Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅನಧಿಕೃತವಾಗಿ ಒಳಚರಂಡಿಗೆ ತ್ಯಾಜ್ಯ ನೀರು...

ಅನಧಿಕೃತವಾಗಿ ಒಳಚರಂಡಿಗೆ ತ್ಯಾಜ್ಯ ನೀರು ; ಜಲಮಂಡಳಿಯಿಂದ ಪರಿಶೀಲನೆ ಚುರುಕು

ವಾರ್ತಾಭಾರತಿವಾರ್ತಾಭಾರತಿ11 May 2024 7:40 PM IST
share
ಅನಧಿಕೃತವಾಗಿ ಒಳಚರಂಡಿಗೆ ತ್ಯಾಜ್ಯ ನೀರು ; ಜಲಮಂಡಳಿಯಿಂದ ಪರಿಶೀಲನೆ ಚುರುಕು

ಬೆಂಗಳೂರು : ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ, ಅನಧಿಕೃತವಾಗಿ ತ್ಯಾಜ್ಯ ನೀರನ್ನು ಒಳಚರಂಡಿಗೆ ಹಾಗೂ ಮಳೆ ಕಾಲುವೆಗೆ ಹರಿಸುತ್ತಿರುವವರನ್ನು ಪತ್ತೆ ಹಚ್ಚುವ ಕಾರ್ಯವನ್ನು ಬೆಂಗಳೂರು ಜಲಮಂಡಳಿ ಚುರುಕುಗೊಳಿಸಿದೆ.

17,793 ಕಡೆಗಳಲ್ಲಿ ಸರ್ವೆ ನಡೆಸಲಾಗಿದ್ದು, 2137 ಅನಧಿಕೃತ ಸಂಪರ್ಕಗಳನ್ನು ಪತ್ತೆ ಹಚ್ಚಲಾಗಿದೆ. ಸಕ್ರಮಗೊಳಿಸಲು ಮುಂದಾಗದೆ ಇರುವವರ ಮೇಲೆ ದಂಡ ವಿಧಿಸುವ ನೋಟೀಸ್ ನೀಡಲಾಗುತ್ತಿದ್ದು, ಅನಧಿಕೃತ ಸಂಪರ್ಕಗಳನ್ನು ಸಕ್ರಮಗೊಳಿಸಿಕೊಳ್ಳುವ ನಿಟ್ಟಿನಲ್ಲಿ ಜನರು ಸ್ವಯಂ ಪ್ರೇರಿತರಾಗಿ ಮುಂದಾಗಬೇಕು ಎಂದು ಜಲಮಂಡಳಿ ಅಧ್ಯಕ್ಷ ಡಾ.ವಿ. ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ಜಲಮಂಡಳಿಯಿಂದ ಅಧಿಕೃತವಾಗಿ ಸಂಪರ್ಕ ಪಡೆಯದೆ ಕೆಲವೆಡೆ ಅನಧಿಕೃತವಾಗಿ ತ್ಯಾಜ್ಯ ನೀರನ್ನು ಒಳಚರಂಡಿಗೆ ಹರಿಸಲಾಗುತ್ತಿದೆ. ಹೀಗೆ ಅನಧಿಕೃತ ಸಂಪರ್ಕದಿಂದ ಒಳಚರಂಡಿ ಮೇಲೆ ಒತ್ತಡ ಹೆಚ್ಚಾಗಿ ಹಲವಾರು ಕಡೆಗಳಲ್ಲಿ ರಸ್ತೆಗಳಲ್ಲಿ ತ್ಯಾಜ್ಯ ನೀರು ಹರಿಯುವ ಸಾಧ್ಯತೆ ಹೆಚ್ಚಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಆಗುತ್ತದೆ. ಇದನ್ನು ತಡೆಯುವ ದೃಷ್ಟಿಯಿಂದ ಅನಧಿಕೃತ ಸಂಪರ್ಕಗಳನ್ನು ಸಕ್ರಮಗೊಳಿಸಿಕೊಳ್ಳಲು ಎ.24 ರಿಂದ ಅವಕಾಶ ನೀಡಲಾಗಿತ್ತು. ಅಲ್ಲದೇ, ಅಧಿಕಾರಿಗಳು ಪರಿಶೀಲನೆ ಕಾರ್ಯವನ್ನು ಚುರುಕುಗೊಳಿಸುವಂತೆಯೂ ಸೂಚನೆ ನೀಡಲಾಗಿತ್ತು ಎಂದು ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ತಮ್ಮ ವ್ಯಾಪ್ತಿಯಲ್ಲಿ ಅಧಿಕಾರಿಗಳು ಅನಧಿಕೃತವಾಗಿ ತ್ಯಾಜ್ಯ ನೀರನ್ನು ಒಳಚರಂಡಿಗೆ ಹರಿಯಬಿಡುತ್ತಿರುವುದರ ಪರಿಶೀಲನೆ ಕಾರ್ಯವನ್ನು ಚುರುಕುಗೊಳಿಸಿದ್ದಾರೆ. ಇಂದಿನವರೆಗೂ ನಗರದಲ್ಲಿ 17,793 ಕಡೆಗಳಲ್ಲಿ ಸರ್ವೆಯನ್ನು ನಡೆಸಲಾಗಿದೆ. 587 ಅಪಾರ್ಟ್‍ಮೆಂಟ್‍ಗಳನ್ನು ಒಳಗೊಂಡಂತೆ ಅನಧಿಕೃತವಾಗಿ ಸಂಪರ್ಕ ಪಡೆದಿರುವ 2,137 ಸಂಪರ್ಕಗಳನ್ನ ಪತ್ತೆಹಚ್ಚಲಾಗಿದೆ. ಇವುಗಳಲ್ಲಿ 260 ಸಂಪರ್ಕಗಳು ಅಧಿಕೃತಗೊಳಿಸಲು ಅರ್ಜಿಯನ್ನು ಸಲ್ಲಿಸಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

149 ಸಂಪರ್ಕಗಳಿಗೆ ಡಿಮ್ಯಾಂಡ್ ನೋಟೀಸ್ ಜಾರಿಗೊಳಿಸಲಾಗಿದ್ದು, 60 ಸಂಪರ್ಕಗಳಿಂದ ದಂಡವನ್ನು ವಸೂಲು ಮಾಡಲಾಗಿದೆ. ಇದರ ಜೊತೆಯಲ್ಲೇ 1,390 ಸಂಪರ್ಕಗಳಿಗೆ ನೋಟೀಸ್ ಜಾರಿಗೊಳಿಸಲಾಗಿದೆ. ಮಳೆಗಾಲದಲ್ಲಿ ಅನಧಿಕೃತ ಸಂಪರ್ಕಗಳಿಂದ ಬರುವಂತಹ ತ್ಯಾಜ್ಯ ನೀರು ನಮ್ಮ ಒಳಚರಂಡಿ ವ್ಯವಸ್ಥೆಯ ಮೇಲೆ ಒತ್ತಡವನ್ನು ಹೆಚ್ಚು ಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ.

ಅಲ್ಲದೇ ಇದನ್ನು ತಡೆಯುವುದು ಹಾಗೂ ನಗರವನ್ನು ಸ್ವಚ್ಛವಾಗಿ ಇರಿಸುವುದು ನಮ್ಮ ಗುರಿಯಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ತಮ್ಮ ಅನಧಿಕೃತ ಸಂಪರ್ಕಗಳನ್ನು ಸಕ್ರಮಗೊಳಿಸಿಕೊಳ್ಳಲು ಸ್ವಯಂ ಪ್ರೇರಿತರಾಗಿ ಮುಂದಾಗಬೇಕು. ಇಲ್ಲದಿದ್ದಲ್ಲಿ ಮುಂದಿನ ವಾರದಿಂದ ಇನ್ನೂ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರಾಮ್ ಪ್ರಸಾತ್ ಮನೋಹರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X