Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಗೋಲ್ಡನ್ ಚಾರಿಯೇಟ್ ರೈಲು ಪ್ರವಾಸದಲ್ಲಿ...

ಗೋಲ್ಡನ್ ಚಾರಿಯೇಟ್ ರೈಲು ಪ್ರವಾಸದಲ್ಲಿ ಐತಿಹಾಸಿಕ ಸ್ಥಳಗಳ ಅನಾವರಣ : ಸಚಿವ ಎಚ್.ಕೆ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ21 Dec 2024 6:18 PM IST
share
ಗೋಲ್ಡನ್ ಚಾರಿಯೇಟ್ ರೈಲು ಪ್ರವಾಸದಲ್ಲಿ ಐತಿಹಾಸಿಕ ಸ್ಥಳಗಳ ಅನಾವರಣ : ಸಚಿವ ಎಚ್.ಕೆ.ಪಾಟೀಲ್

ಬೆಂಗಳೂರು :ಗೋಲ್ಡನ್ ಚಾರಿಯೇಟ್ (ಸುವರ್ಣ ರಥ) ರೈಲು ಪ್ರವಾಸ ದಕ್ಷಿಣ ಭಾರತದ ಶ್ರೀಮಂತ ಸಂಸ್ಕೃತಿ, ಪರಂಪರೆ ಹಾಗೂ ಐತಿಹಾಸಿಕ ಸ್ಥಳಗಳ ಅನಾವರಣಕ್ಕೆ ಮುಕುಟಪ್ರಾಯವೆನಿಸಿದೆ ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.

ಯಶವಂತಪುರ ರೈಲು ನಿಲ್ದಾಣದ ಫ್ಲಾಟ್ ಫಾರಂ 6 ರಲ್ಲಿ ಗೋಲ್ಡನ್ ಚಾರಿಯೇಟ್ ಐಷಾರಾಮಿ ರೈಲು ಸೇವೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಗೋಲ್ಡನ್ ಚಾರಿಯೇಟ್ ರೈಲು ಸೇವೆಗಳು 2018 ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು ಅದನ್ನು ಮರುಚಾಲನೆಗೊಳಿಸಲಾಗಿದೆ. ಈ ರೈಲಿನ ಮಾಲೀಕತ್ವವನ್ನು ಶೇ.50ರಷ್ಟು ಭಾರತೀಯ ರೈಲ್ವೇ, ಶೇ.25ರಷ್ಟು ಪ್ರವಾಸೋದ್ಯಮ ಸಚಿವಾಲಯ ಭಾರತ ಸರ್ಕಾರ ಹಾಗೂ ಕೆಎಸ್ಟಿಡಿಸಿಯ ಶೇ.25ರಷ್ಟು ಷೇರುಗಳ ಮೂಲಕ ರಾಜ್ಯ ಸರ್ಕಾರ ಹೊಂದಿದೆ. ರೈಲಿನ ಒಳಾಂಗಣವನ್ನು ಕಲಾತ್ಮಕವಾಗಿ ನಿರ್ಮಿಸಲಾಗಿದೆ.

18 ಕೋಚ್‌ಗಳಲ್ಲಿ ಕರ್ನಾಟಕ ಆಳಿದ ರಾಜವಂಶಸ್ಥರುಗಳಾದ ಕದಂಬ, ಹೊಯ್ಸಳ, ವಿಜಯನಗರ ಚಾಲುಕ್ಯರ ಹೆಸರನ್ನು ಇಡಲಾಗಿದೆ. ಊಟ, ವಸತಿಗೆ ಐಷಾರಾಮಿ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಗೋಲ್ಡನ್ ಚಾರಿಯೇಟ್ ಪ್ರವಾಸೋದ್ಯಮ ವಿಶ್ವದ ಪ್ರಸಿದ್ಧ ಪರಂಪರೆಯ ತಾಣಗಳ ಜೊತೆಗೆ ಪಶ್ಚಿಮ ಘಟ್ಟಗಳು, ಪ್ರಾಚೀನ ಕಡಲ ತೀರಗಳು, ಸಾಂಸ್ಕೃತಿಕ ತಾಣಗಳಿಗೆ ಪ್ರವಾಸಿಗರನ್ನು ಕರೆದೊಯ್ಯುತ್ತದೆ. ಇದರಿಂದ ರೈಲು ಹೋಟೆಲ್ಗಳು, ಕುಶಲಕರ್ಮಿಗಳು, ಪ್ರವಾಸ ನಿರ್ವಾಹಕರಿಗೆ ಆದಾಯ ಕಲ್ಪಿಸಿದಂತಾಗುತ್ತದೆ. ಈ ವಿಶೇಷ ರೈಲು ಪ್ರವಾಸ ಜಾಗತಿಕ ಮಟ್ಟದಲ್ಲಿ ವಿಶ್ವದ ಏಳು ಅತ್ಯುತ್ತಮ ಐಷಾರಾಮಿ ರೈಲು ಪ್ರಯಾಣಗಳಲ್ಲಿ ಗುರುತಿಸಲಾಗಿದ್ದು, ಹಲವಾರು ಪ್ರಶಸ್ತಿ ಪಡೆದುಕೊಂಡಿದೆ ಎಂದರು.

ಈ ರೈಲಿಗೆ 44 ಸುಸುಜ್ಜಿತ ಕ್ಯಾಬಿನ್ಗಳು, ಎನ್ ಸೂಟ್ ಸ್ನಾನಗೃಹ, ವೈಫೈ ಸಹ ಒಳಗೊಂಡಿದೆ. ರುಚಿ ಮತ್ತು ನಳಪಾಕ ಹೆಸರಿನ ಎರಡು ಹೋಟೆಲ್ಗಳು ಭಾರತೀಯ ಮತ್ತು ಅಂತರರಾಷ್ಟ್ರೀಯ ಪಾಕಪದ್ದತಿ ಸೇವೆ ನೀಡುತ್ತದೆ. ಲಾಂಜ್ ಬಾರ್, ಫಿಟ್ನೆಸ್ ಸೆಂಟರ್ ಇತರೆ ಸೌಕರ್ಯ ಕಲ್ಪಿಸಲಾಗಿದೆ ಎಂದರು.

ಎಲ್ಲೆಲ್ಲಿ ಪ್ರವಾಸ:

ಜೂವೆಲ್ ಆಫ್ ಸೌತ್ ಪ್ರವಾಸ ಇದೇ ಡಿ.21 ರಿಂದ 26 ರವರೆಗೆ ಬೆಂಗಳೂರಿನಿಂದ ಆರಂಭಗೊಂಡು ಮೈಸೂರು, ಕಾಂಚೀಪುರಂ, ಮಹಾಬಲಿಪುರಂ, ತಂಜಾವೂರು, ಕೊಚ್ಚಿನ್, ಮರಾರಿಕುಲಂಗೆ ತೆರಳಿ ನಂತರ ಬೆಂಗಳೂರಿಗೆ ಹಿಂದಿರುಗುತ್ತದೆ. ಇದು ಐದು ದಿನಗಳ ಪ್ರವಾಸವಾಗಿದ್ದು, ಇದಕ್ಕೆ ತಗಲುವ ವೆಚ್ಚ ಒಬ್ಬರಿಗೆ ರೂ 4,07,700 ರೂ., ಪ್ರೈಡ್ ಆಫ್ ಕರ್ನಾಟಕ ಪ್ರವಾಸ ದಿನಾಂಕ ಫ್ರೆ.1, 2025 ರಿಂದ ಫ್ರೆ.6, 2025 ರವರೆಗೆ ಬೆಂಗಳೂರಿನಿಂದ - ನಂಜನಗೂಡು- ಮೈಸೂರು- ಹಳೇಬೀಡು, ಚಿಕ್ಕಮಗಳೂರು, ಹೊಸಪೇಟೆ-ಗೋವಾ- ಬೆಂಗಳೂರನ್ನು ಒಳಗೊಂಡಿದ್ದು ಇದಕ್ಕೆ ತಗಲುವ ವೆಚ್ಚ 2,71,800 ರೂ. ಸೋಜರ್ನ್ ಆಪ್ ಸೌತ್ ಚಾರ್ಟರ್ಡ್ ಪ್ರವಾಸವನ್ನು ಡಿ.29, 2024 ರಿಂದ ಫ್ರೆ.12, 2025 ರವರೆಗೆ ಆಯೋಜಿಸಲಾಗಿದೆ.

ಭಾರತ ಅದರಲ್ಲೂ ದಕ್ಷಿಣ ಭಾರತದ ಪ್ರವಾಸೋದ್ಯಮವನ್ನು ಜಾಗತಿಕವಾಗಿ ಗುರುತಿಸಲು ಈ ಪ್ರವಾಸವು ಹೆಚ್ಚು ಸಹಕಾರಿಯಾಗಿದೆ. 2029 ರ ವೇಳೆಗೆ ಪ್ರವಾಸಿಗರ ಸಂಖ್ಯೆಯನ್ನು ಹೆಚ್ಚಿಸಲು ಕರ್ನಾಟಕ ಭಾರತೀಯ ರಾಜ್ಯಗಳ ಪಟ್ಟಿಯಲ್ಲಿ 3ನೇ ಅಗ್ರಸ್ಥಾನ ಪಡೆಯುವ ಗುರಿ ಸಹ ಹೊಂದಿದೆ. ಅಲ್ಲದೆ ಪ್ರವಾಸಿ ತಾಣದ ಮಹತ್ವವನ್ನು ಜನರಿಗೆ ತಿಳಿಸಲು ಈ ಪ್ರವಾಸ ಹೇಳಿ ಮಾಡಿಸಿದಂತಿದೆ.

ಕಾರ್ಯಕ್ರಮದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸಲ್ಮಾ ಕೆ.ಫಾಹಿಮ್, ಕೆಎಸ್ಟಿಡಿಸಿ ಅಧ್ಯಕ್ಷ ಎಂ.ಶ್ರೀನಿವಾಸ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X