Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಇದು 60 ಪರ್ಸೆಂಟ್ ಕಮಿಶನ್ ಸರ್ಕಾರ,...

ಇದು 60 ಪರ್ಸೆಂಟ್ ಕಮಿಶನ್ ಸರ್ಕಾರ, ಗುತ್ತಿಗೆದಾರರಿಗೆ ನೀಡಲು ಹಣವಿಲ್ಲ: ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ7 Jan 2025 3:39 PM IST
share
ಇದು 60 ಪರ್ಸೆಂಟ್ ಕಮಿಶನ್ ಸರ್ಕಾರ, ಗುತ್ತಿಗೆದಾರರಿಗೆ ನೀಡಲು ಹಣವಿಲ್ಲ: ಆರ್.ಅಶೋಕ್

ಬೆಂಗಳೂರು, ಜ.7: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಪಕ್ಕಾ 60 ಪರ್ಸೆಂಟ್ ಕಮಿಶನ್ ಸರ್ಕಾರ. ಕಾಂಗ್ರೆಸ್ನ ಆಡಳಿತದಿಂದಾಗಿ ರಾಜ್ಯದ ದಿವಾಳಿಯ ಕಡೆಗೆ ಸಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಮಾಚಲ ಪ್ರದೇಶ ಹಾಗೂ ಕೇರಳದಂತೆಯೇ ಕರ್ನಾಟಕ ಕೂಡ ದಿವಾಳಿಯ ಕಡೆಗೆ ಹೆಜ್ಜೆ ಇಡುತ್ತಿದೆ. ಕಾಂಗ್ರೆಸ್ ನದ್ದು ಪಕ್ಕಾ 60 ಪರ್ಸೆಂಟ್ ಕಮಿಶನ್ ನ ಸರ್ಕಾರ. ಗುತ್ತಿಗೆದಾರರಿಗೆ ಪಾವತಿಸಲು ಸರ್ಕಾರದ ಬಳಿ ಹಣವಿಲ್ಲ. ಬಿಜೆಪಿ ಸರಕಾರಕ್ಕೆ 40 ಪರ್ಸೆಂಟ್ ಎಂದು ಆರೋಪಿಸಿದ ಗುತ್ತಿಗೆದಾರರು, ಈಗ ಕಾಂಗ್ರೆಸ್ ಸರಕಾರ 60% ಕಮಿಶನ್ ಸರ್ಕಾರ ಎಂದು ಹೇಳಿ ದಯಾಮರಣಕ್ಕೆ ಅರ್ಜಿ ಸಲ್ಲಿಸಲು ನೋಡುತ್ತಿದ್ದಾರೆ. ಬೆಂಗಳೂರಿನಲ್ಲಿ 30-40 ನಿವೇಶನಕ್ಕೆ 10 ಲಕ್ಷ ರೂ. 40-60 ನಿವೇಶನಕ್ಕೆ 20 ಲಕ್ಷ ರೂ., ಇದಕ್ಕೂ ಹೆಚ್ಚಿನ ನಿವೇಶನಗಳಿಗೆ 40 ಲಕ್ಷ ರೂ. ಲಂಚ ಕಮಿಶನ್ ಕೊಡಬೇಕಿದೆ ಎಂದು ಆರೋಪಿಸಿದರು.

ಗುತ್ತಿಗೆದಾರರಿಗೆ ಸರಕಾರ 32 ಸಾವಿರ ಕೋಟಿ ರೂ. ನೀಡಬೇಕಿದೆ. ಈ ಹಣ ತರಲು ಎಲ್ಲದಕ್ಕೂ ಸರ್ಕಾರ ತೆರಿಗೆ ಹಾಕುತ್ತಿದೆ. ಇಲ್ಲವಾದರೆ ಗುತ್ತಿಗೆದಾರರಿಗೆ ಕೆಲಸ ಸ್ಥಗಿತಗೊಳಿಸುತ್ತಾರೆ. ಇದರ ನಡುವೆ ಆಶಾ ಕಾರ್ಯಕರ್ತೆಯರು ಧರಣಿ ಆರಂಭಿಸಿದ್ದಾರೆ. ಜೊತೆಗೆ ತೊಗರಿ ಖರೀದಿಗೆ ಸರ್ಕಾರದ ಬಳಿ ಹಣವಿಲ್ಲ ಎಂದರು.

ಅನುದಾನ ಕಡಿತ, ಬಳಕೆ ಮಾಡಿಲ್ಲ

ರಾಜ್ಯ ಬಜೆಟ್ನಲ್ಲಿ 3.22 ಲಕ್ಷ ಕೋಟಿ ರೂ. ನಲ್ಲಿ 1.79 ಲಕ್ಷ ಕೋಟಿ ರೂ., ಅಂದರೆ 55.69% ಖರ್ಚಾಗಿದೆ. ಇನ್ನೂ 45% ಅನ್ನು ಎರಡು ತಿಂಗಳಲ್ಲಿ ಖರ್ಚು ಮಾಡಬೇಕಿದೆ. ಎಸ್ಸಿಎಸ್ಪಿಯಲ್ಲಿ 28,527.02 ಕೋಟಿ ರೂ. ಇದ್ದರೆ, 13,923 ಕೋಟಿ ರೂ. ಅಂದರೆ 48.81% ಖರ್ಚು ಮಾಡಲಾಗಿದೆ. ಟಿಎಸ್ಪಿಯಲ್ಲಿ 11,515.39 ಕೋಟಿ ರೂ. ಇದ್ದರೆ, 4,937.59 ಕೋಟಿ ರೂ. ಅಂದರೆ 42.88% ಖರ್ಚಾಗಿದೆ. ವಿಶೇಷ ಅಭಿವೃದ್ಧಿ ಯೋಜನೆಯಡಿ, 3,077 ಕೋಟಿ ರೂ. ಇದ್ದರೆ 1,076 ಕೋಟಿ ರೂ. ಅಂದರೆ 34% ಖರ್ಚಾಗಿದೆ. ನುಡಿದಂತೆ ನಡೆದ ಎಂದು ಹೇಳಿ ಯಾವುದೇ ಅನುದಾನ ಖರ್ಚು ಮಾಡಿಲ್ಲ ಎಂದು ಆರೋಪಿಸಿದರು.

ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಬಹಳ ಮೋಸ ಮಾಡುತ್ತಾರೆ. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಗೆ 2022-23 ರಲ್ಲಿ ಬಿಜೆಪಿ ಸರ್ಕಾರ 60 ಕೋಟಿ ರೂ. ಅನುದಾನ ನೀಡಿತ್ತು. 2024-25 ರಲ್ಲಿ ಕಾಂಗ್ರೆಸ್ 40 ಕೋಟಿ ರೂ. ನೀಡಿದೆ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್ 45 ಕೋಟಿ ರೂ. ನೀಡಿದೆ. ತಾಂಡಾ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 110 ಕೋಟಿ ರೂ. ನೀಡಿದರೆ ಕಾಂಗ್ರೆಸ್ 60 ಕೋಟಿ ರೂ. ನೀಡಿದೆ. ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್ 50 ಕೋಟಿ ರೂ. ನೀಡಿದೆ. ಭೋವಿ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 95 ಕೋಟಿ ರೂ. ನೀಡಿದರೆ, ಕಾಂಗ್ರೆಸ್ 55 ಕೋಟಿ ರೂ. ನೀಡಿದೆ. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 190 ಕೋಟಿ ರೂ. ನೀಡಿದ್ದರೆ, ಕಾಂಗ್ರೆಸ್ 100 ಕೋಟಿ ರೂ. ನೀಡಿದೆ. ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 25 ಕೋಟಿ ರೂ. ನೀಡಿದರೆ, ಕಾಂಗ್ರೆಸ್ 13 ಕೋಟಿ ರೂ. ಗೆ ಇಳಿಸಿದೆ ಎಂದು ದೂರಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಬಿಜೆಪಿ 106 ಕೋಟಿ ರೂ. ನೀಡಿದ್ದರೆ, ಕಾಂಗ್ರೆಸ್ 50.10 ಕೋಟಿ ರೂ. ನೀಡಿದೆ. ನಿಜಶರಣ ಅಂಬಿಗರ ಚೌಡಯ್ಯ ನಿಗಮಕ್ಕೆ ಬಿಜೆಪಿ 25 ಕೋಟಿ ರೂ. ನೀಡಿದರೆ, ಕಾಂಗ್ರೆಸ್ 5 ಕೋಟಿ ರೂ. ನೀಡಿದೆ. ಉಪ್ಪಾರ ನಿಗಮಕ್ಕೆ ಬಿಜೆಪಿ 15 ಕೋಟಿ ರೂ. ನೀಡಿದರೆ ಕಾಂಗ್ರೆಸ್ 8 ಕೋಟಿ ರೂ. ನೀಡಿದೆ. ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 100 ಕೋಟಿ ರೂ. ನೀಡಿದ್ದರೆ, ಕಾಂಗ್ರೆಸ್ 60 ಕೋಟಿ ರೂ.ಗೆ ರಿಯಾಯಿತಿ ಮಾಡಿದೆ. ದೇವಾಲಯಗಳು ಮತ್ತು ಇತರೆ ಧಾರ್ಮಿಕ ಸಂಸ್ಥೆಗಳಿಗೆ ಅನುದಾನ ಬಿಜೆಪಿ 274.68 ಕೋಟಿ ರೂ. ನೀಡಿದರೆ, ಕಾಂಗ್ರೆಸ್ ಕೇವಲ 17.50 ಕೋಟಿ ರೂ. ನೀಡಿದೆ. ವಿವಿಧ ಮಠ ಹಾಗೂ ದೇವಾಲಯಗಳಿಗೆ ಮುಖ್ಯಮಂತ್ರಿಗಳ ವಿಶೇಷ ಸಹಾಯಧನದಡಿ ಬಿಜೆಪಿ 154.85 ಕೋಟಿ ರೂ. ನೀಡಿದರೆ, ಕಾಂಗ್ರೆಸ್ 30 ಕೋಟಿ ರೂ. ನೀಡಿ ಅನ್ನಕ್ಕೂ ಕನ್ನ ಹಾಕಿದೆ ಎಂದು ದೂರಿದರು.

ಹಿಂದೂ ರುದ್ರಭೂಮಿಗಳ ನಿರ್ವಹಣೆಗೆ ಬಿಜೆಪಿ 25 ಕೋಟಿ ರೂ. ನೀಡಿದರೆ, ಕಾಂಗ್ರೆಸ್ 10 ಕೋಟಿ ರೂ. ಗೆ ಇಳಿಸಿದೆ. ನೇಕಾರರ ಯೋಜನೆಗೆ ಬಿಜೆಪಿ 125.77 ಕೋಟಿ ರೂ. ಕೊಟ್ಟರೆ, ಕಾಂಗ್ರೆಸ್ 10 ಕೋಟಿ ರೂ. ಕೊಟ್ಟಿದೆ. ಕಮಿಶನ್ ದಂಧೆಗಾಗಿ ಸರ್ಕಾರ ಇಡೀ ರಾಜ್ಯವನ್ನು ಕತ್ತಲೆಗೆ ದೂಡಿದೆ ಎಂದು ಆರೋಪಿಸಿದರು.

ಸಚಿವ ಪ್ರಿಯಾಂಕ್ ಖರ್ಗೆಯವರ ಆಪ್ತರನ್ನು ಇನ್ನೂ ಬಂಧಿಸಿಲ್ಲ. ಬಹುಶಃ ಸುರಕ್ಷತೆ ದೃಷ್ಟಿಯಿಂದ ಅವರನ್ನು ಪೊಲೀಸರು ಕಬ್ಬಿನ್ ಗದ್ದೆಯಲ್ಲಿ ಇರಿಸಿರಬಹುದು. ಅವರ ಆಪ್ತರು ರೌಡಿಶೀಟರ್ ಪಟ್ಟಿಯಲ್ಲಿದ್ದು, ಆ ಪಟ್ಟಿಯಿಂದ ಹೆಸರು ತೆಗೆಸಿದ್ದೇ ಕಾಂಗ್ರೆಸ್ ನಾಯಕರು. ಸಚಿವ ರಾಮಲಿಂಗಾರೆಡ್ಡಿ ಹಳೆಯ ಸುದ್ದಿ ಹೇಳಿದ್ದಾರೆ. ನಾನು ಸಚಿವನಾಗಿದ್ದಾಗ ಸಾರಿಗೆ ನಿಗಮಗಳನ್ನು ನಷ್ಟಕ್ಕೆ ದೂಡಲಿಲ್ಲ. ಎಲ್ಲ ಕಡೆ ಬಸ್ ನಿಲ್ದಾಣ ನಿರ್ಮಿಸಿ ಬಾಡಿಗೆ ಮೂಲಕ ಆದಾಯ ಬರುವಂತೆ ಮಾಡಲಾಗಿತ್ತು. ಈಗ ಸರ್ಕಾರ ಎಲ್ಲೂ ನಿಲ್ದಾಣ ನಿರ್ಮಿಸಿಲ್ಲ. ನಾನು ಸಚಿವ ಸ್ಥಾನದಿಂದ ಹೊರಬಂದಾಗ ಬಿಎಂಟಿಸಿ ಲಾಭದಲ್ಲಿತ್ತು. ಕೋವಿಡ್ ಸಮಯದಲ್ಲಿ ಆರ್ಥಿಕ ನಷ್ಟವಾಗಿದ್ದಾಗಲೂ ಟಿಕೆಟ್ ದರ ಏರಿಸಲಿಲ್ಲ. ಗ್ಯಾರಂಟಿಗಳಿಂದಾಗಿ ಈಗ ಟಿಕೆಟ್ ದರ ಏರಿಸಿದ್ದಾರೆ ಎಂದು ಆರೋಪಿಸಿದರು.

ಸಿದ್ಧತೆ ಅಗತ್ಯ

ಹೊಸ ವೈರಸ್ ಹರಡುತ್ತಿರುವುದರಿಂದ ಸರ್ಕಾರ ಟಾಸ್ಕ್ ಫೋರ್ಸ್ ರಚಿಸಿ ಸಿದ್ಧತೆ ಮಾಡಿಕೊಳ್ಳಬೇಕು. ಆಕ್ಸಿಜನ್ ವ್ಯವಸ್ಥೆ ಮಾಡಬೇಕು. ಜಿಲ್ಲಾ, ತಾಲೂಕು ಕೇಂದ್ರದಲ್ಲಿ ಅಧಿಕಾರಿಗಳು ಆಡಿಟ್ ಮಾಡಬೇಕು. ಸರ್ಕಾರ ಕೂಡಲೇ ಸಿದ್ಧತೆ ಮಾಡಿಕೊಳ್ಳಲಿ ಎಂದು ಆರ್.ಅಶೋಕ್ ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X