಿರ್ದೇಶಕ ಆರ್.ಕೃಷ್ಣಮೂರ್ತಿ, ಪ್ರಧಾನ ವ್ಯವಸ್ಥಾಪಕಿ ಡಾ.ಆಶಾ, ನಿಗಮದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ನೌಕರರ ಸಂಘದ ಕೇಂದ್ರ ಸಮಿತಿ ಅಧ್ಯಕ್ಷ ಭೀಮಯ್ಯ ನಾಯ್ಕ್, ಪ್ರಧಾನ ಕಾರ್ಯದರ್ಶಿ ಮಿರ್ಜಾ ಕುಮಾರ್, ಬೆಂಗಳೂರು ವಲಯದ ಅಧ್ಯಕ್ಷೆ ಶಿಲ್ಪಾ ಡಿ.ರಾಜು, ಕಾರ್ಯದರ್ಶಿ ಈರಪ್ಪ ಮತ್ತಿತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X