ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಮರು ಸದಸ್ಯತ್ವ ಸ್ವೀಕರಿಸಿದ ಯು.ಟಿ.ಖಾದರ್

ಬೆಂಗಳೂರು : ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿ ಸಚಿವ ಸಂಪುಟ ಸೇರಲು ಸಜ್ಜಾಗುತ್ತಿರುವ ಹಿರಿಯ ನಾಯಕ ಯು.ಟಿ.ಖಾದರ್ ಅವರು ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಮರು ಸದಸ್ಯತ್ವ ಸ್ವೀಕರಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ತಮ್ಮ ರಾಜಕೀಯ ಜೀವನದ ಹೊಸ ಜವಾಬ್ದಾರಿಯತ್ತ ಹೆಜ್ಜೆ ಇಡುತ್ತಿರುವುದಾಗಿ ತಿಳಿಸಿದ್ದಾರೆ.
"ದೇಶದ ಸ್ವಾತಂತ್ರ್ಯ ಹೋರಾಟದಿಂದಲೇ ಜನರ ಪರವಾಗಿ ನಿಂತಿರುವ ಕಾಂಗ್ರೆಸ್ ಪಕ್ಷ, ಇಂದು ಕೂಡಾ ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಅಭಿವೃದ್ಧಿಯ ಮೌಲ್ಯಗಳನ್ನು ಕಾಪಾಡುತ್ತಾ ಸಾಗುತ್ತಿದೆ. ಬಡವರು, ರೈತರು, ಕಾರ್ಮಿಕರು ಹಾಗೂ ಮಧ್ಯಮ ವರ್ಗದ ಜನರ ಬದುಕು ಉತ್ತಮವಾಗಬೇಕು ಎಂಬ ಧ್ಯೇಯದೊಂದಿಗೆ ಕೆಲಸ ಮಾಡುತ್ತಿರುವುದು ಕಾಂಗ್ರೆಸ್ ಪಕ್ಷದ ವೈಶಿಷ್ಟ್ಯ. ಧರ್ಮ, ಜಾತಿ, ಭಾಷೆ ಎನ್ನುವ ಭೇದಗಳನ್ನು ಮೀರಿ, “ಒಂದು ಭಾರತ – ಸಮಾನ ಅವಕಾಶಗಳು” ಎಂಬ ಕನಸನ್ನು ನನಸಾಗಿಸಲು ಕಾಂಗ್ರೆಸ್ ಸದಾ ಬದ್ಧವಾಗಿದೆ" ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
Next Story






