ಎಸೆಸೆಲ್ಸಿ ಪರೀಕ್ಷೆ-2 : ಮೂರು ಮಂದಿ ವಿದ್ಯಾರ್ಥಿಗಳು ಡಿಬಾರ್
ಸಾಂದರ್ಭಿಕ ಚಿತ್ರ
ಬೆಂಗಳೂರು : ರಾಜ್ಯಾದ್ಯಂತ 2024ರ ಎಸೆಸೆಲ್ಸಿ ಪರೀಕ್ಷೆ-2 ನಡೆಯುತ್ತಿದ್ದು, ಮಂಗಳವಾರದಂದು ನಡೆದ ಗಣಿತ ಪರೀಕ್ಷೆಯಲ್ಲಿ ಮೂರು ಮಂದಿ ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ.
ಕಲಬುರಗಿಯ ಆರಾಧನಾ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ನ ಪರೀಕ್ಷ ಕೇಂದ್ರದಲ್ಲಿ ಪರೀಕ್ಷೆಯನ್ನು ಬರೆಯುತ್ತಿದ್ದ ವಿದ್ಯಾರ್ಥಿಗಳ ಪೈಕಿ ಮೂರು ಮಂದಿ ನಕಲು ಮಾಡುತ್ತಿದ್ದರು. ಇದರ ಹಿನ್ನೆಲೆಯಲ್ಲಿ ಮೂರು ಮಂದಿಯನ್ನು ಡಿಬಾರ್ ಮಾಡಲಾಗಿದೆ.
1,79,169 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದು, 1,56,658 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ. 22,511 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
Next Story