Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬರ ಪರಿಹಾರದ ವಿಚಾರದಲ್ಲಿ ರಾಜ್ಯ ಸರ್ಕಾರ...

ಬರ ಪರಿಹಾರದ ವಿಚಾರದಲ್ಲಿ ರಾಜ್ಯ ಸರ್ಕಾರ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ:ಬಸವರಾಜ ಬೊಮ್ಮಾಯಿ

"ಮೆಟ್ರೊ ಸಾಲ ಸರ್ಕಾರದ ಬೊಕ್ಕಸದಿಂದ ತೀರಿಸುವುದಿಲ್ಲ ಪ್ರಯಾಣಿಕರ ಟಿಕೆಟ್ ಹಣದಿಂದ"

ವಾರ್ತಾಭಾರತಿವಾರ್ತಾಭಾರತಿ12 Nov 2026 2:24 PM IST
share
ಬರ ಪರಿಹಾರದ ವಿಚಾರದಲ್ಲಿ ರಾಜ್ಯ ಸರ್ಕಾರ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ:ಬಸವರಾಜ ಬೊಮ್ಮಾಯಿ

ಬೆಂಗಳೂರು: ಬರ ಪರಿಹಾರದ ವಿಚಾರದಲ್ಲಿ ರಾಜ್ಯ ಸರ್ಕಾರ ಮಾಡುತ್ತಿರುವುದು ಸರಿಯಿಲ್ಲ. ಇದರಲ್ಲೂ ಕೂಡ ರಾಜಕೀಯ ಮಾಡುತ್ತಿದೆ. ಬರ ಪರಿಹಾರದ ವಿಚಾರದಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಜೆಪಿ ನಗರದ ಅವರ ನಿವಾಸದಲ್ಲಿ ಭೇಟಿ ಮಾಡಿ ತಮ್ಮ ಮಗಳ ಮದುವೆ ಆಮಂತ್ರಣ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬರ ಪರಿಹಾರಕ್ಕೆ ಅದರದ್ದೇ ಆದಂತ ಮಾನದಂಡ ಇದೆ. ಎಸ್ ಡಿ ಆರ್ ಎಫ್ ನಲ್ಲಿ ಮುಂಗಡ ಮೊದಲೇ ಕೊಟ್ಟಿರುತ್ತಾರೆ. ಜಿಲ್ಲಾಧಿಕಾರಿಗಳ ಬಳಿಯೂ ಸಾಕಷ್ಟು ಹಣ ಇದೆ. ರೈತರಿಗೆ ಪರಿಹಾರ ನೀಡುವಾಗ ಸರ್ಕಾರದ ಬೊಕ್ಕಸದಿಂದ ನೀಡಬೇಕು ಆಮೇಲೆ ‌ಕೇಂದ್ರದಿಂದ ಬರುತ್ತದೆ ಎಂದು ಹೇಳಿದರು.

ನಾನು ಮುಖ್ಯಮಂತ್ರಿ ಆಗಿದ್ದಾಗ ನೆರೆ ಬಂದಿತ್ತು. ಆಗ ಕೂಡಲೇ ಸರ್ಕಾರದಿಂದ ಹಣ ಬಿಡುಗಡೆ ಮಾಡಿದ್ದೆವು. ಒಣ ಬೇಸಾಯಕ್ಕೆ ಕೇಂದ್ರ ಸರ್ಕಾರ 6500 ಕೊಟ್ಟರೆ ನಾವು 13000 ನೀಡಿದ್ದೇವೆ ನೀರಾವರಿಗೆ ಅವರು 12500 ಕೊಟ್ಟರೆ ನಾವು‌ 25000 ಕೊಟ್ಟಿದ್ದೆವು. ಆಗ ಕೇಂದ್ರದಲ್ಲಿ ನಮ್ಮದೇ ಸರ್ಕಾರ ಇದ್ದರೂ ಕೂಡ ನಾವು ಕಾಯಲಿಲ್ಲ. ಸಂಕಷ್ಟ ಇದ್ದಾಗ ಧಾವಿಸಿದರೆ ಮಾತ್ರ ಅದು ಪರಿಹಾರ ಸಮಸ್ಯೆ ಬಗೆಹರಿದು ಮುಂಗಾರು ಹಿಂಗಾರು ಎಲ್ಲ ಮುಗಿದ ನಂತರ ಬಂದರೆ ಅದು ಸಂವೇದನಶೀಲ ಅಲ್ಲ ಎಂದು ಹೇಳಿದರು.

ಮೆಟ್ರೊ ಸಾಲಕ್ಕೆ ಕೇಂದ್ರದ ಗ್ಯಾರೆಂಟಿ

ನಮ್ಮ ಮೆಟ್ರೊ ಅನುದಾನ ಬಿಡುಗಡೆ ಕುರಿತು ನಡೆಯುತ್ತಿರುವ ಚರ್ಚೆಯ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೆಟ್ರೊ ಯೋಜನೆಗೆ ಪ್ರತ್ಯೇಕವಾಗಿ ಶೇ 60 ರಿಂದ 65% ರಷ್ಟು ಸಾಲ ಇದೆ. ಅದು ಮೆಟ್ರೋ ಆದಾಯದಿಂದ ಬರುತ್ತದೆ. ಅದರಲ್ಲಿ ಕೊಡುತ್ತಾರೆ. ಇವರು ದಾರಿ ತಪ್ಪಿಸುವಂತಹ, ಜನರ ಕಣ್ಣಿಗೆ ಮಣ್ಣು ಎರಚುವಂತಹ ಕೆಲಸ‌ ಮಾಡಬಾರದು ಎಂದರು.

ಸಾಲ ಮರುಪಾವತಿ ಸರ್ಕಾರ ಮಾಡಲ್ಲ, ಜನ ಮಾಡುತ್ತಾರೆ. ಮೆಟ್ರೋ ಟಿಕೆಟ್ ನಿಂದ ಬರುವ ಹಣದಿಂದ ಸಾಲ ಮರುಪಾವತಿ ಆಗುತ್ತದೆ. ಸರ್ಕಾರದ ಬೊಕ್ಕಸದಿಂದ ಸಾಲ‌ ತೀರಿಸುವುದಿಲ್ಲ. ಸಾಲಕ್ಕೆ ಕೇಂದ್ರ ಸರ್ಕಾರದ ಗ್ಯಾರಂಟಿ ಆದ ಮೇಲೇನೆ ಸಾಲ ದೊರೆಯುತ್ತದೆ. ನಾನು ಮುಖ್ಯಮಂತ್ರಿ ಆಗಿದ್ದಾಗ ಆರೇಂಜ್ ಲೈನ್ ಗೆ ಎರಡೂವರೆ ಸಾವಿರ ಕೋಟಿ ರೂಪಾಯಿ ಕೊಟ್ಟಿದ್ದೆ. ರಾಜ್ಯದ ದೃಷ್ಟಿಯಿಂದ ಮೆಟ್ರೋ ಲೈನ್ ಗೆ ಏನು ಅನುಮತಿ ಬೇಕೋ ಅದನ್ನು ಕೊಡಿಸುತ್ತೇವೆ. ಮೆಟ್ರೋ ಯೋಜನೆಗೆ ಕೇಂದ್ರ ಹಾಗೂ ರಾಜ್ಯದ ಪಾಲು 50:50 ಇರುತ್ತದೆ ಎಂದು ತಿಳಿಸಿದರು.

Tags

state governmentdrought reliefBasavaraj Bommai
share
ವಾರ್ತಾಭಾರತಿ
ವಾರ್ತಾಭಾರತಿ
Next Story
X