Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು ಮೆಟ್ರೋದಲ್ಲಿ ಇದೇ ಮೊದಲ...

ಬೆಂಗಳೂರು ಮೆಟ್ರೋದಲ್ಲಿ ಇದೇ ಮೊದಲ ಬಾರಿಗೆ ಅಂಗಾಂಗ ಸಾಗಾಟ; ತುರ್ತು ಕಸಿಗಾಗಿ ಯಕೃತ್ ಸಾಗಣೆ

ವಾರ್ತಾಭಾರತಿವಾರ್ತಾಭಾರತಿ2 Aug 2025 7:12 PM IST
share
ಬೆಂಗಳೂರು ಮೆಟ್ರೋದಲ್ಲಿ ಇದೇ ಮೊದಲ ಬಾರಿಗೆ ಅಂಗಾಂಗ ಸಾಗಾಟ; ತುರ್ತು ಕಸಿಗಾಗಿ ಯಕೃತ್ ಸಾಗಣೆ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ದಾನಿಯ ಅಂಗಾಂಗವನ್ನು ಸಾಗಣೆ ಮಾಡಿ ಸೂಕ್ತ ಸಮಯಕ್ಕೆ ಅಂಗಾಂಗ ಕಸಿಯನ್ನು ಯುವಕನೋರ್ವನಿಗೆ ರಾಜರಾಜೇಶ್ವರಿ ನಗರದ ಸ್ಪರ್ಶ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನೆರವೇರಿಸಿ ರೋಗಿಗೆ ಜೀವದಾನ ನೀಡಲಾಗಿದೆ.

ಬೆಂಗಳೂರು ನಗರದ ಸಂಚಾರ ದಟ್ಟಣೆ ನಡುವೆ ಅಂಗಾಂಗ ಸಾಗಾಟ ತ್ವರಿತವಾಗಿ ಮಾಡುವ ನಿಟ್ಟಿನಲ್ಲಿ ನಮ್ಮ ಮೆಟ್ರೋ ಕೈ ಜೋಡಿಸಿದ್ದು ಶುಕ್ರವಾರ ರಾತ್ರಿ ಬೆಂಗಳೂರಿನ ವೈಟ್‍ಫೀಲ್ಡ್ (ಕಾಡುಗೋಡಿ) ಮೆಟ್ರೋ ನಿಲ್ದಾಣದಿಂದ ರಾಜರಾಜೇಶ್ವರಿ ನಗರದ ಮೆಟ್ರೋ ನಿಲ್ದಾಣಕ್ಕೆ ಯಕೃತ್ ಅನ್ನು ಮೆಟ್ರೋ ಬೋಗಿಯ ಮೂಲಕ ತಂದು ಯಕೃತ್ ಕಸಿ ನೆರವೇರಿಸಲಾಯಿತು.

ವಾರಾಂತ್ಯದ ಸಂಚಾರ ದಟ್ಟಣೆ ಮತ್ತು ಅಂಗಾಂಗವು ಕೆಡದಂತೆ ಕೆಲವೇ ಗಂಟೆಗಳಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಯಕೃತ್ ಕಸಿ ನೆರವೇರಿಸಬೇಕಾಗಿದ್ದ ಹಿನ್ನೆಲೆಯಲ್ಲಿ ಯಕೃತ್ ಸಾಗಾಟಕ್ಕೆ ನಮ್ಮ ಮೆಟ್ರೋ ನೆರವು ಕೋರಲಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತವಾದ ಮೆಟ್ರೋ ಸುರಕ್ಷತಾ ಸಿಬ್ಬಂದಿ ಯಕೃತ್ ಸಾಗಾಟ ಪ್ರಕ್ರಿಯೆಯನ್ನು ಸುಗಮವಾಗಿ ಮಾಡುವಲ್ಲಿ ಎಲ್ಲ ರೀತಿಯ ನೆರವನ್ನೂ ನೀಡಿದ್ದರು.

31 ಕಿ.ಮೀ.ನ ಈ ಪ್ರಯಾಣದಲ್ಲಿ ಮೆಟ್ರೋ ರೈಲು ಎಂದಿನಂತೆ 55 ನಿಮಿಷಗಳಲ್ಲಿ 32 ನಿಲ್ದಾಣಗಳನ್ನು ದಾಟಿ ರಾಜರಾಜೇಶ್ವರಿ ನಗರ ತಲುಪಿತ್ತು. ಅಪಘಾತಕ್ಕೊಳಗಾಗಿ ಮೃತಪಟ್ಟಿದ್ದ 24 ವರ್ಷದ ಯುವಕನ ಹೃದಯ, ಯಕೃತ್ ಮತ್ತಿತರ ಅಂಗಾಂಗ ದಾನಕ್ಕೆ ಯುವಕನ ಕುಟುಂಬ ನಿರ್ಧಾರ ಕೈಗೊಂಡು ಸಮ್ಮತಿ ಸೂಚಿಸಿತ್ತು.

ರಾಜರಾಜೇಶ್ವರಿ ನಗರದ ಸ್ಪರ್ಶ್ ಆಸ್ಪತ್ರೆಯ 30 ವರ್ಷದ ರೋಗಿಯೊಬ್ಬರು ತೀವ್ರ ಪ್ರಮಾಣದ ಹೆಪಟೈಟಿಸ್‍ನಿಂದಾಗಿ ಯಕೃತ್ ವೈಫಲ್ಯದಿಂದ ಯಕೃತ್ ಕಸಿಗಾಗಿ ಕಳೆದ ಎರಡು ತಿಂಗಳಿನಿಂದ ನಿರೀಕ್ಷೆಯಲ್ಲಿದ್ದರು. ದಾನಿಯ ಯಕೃತ್ ಮತ್ತು ರೋಗಿಯ ಯಕೃತ್ ಹೊಂದಾಣಿಕೆ ಯಾಗುತ್ತಿದ್ದುದರಿಂದ ತಕ್ಷಣ ಕಾರ್ಯಪ್ರವೃತ್ತವಾದ ಸ್ಪರ್ಶ್ ವೈದ್ಯರ ತಂಡ ಯಕೃತ್ ಅಂಗಾಗ ಕಸಿ ಹಿರಿಯ ಸಮಾಲೋಚಕ ಡಾ.ಮಹೇಶ್ ಗೋಪಸೆಟ್ಟಿ ನೇತೃತ್ವದಲ್ಲಿ ಶುಕ್ರವಾರ ರಾತ್ರಿ ಯಕೃತ್ ಕಸಿ ನೆರವೇರಿಸಿದ್ದು ಇದೀಗ ರೋಗಿಯು ಐಸಿಯುನಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ನಮ್ಮ ಮೆಟ್ರೋ, ಕರ್ನಾಟಕ ಅಂಗಾಂಗ ಕಸಿ ಪ್ರಾಧಿಕಾರ ಸೊಟ್ಟೋ ಹಾಗೂ ಸ್ಪರ್ಶ್ ಆಸ್ಪತ್ರೆಯ ನುರಿತ ವೈದ್ಯರು ಹಾಗೂ ತಂಡದ ಸಮನ್ವಯದಿಂದ ಇದು ಸಾಧ್ಯವಾಗಿದೆ. ಮೆಟ್ರೋ ನಿರ್ದೇಶಕ ಸುಮಿತ್ ಭಟ್ನಾಗರ್, ಮುಖ್ಯ ಸುರಕ್ಷತಾ ಅಧಿಕಾರಿ ಸೆಲ್ವಮ್ ಹಾಗೂ ಮೆಟ್ರೋ ಕಾರ್ಯಾಚರಣೆ ಮುಖ್ಯಸ್ಥ ರಂಗಪ್ಪ ಅವರ ಉಸ್ತುವಾರಿಯಲ್ಲಿ ಯಕೃತ್ ಸಾಗಣೆ ಕೈಗೊಳ್ಳಲಾಗಿತ್ತು ಎಂದು ಪ್ರಕಟಣೆ ತಿಳಿಸಿದೆ.

In #Bengaluru: In a first for Namma Metro, a donated liver was transported from Whitefield to Rajarajeshwari Nagar via metro train for a life-saving transplant. The organ traveled from Vydehi Hospital with doctors & security. Beating traffic!@timesofindia pic.twitter.com/VB2JAUiqEw

— TOI Bengaluru (@TOIBengaluru) August 2, 2025

share
ವಾರ್ತಾಭಾರತಿ
ವಾರ್ತಾಭಾರತಿ
Next Story
X