Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜ್ಯಪಾಲರು ಕೇಳಿದ್ದಕ್ಕೆಲ್ಲ...

ರಾಜ್ಯಪಾಲರು ಕೇಳಿದ್ದಕ್ಕೆಲ್ಲ ಉತ್ತರಿಸಬೇಕು ಅಂತೇನೂ ಇಲ್ಲ: ಡಾ.ಜಿ.ಪರಮೇಶ್ವರ

''ರಾಜ್ಯಪಾಲರು ದಿನನಿತ್ಯ ಪತ್ರ ಬರೆದು ಮಾಹಿತಿ ಕೊಡಿ ಅಂತ ಕೇಳುವುದು ಸಂವಿಧಾನ ವಿರೋಧಿ ಕ್ರಮ"

ವಾರ್ತಾಭಾರತಿವಾರ್ತಾಭಾರತಿ23 Sept 2024 12:12 PM IST
share
ರಾಜ್ಯಪಾಲರು ಕೇಳಿದ್ದಕ್ಕೆಲ್ಲ ಉತ್ತರಿಸಬೇಕು ಅಂತೇನೂ ಇಲ್ಲ: ಡಾ.ಜಿ.ಪರಮೇಶ್ವರ

ಬೆಂಗಳೂರು, ಸೆ.23: ರಾಜ್ಯಪಾಲರಿಗೆ ಎಲ್ಲದಕ್ಕೂ ಉತ್ತರ ಕೊಡುವ ಅನಿವಾರ್ಯತೆ ಇಲ್ಲ. ಯಾವುದಕ್ಕೆ ಉತ್ತರ ಕೊಡಬೇಕು ಖಂಡಿತವಾಗಿಯೂ ಕೊಡುತ್ತೇವೆ. ಎಲ್ಲದಕ್ಕೂ ಉತ್ತರಿಸುವ ಅನಿವಾರ್ಯತೆ ಇರುವುದಿಲ್ಲ. ಎಲ್ಲದಕ್ಕು ಉತ್ತರಿಸಬೇಕು ಅಂತೇನೂ ಇಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದ್ದಾರೆ.

ಸದಾಶಿವ ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಯಾವ ಉದ್ದೇಶಕ್ಕೆ ಹೀಗೆ ಮಾಡುತ್ತಿದ್ದಾರೋ ಗೊತ್ತಿಲ್ಲ. ಅವರು ಏಕಾಏಕಿಯಾಗಿ ಚುನಾಯಿತ ಜನಪ್ರತಿನಿಧಿ ಮುಖ್ಯಮಂತ್ರಿಗೆ ಶೋಕಾಸ್ ನೋಟಿಸ್ ನೀಡಿರುವುದನ್ನು ತಪ್ಪು ಅಂತ ಹೇಳಿ ಪ್ರತಿಭಟನೆ ನಡೆಸಿದ್ದೇವೆ. ಸುಮ್ಮನೇ ಪ್ರತಿಭಟನೆ ನಡೆಸಿಲ್ಲ. ತನಿಖೆಯಾಗಿಲ್ಲ, ಯಾವುದೇ ವರದಿಯು ಇಲ್ಲ. ಯಾರೋ ದೂರು ನೀಡಿದರು ಎಂದ ಮಾತ್ರಕ್ಕೆ ಪರಿಶೀಲನೆ ನಡೆಸದೆಯೇ ಶೋಕಾಸ್ ನೋಟಿಸ್ ನೀಡಿರುವುದು ಸರಿಯಲ್ಲ ಎಂದರು.

ದಿನನಿತ್ಯ ಪತ್ರ ಬರೆದು ಮಾಹಿತಿ ಕೊಡಿ ಅಂತ ಕೇಳುವುದು ಸಂವಿಧಾನ ವಿರೋಧಿ

ರಾಜ್ಯಪಾಲರು, ಸರ್ಕಾರದ ದಿನನಿತ್ಯದ ಆಡಳಿತದ ಬಗ್ಗೆ ಮಾಹಿತಿ ಕೇಳುವುದಾಗಲಿ ಅಥವಾ ಮಧ್ಯ ಪ್ರವೇಶಿಸುವುದನ್ನಾಗಲಿ ಎಲ್ಲಿಯೂ ಕೇಳಿಲ್ಲ. ಇದೇ ಪ್ರಥಮ ಬಾರಿಗೆ ರಾಜ್ಯಪಾಲರು ಸರಕಾರದ ದಿನನಿತ್ಯದ ಆಡಳಿತದ ಬಗ್ಗೆ ಮಾಹಿತಿ ಕೇಳುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದ್ದಾರೆ.

ಯಾವಾಗಲಾದರೂ ಒಮ್ಮೆ ಮುಖ್ಯಮಂತ್ರಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಅಥವಾ ಕಾನೂನು ಸುವ್ಯವಸ್ಥೆಯ ವಿಚಾರ ಇದ್ದರೆ ಗೃಹ ಸಚಿವರು ಹೋಗಿ ರಾಜ್ಯಪಾಲರಿಗೆ ವಿವರಿಸುತ್ತಾರೆ. ಸಂಬಂಧಪಟ್ಟ ಸಚಿವರನ್ನು ಕರೆಸಿ ಕೇಳುವುದಕ್ಕೆ ರಾಜ್ಯಪಾಲರಿಗೆ ಹಕ್ಕು ಇದೆ. ಆದರೆ, ದಿನನಿತ್ಯ ಪತ್ರ ಬರೆದು, ಪತ್ರದ ಮುಖಾಂತರ ಮಾಹಿತಿ ಕೊಡಿ ಅಂತ ಕೇಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದರು.

ಸಂವಿಧಾನದ ಆಶಯಗಳನ್ನು ಯಾವ ರೀತಿ ರಕ್ಷಣೆ ಮಾಡಬೇಕು ಎಂಬುದು ರಾಜ್ಯಪಾಲರ ಜವಾಬ್ದಾರಿಯಾಗಿದೆ. ದಿನನಿತ್ಯ ಆಡಳಿತ ಮಾಡುವ ಅಧಿಕಾರ ಮುಖ್ಯಮಂತ್ರಿ ಮತ್ತು ಸರ್ಕಾರಕ್ಕೆ ಇದೆ. 35 ವರ್ಷದಿಂದ ರಾಜಕೀಯದಲ್ಲಿದ್ದೇನೆ. ಇಲ್ಲಿಯವರೆಗೆ ಅನೇಕ ರಾಜ್ಯಪಾಲರನ್ನು ಮತ್ತು ಮುಖ್ಯಮಂತ್ರಿಗಳನ್ನು ನಾವೆಲ್ಲ ನೋಡಿದ್ದೇವೆ. ಇಂತಹ ಸಂದರ್ಭ ಯಾವತ್ತು ಬಂದಿಲ್ಲ. ರಾಜ್ಯಪಾಲರು ಸರ್ಕಾರದ ಪ್ರತಿನಿತ್ಯದ ಕೆಲಸಗಳು ಮತ್ತು ತೀರ್ಮಾನಗಳ ಬಗ್ಗೆ ಮಾಹಿತಿ ಕೊಡಿ ಅಂತ ಕೇಳಿದ್ದ ಉದಾಹರಣೆಗಳೇ ಇಲ್ಲ ಎಂದರು.

ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಒಳ್ಳೆಯ ಸಂಬಂಧವಿರಬೇಕು. ಆಗ ಮಾತ್ರ ರಾಜ್ಯದ ಮತ್ತು ಜನಗಳ ಕೆಲಸಗಳನ್ನು ಮಾಡಲು ಸಾಧ್ಯವಾಗುತ್ತದೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ, ಏನು ತೀರ್ಮಾನ ತಗೆದುಕೊಳ್ಳಬೇಕು ಎಂಬುದನ್ನು ನಿರ್ಧರಿಸಲಾಗುವುದು ಎಂದರು.

ಮುಖ್ಯಂಮತ್ರಿಯವರಿಗೆ ಒಂದು ಮಾನದಂಡ, ಕುಮಾರಸ್ವಾಮಿಯವರಿಗೆ ಇನ್ನೊಂದು ಮಾನದಂಡ ಮಾಡಲಾಗುವುದಿಲ್ಲ. ಒಂದೇ ಮಾನದಂಡದಲ್ಲಿ ಕೆಲಸ ಮಾಡಬೇಕಾಗುತ್ತದೆ. ಇವರಿಗೆ ನೋಟಿಸ್ ನೀಡಿದ್ದೀರಿ ಎಂದಾದರೆ ಅವರಿಗೂ ನೋಟಿಸ್ ನೀಡಬೇಕು. ಈ ಬಗ್ಗೆಯೂ ರಾಜ್ಯಪಾಲರನ್ನು ಪ್ರಶ್ನಿಸಿದ್ದೇವೆ ಎಂದರು.

ಮುಖ್ಯಂಮತ್ರಿಗೆ ಶೋಕಾಸ್ ನೋಟಿಸ್ ನೀಡಿರುವ ರೀತಿಯನ್ನು ಪ್ರಶ್ನಿಸಿ ಸಚಿವ ಸಂಪುಟದಲ್ಲಿ ಚರ್ಚಿಸಿದ್ದೇವೆ. ಅದರಲ್ಲೇನು ಗೌಪ್ಯತೆ ಇಲ್ಲ. ಸಂವಿಧಾನತ್ಮಕವಾಗಿ ರಾಜ್ಯಪಾಲರಿಗೆ ಸಲಹೆ ನೀಡುವ ಅವಕಾಶ ಇದೆ. ಹೀಗಾಗಿ, ಶೋಕಾಸ್ ನೋಟಿಸ್ ನೀಡಿರುವುದನ್ನು ಪುನರ್ ಪರಿಶೀಲಿಸುವಂತೆ ತಿಳಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಶಾಸಕ ಮುನಿರತ್ನ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಗೃಹಸಚಿವರು, ಮುನಿರತ್ನ ವಿರುದ್ಧ ದಿನಕ್ಕೊಂದು ಪ್ರಕರಣಗಳು ಹೊರಬರುತ್ತಿವೆ. ಮೇಲ್ನೋಟಕ್ಕೆ ಒಂದು ಪ್ರಕರಣ ಎಂದು ಭಾವಿಸಲಾಗಿತ್ತು. ಈಗ ಬೇರೆಬೇರೆ ಪ್ರಕರಣಗಳು ಸೇರ್ಪಟೆಯಾಗುತ್ತಿವೆ. ಕೂಲಂಕಷವಾಗಿ ತನಿಖೆ ನಡೆಯಬೇಕು ಎಂಬ ಒತ್ತಾಯ ಕೇಳಿಬಂದ ಹಿನ್ನೆಲೆಯಲ್ಲಿ ಎಸ್ಐಟಿ ರಚನೆ ಮಾಡಲಾಗಿದೆ. ಎಸ್ಐಟಿಯವರು ಮುನಿರತ್ನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X