Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ದೇಶದಲ್ಲಿ ಸಾಂವಿಧಾನಿಕ ಮೌಲ್ಯಗಳಿಗೆ...

ದೇಶದಲ್ಲಿ ಸಾಂವಿಧಾನಿಕ ಮೌಲ್ಯಗಳಿಗೆ ಧಕ್ಕೆ: ಜೀವನಹಳ್ಳಿ ಆರ್. ವೆಂಕಟೇಶ್

ವಾರ್ತಾಭಾರತಿವಾರ್ತಾಭಾರತಿ29 Jan 2024 10:16 PM IST
share
ದೇಶದಲ್ಲಿ ಸಾಂವಿಧಾನಿಕ ಮೌಲ್ಯಗಳಿಗೆ ಧಕ್ಕೆ: ಜೀವನಹಳ್ಳಿ ಆರ್. ವೆಂಕಟೇಶ್

ಬೆಂಗಳೂರು: ದೇಶದಲ್ಲಿ ಸ್ವಾತಂತ್ರ್ಯ ಸಮಾನತೆ ಸಾಮಾಜಿಕ ನ್ಯಾಯ, ಭಾತೃತ್ವ ಮತ್ತು ಸೌಹಾರ್ದ ಎಂಬ ಸಾಂವಿಧಾನಿಕ ಮೌಲ್ಯಗಳಿಗೆ ಧಕ್ಕೆ ತರುವ ಕೆಲಸವಾಗುತ್ತಿದೆ ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಕಾರ್ಯಕಾರಿ ಸಂಚಾಲಕ ಜೀವನಹಳ್ಳಿ ಆರ್.ವೆಂಕಟೇಶ್ ಕಳವಳ ವ್ಯಕ್ತಪಡಿಸಿದ್ದಾರೆ.

ಬೀದರ್ ನ ಅಂಬೇಡ್ಕರ್ ವೃತ್ತದಲ್ಲಿ ವಿವಿಧ ದಲಿತ ಸಂಘಟನೆಗಳ ವತಿಯಿಂದ ನಡೆದ ಪ್ರಜಾಪ್ರಭುತ್ವ ರಕ್ಷಣೆಗಾಗಿ ಬೃಹತ್ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ಮಹಿಳೆಯರು, ಅಲ್ಪಸಂಖ್ಯಾತರು, ಆದಿವಾಸಿಗಳು, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಮೇಲೆ ನಿರಂತರ ಶೋಷಣೆಯನ್ನು ಎದುರುಸುತ್ತಿರುವ ಈ ಸಂದರ್ಭದಲ್ಲಿ ನಾವು 75ನೆ ಗಣರಾಜ್ಯೋತ್ಸವವನ್ನು ಆಚರಿಸಿದ್ದೇವೆ ಎಂದರು.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ 2022ರ ವಾರ್ಷಿಕ ವರದಿ ಪ್ರಕಾರ ಮಹಿಳೆಯರು, ದಲಿತರ ವಿರುದ್ಧದ ಅಪರಾಧಗಳು ಹೆಚ್ಚಳವಾಗಿವೆ. ಜಾತಿವಾದ-ಕೋಮುವಾದ, ಭಯೋತ್ಪಾದನೆ ದೇಶದಲ್ಲಿ ತಾಂಡವವಾಡುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಎದುರಾಗಿದೆ ಎಂದು ಅವರು ಎಚ್ಚರಿಸಿದರು.

ದಲಿತರು ಎಂದೂ ಹಿಂಸೆಯ ಮಾರ್ಗವನ್ನು ಅನುಸರಿಸಿಲ್ಲ. ಅದಕ್ಕೆ ಮಾದರಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಬುದ್ಧ, ಬಸವರ ಆದರ್ಶಗಳು. ಗಾಂಧಿಯನ್ನು ಡಿಎಸ್‍ಎಸ್‍ನ ಕೆಲ ಮುಖಂಡರು ಟೀಕಿಸಿರಬಹುದು. ಆದರೆ ಆರೆಸ್ಸೆಸ್‍ನಂತೆ ದ್ವೇಷಿಸುತ್ತಿಲ್ಲ. ಗೋಡ್ಸೆ ಗಾಂಧಿ ಕಾಲಿಗೆ ನಮಸ್ಕಾರ ಮಾಡಿ ನಂತರ ಗುಂಡು ಇಟ್ಟ. ಅದರಂತೆ ಸಂಸತ್ ಒಳಗೆ ಅಂಬೇಡ್ಕರ್ ಫೋಟೋಗೆ ಕೈ ಮುಗಿದು ಹೊರಗೆ ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಾರೆ ಎಂದು ವೆಂಕಟೇಶ್ ಟೀಕಿಸಿದರು.

ಕೇಂದ್ರದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವ ಮುನ್ನ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಸುಳ್ಳು ಭರವಸೆ ಕೊಟ್ಟಿತ್ತು. ಇದನ್ನು ಪ್ರಶ್ನೆ ಮಾಡಿದರೆ ರಾಜ್ಯದ ಸಂಸದೆ ಶೋಭಾ ಕರಾಂದ್ಲಾಜೆಯವರು ಹೆಚ್ಚಿನ ಶಿಕ್ಷಣ ಪಡೆಯುತ್ತಿರುವುದೇ ನಿರುದ್ಯೋಗ ಹೆಚ್ಚಳಕ್ಕೆ ಕಾರಣ ಎನ್ನುತ್ತಾರೆ. ಇವರ ಮಾತನ್ನು ಕೇಳಿದರೆ ದೇಶದಲ್ಲಿ ಯಾರೂ ಶಿಕ್ಷಣ ಪಡೆಯದೇ ಇರಬೇಕಾ ಎಂದು ವೆಂಕಟೇಶ್ ಪ್ರಶ್ನಿಸಿದರು.

ದೇಶದ ಪ್ರಧಾನಿಯವರು ಸಬ್‌ಕಾ ಸಾತ್-ಸಬ್ ಕಾ ವಿಕಾಸ್ ಎನ್ನುತ್ತಾರೆ. ಆದರೆ ಅಮಿತ್ ಶಾ ಅವರು ಮುಸ್ಲಿಮ್ ಮೀಸಲಾತಿ ಮರಳಿ ಪಡೆಯಲು ಬಿಡುವುದಿಲ್ಲ ಎನ್ನುತ್ತಾರೆ. ಆಗ ಹೇಗೆ ಸಬ್ ಕಾ ಸಾತ್- ಸಬ್ ಕಾ ವಿಕಾಸ್ ಆಗುತ್ತದೆ. ಇನ್ನು ಒಳ ಮೀಸಲಾತಿ ಕನ್ನಡಿ ಒಳಗಿನ ಗಂಟು, ಏಕೆಂದರೆ ಒಳ ಮೀಸಲಾತಿ ನೀಡಲು ರಾಜ್ಯ ಸರಕಾರಗಳು, ಸಮಿತಿ, ಉಪಸಮಿತಿ ರಚನೆ ಮಾಡುತ್ತಾರೆ. ನಂತರ ಅದನ್ನು ಕೇಂದ್ರಕ್ಕೆ ಕಳುಹಿಸಿಕೊಡುತ್ತಾರೆ. ಕೇಂದ್ರ ಸರಕಾರ ಅದನ್ನು ಉನ್ನತ ಮಟ್ಟದ ಸಮಿತಿಯನ್ನು ರಚಿಸುತ್ತದೆ. ಆದರೆ ಇಡಬ್ಲ್ಯೂಎಸ್‍ಗೆ ಈ ತರದ ಯಾವುದೇ ಪ್ರಕ್ರಿಯೆಗಳು ಇರುವುದಿಲ್ಲ. ಈ ದೇಶದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಸಿಗಬೇಕೆಂದು ಸಂವಿಧಾನ ಸಾರುತ್ತದೆ. ಆದರೆ ಈಗ ಉದ್ಯಮಿಗಳಿಂದ, ಉದ್ಯಮಿಗಳಿಗಾಗಿ, ಉದ್ಯಮಿಗಳಿಗೋಸ್ಕರ ಎಂಬಂತಾಗಿದೆ ಎಂದು ವೆಂಕಟೇಶ್ ದೂರಿದರು.

ದಲಿತರ ಸಿಟ್ಟು, ಆಕ್ರೋಶ ಅಪಮಾನಗಳನ್ನು ಬಂಡವಾಳವನ್ನಾಗಿಸಿಕೊಂಡು ನಮ್ಮನ್ನು ಹಿಂಸೆಯತ್ತ ಪ್ರಚೋದಿಸುವಂಥ ಹುನ್ನಾರ ಜಾತಿವಾದಿ-ಕೋಮುವಾದಿ ಶಕ್ತಿಗಳಿಂದ ನಡೆಯುತ್ತಿದೆ. ಅವುಗಳಿಂದ ದಲಿತರಾದ ನಾವು ಜಾಗರೂಕರಾಗಿರಬೇಕು. ಇಂದಿಗೂ ಹಿಂದು ಸಮಾಜದಲ್ಲಿ ಮನುಸ್ಮೃತಿ ಮಾನ್ಯತೆಯನ್ನು ಪಡದುಕೊಂಡಿದೆ. ಹಿಂದು ಧರ್ಮದಲ್ಲಿ ನಾವು ಅಸ್ಪೃಶ್ಯರಾಗಿರುವ ಕಾರಣಕ್ಕೆ ಪ್ರಗತಿಯ ಎಲ್ಲಾ ಬಾಗಿಲುಗಳು ನಮಗೆ ಮುಚ್ಚಿಬಿಡುತ್ತಿವೆ ಎಂದು ವೆಂಕಟೇಶ್ ಎಚ್ಚರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X