Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಂವಿಧಾನದ ವಿರುದ್ಧ ಇರುವವರನ್ನು ಕಿತ್ತು...

ಸಂವಿಧಾನದ ವಿರುದ್ಧ ಇರುವವರನ್ನು ಕಿತ್ತು ಎಸೆಯಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರಿನಲ್ಲಿ 'ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶ' ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ24 Feb 2024 12:32 PM IST
share
ಸಂವಿಧಾನದ ವಿರುದ್ಧ ಇರುವವರನ್ನು ಕಿತ್ತು ಎಸೆಯಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಫೆ.24: ನಾವು ಸಂವಿಧಾನದ ಮಾಲಕರು. ಸಂವಿಧಾನ ಕಿತ್ತು ಎಸೆಯುವುದರಲ್ಲಿ ನಮ್ಮ ಆಸಕಿಯಿಲ್ಲ. ಸಂವಿಧಾನದ ವಿರುದ್ಧ ಇರುವವರನ್ನು ಕಿತ್ತು ಎಸೆಯಬೇಕು ಎಂಬ ಅಬ್ರಹಾಂ ಲಿಂಕನ್ ಅವರ ಮಾತುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಲ್ಲೇಖಿಸಿದರು.

ನಗರದ ಅರಮನೆ ಮೈದಾನದಲ್ಲಿ ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಸಂವಿಧಾನದ ವಿರುದ್ಧ ಎರಡು ಅಪಪ್ರಚಾರಗಳು ನಡೆಯುತ್ತಿವೆ. ಸಂವಿಧಾನ ದಲಿತರ ಉದ್ಧಾರಕ್ಕಾಗಿದೆ ಹಾಗೂ ಸಾಮಾಜಿಕ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ಸ್ಪಷ್ಟವಾಗಿ ಹೇಳುವುದರಿಂದ ಇದರ ವಿರುದ್ಧ ಇರುವ ಜನರು ಅಪಪ್ರಚಾರ ಮಾಡುತ್ತಿದ್ದಾರೆ ಎಂಬುದನ್ನು ಅರಿಯಬೇಕು. ಸಂವಿಧಾನ ಜಾರಿಗೆ ಬಂದಾಗಿನಿಂದ ಈ ಅಪಪ್ರಚಾರ ನಡೆಯುತ್ತಿದೆ. ಇದನ್ನು ನಾವು ಯಾರೂ ಸಹಿಸಬಾರದು. ಸಂವಿಧಾನ ರಕ್ಷಣೆಯಾದರೆ ನಾವೆಲ್ಲರೂ ಉಳಿಯುತ್ತೇವೆ. ಇಲ್ಲದಿದ್ದರೆ ಅಪಾಯಕ್ಕೆ ಸಿಲುಕುತ್ತೇವೆ ಎಂದರು.

ಸಾಮಾಜಿಕ ಅಸಮಾನತೆಯನ್ನು ಅಳಿಸಿಹಾಕುವುದು ಪ್ರತಿ ಸರಕಾರದ ಜವಾಬ್ದಾರಿ.

ದೇಶದಲ್ಲಿ ಅಸಮಾನತೆಯನ್ನು ತೊಲಗಿಸಬೇಕು. ನಾವು ವೈರುಧ್ಯ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ಸಾಮಾಜಿಕ, ಆರ್ಥಿಕ ಅಸಮಾನತೆಯುಳ್ಳ ಸಮಾಜದಲ್ಲಿ ರಾಜಕೀಯ ಪ್ರಜಾಪ್ರಭುತ್ವ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಾಗ ಮಾತ್ರ ಯಶಸ್ವಿಯಾಗುತ್ತದೆ. ಇಲ್ಲದಿದ್ದರೆ ಅಸಮಾನತೆಯಿಂದ ನರಳುವವರು ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆ ಎಂದು ಅಂಬೇಡ್ಕರ್ ಹೇಳಿದ್ದರು. ಸಾಮಾಜಿಕ ಅಸಮಾನತೆಯನ್ನು ಅಳಿಸಿ ಹಾಕುವುದು ಪ್ರತೀ ಸರಕಾರದ ಜವಾಬ್ದಾರಿ. ಸಂವಿಧಾನ ಯಶಸ್ವಿಯಾಗಲು ಇದು ಯಾರ ಕೈಯಲ್ಲಿ ಇದೆ ಎನ್ನುವುದು ಮುಖ್ಯ

ಸಂವಿಧಾನ, ಸಮಾನತೆ, ಮಾನವ ಸಮಾಜದ ನಿರ್ಮಾಣದ ಪರವಾಗಿರುವವರ ಕೈಯಲ್ಲಿದ್ದರೆ ಸಂವಿಧಾನ ಯಶಸ್ವಿಯಾಗುತ್ತದೆ. ಸಂವಿಧಾನಕ್ಕೆ ವಿರುದ್ಧವಾಗಿರುವವರ ಕೈಯಲ್ಲಿದ್ದರೆ ನಮಗೆ ಉಳಿಗಾಲವಿಲ್ಲ. ಸಂವಿಧಾನದ ಆಶಯಗಳು ಈಡೇರಲು ಸಂವಿಧಾನದ ಪರವಾಗಿರುವವರ ಕೈಯಲ್ಲಿ ಅಧಿಕಾರವಿರಬೇಕು ಎಂದರು.

ಸಂವಿಧಾನ ಜಾರಿಯಾದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಸಂವಿಧಾನದ ಪೀಠಿಕೆ, ಆಶಯಗಳನ್ನು ರಾಜ್ಯದ ಜನರು ಅರ್ಥ ಮಾಡಿಕೊಳ್ಳಬೇಕೆಂದು 2024ರ ಜನವರಿ 26ರಿಂದ ರಾಜ್ಯದಲ್ಲಿ ಸಂವಿಧಾನ ಜಾಥಾ ಹಮ್ಮಿಕೊಳ್ಳಲಾಗಿದೆ. 31 ಜಿಲ್ಲೆಗಳಲ್ಲಿ ಸಂವಿಧಾನದ ಉದ್ದೇಶ, ಅಗತ್ಯ, ಅನಿವಾರ್ಯತೆಯನ್ನು ಜನರಿಗೆ ತಿಳಿಸುವ ಕೆಲಸ ಮಾಡಲಾಗಿದೆ. ಎರಡು ದಿನಗಳ ಕಾಲ ರಾಷ್ಟ್ರೀಯ ಏಕತೆ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಅತ್ಯುತ್ತಮ ಚಟುವಟಿಕೆ ಆಯೋಜಿಸಿದ್ದ ತುಮಕೂರು ಜಿಲ್ಲೆ, ದಾವಣಗೆರೆ, ಮೈಸೂರು, ಕೊಡಗು, ಬಳ್ಳಾರಿ ಜಿಲ್ಲೆಗಳಿಗೆ ಬಹುಮಾನ ಹಾಗೂ ನೆನಪಿನ ಕಾಣಿಕೆ ವಿತರಿಸಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ, ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್, ಸಚಿವ ಪ್ರಿಯಾಂಕ್ ಖರ್ಗೆ ಶಾಸಕ ಸೋಮಶೇಖರ್,ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X