Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಉರ್ದು ಹಬ್ಬ’ ಆಚರಣೆ ವೈಯಕ್ತಿಕ...

‘ಉರ್ದು ಹಬ್ಬ’ ಆಚರಣೆ ವೈಯಕ್ತಿಕ ಅಭಿಪ್ರಾಯ : ಯು.ಟಿ.ಖಾದರ್ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ1 Oct 2026 7:51 PM IST
share
‘ಉರ್ದು ಹಬ್ಬ’ ಆಚರಣೆ ವೈಯಕ್ತಿಕ ಅಭಿಪ್ರಾಯ : ಯು.ಟಿ.ಖಾದರ್ ಸ್ಪಷ್ಟನೆ

ಬೆಂಗಳೂರು : ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಉರ್ದು ಹಬ್ಬ ಆಚರಣೆ ಮಾಡಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿತ್ತು. ಈ ಬಗ್ಗೆ ಸರಕಾರದ ಮಟ್ಟದಲ್ಲಿ ಯಾವುದೆ ತೀರ್ಮಾನವಾಗಿರಲಿಲ್ಲ ಎಂದು ಆರೋಗ್ಯ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಯು.ಟಿ.ಖಾದರ್ ಸ್ಪಷ್ಟಪಡಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ಭಾಷೆಗೂ ತನ್ನದೇ ಆದ ಮಹತ್ವ, ಇತಿಹಾಸ ಇರುತ್ತದೆ. ಅದರಲ್ಲಿ ರಾಜಕೀಯ ಬೆರೆಸುವುದು ಸರಿಯಲ್ಲ. ಉರ್ದು ಭಾಷೆಯ ಸಾಹಿತ್ಯ ಶ್ರೀಮಂತಿಕೆ, ಕೊಡುಗೆ, ಸಂಸ್ಕೃತಿ ಕುರಿತು ಹೆಚ್ಚು ಜನರಿಗೆ ಪರಿಚಯವಾಗಲಿ ಎಂಬ ಕಾರಣಕ್ಕೆ ಉರ್ದು ಹಬ್ಬ ಆಚರಿಸಲು ಚಿಂತನೆ ನಡೆಸಲಾಗಿತ್ತು ಎಂದು ಹೇಳಿದರು.

ಕೇವಲ ಮೂರು ಗಂಟೆಗಳ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿತ್ತು. ನಾನು ಸ್ಪೀಕರ್ ಆಗಿದ್ದಾಗ ವಿಧಾನಸೌಧದಲ್ಲಿ ಯಕ್ಷಗಾನ ಕಾರ್ಯಕ್ರಮ ಆಯೋಜಿಸಲು ಚಿಂತನೆ ನಡೆಸಿದ್ದೆ. ಆದರೆ, ಕಾರಣಾಂತರಗಳಿಂದ ಸಾಧ್ಯವಾಗಿಲ್ಲ. ಪುಸ್ತಕ ಮೇಳ ಆಯೋಜಿಸಿದೆ ಜನ ಸಾಮಾನ್ಯರಿಂದ ಉತ್ತಮ ಸ್ಪಂದನೆ ಸಿಕ್ಕಿತ್ತು ಎಂದು ಖಾದರ್ ತಿಳಿಸಿದರು.

ಸೌಹಾರ್ದಯುತ ಸಮಾಜ ನಿರ್ಮಾಣವಾಗಬೇಕು ಎಂಬುದು ನಮ್ಮ ಉದ್ದೇಶ. ಆದರೆ, ಈ ಕಾರ್ಯಕ್ರಮದಿಂದ ತೊಂದರೆ ಆಗುತ್ತದೆ ಎಂದಾದರೆ ಅದನ್ನು ಮಾಡಲು ಹೋಗುವುದಿಲ್ಲ ಎಂದು ಖಾದರ್ ಹೇಳಿದರು.

‘ನಾವು ಉರ್ದು ಸೇರಿದಂತೆ ಯಾವುದೆ ಭಾಷೆಯ ವಿರೋಧಿಗಳಲ್ಲ. ಉರ್ದು ಹಬ್ಬ ಮಾಡಲು ಬೆಂಗಳೂರಿನಲ್ಲಿ ಬೇಕಾದಷ್ಟು ಜಾಗಗಳಿವೆ. ನಾಡಿನ ಶಕ್ತಿಸೌಧ ವಿಧಾನಸೌಧವೇ ಬೇಕಾಗಿಲ್ಲ. ರಾಜ್ಯ ಸರಕಾರವೆ ಮುಂದೆ ನಿಂತು ನಾಡಿನ ನೆಮ್ಮದಿಯನ್ನು, ಸೌಹಾರ್ದವನ್ನು ಹಾಳುಗೆಡಹಲು ನಿಂತರೆ ನಾವು ಸುಮ್ಮನಿರುವುದಿಲ್ಲ. ಸರಕಾರ ಏನಾದರೂ ತಾನು ಮಾಡಿದ್ದೆ ಸರಿ ಎಂದು ದುಸ್ಸಾಹಸಕ್ಕೆ ಇಳಿದರೆ, ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ’

-ಟಿ.ಎ.ನಾರಾಯಣಗೌಡ, ಕರವೇ, ರಾಜ್ಯಾಧ್ಯಕ್ಷ

ಸರಕಾರ ಯಾವುದೆ ಅನುಮತಿ ನೀಡಿಲ್ಲ: ಸಿಎಂ ಕಚೇರಿ

‘ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಯಾವುದೇ ಸರಕಾರಿಯೇತರ ಕಾರ್ಯಕ್ರಮಗಳಿಗೆ ಆಸ್ಪದ ಇರುವುದಿಲ್ಲ. ಕೆಲವು ಮಾಧ್ಯಮಗಳಲ್ಲಿ ಖಾಸಗಿ ಕಾರ್ಯಕ್ರಮ ನಡೆಯುತ್ತದೆ ಎಂದು ಬಿಂಬಿಸಿರುವುದು ಸಂಪೂರ್ಣ ಸುಳ್ಳು. ಸರಕಾರವು ಇಂತಹ ಯಾವುದೇ ಅನುಮತಿ ನೀಡಿಲ್ಲ’ ಎಂದು ಮುಖ್ಯಮಂತ್ರಿ ಕಚೇರಿ ಸ್ಪಷ್ಟಪಡಿಸಿದೆ

Tags

U.T. Khader
share
ವಾರ್ತಾಭಾರತಿ
ವಾರ್ತಾಭಾರತಿ
Next Story
X