Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವಿಬಿ ಜಿ-ರಾಮ್ ಜಿ ಯೋಜನೆಯಡಿ ‘ನರೇಗಾ’...

ವಿಬಿ ಜಿ-ರಾಮ್ ಜಿ ಯೋಜನೆಯಡಿ ‘ನರೇಗಾ’ ಸಿಬ್ಬಂದಿ ಮುಂದುವರಿಕೆಗೆ ಆದೇಶ ಹೊರಡಿಸಲು ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ16 Oct 2026 10:50 PM IST
share
ವಿಬಿ ಜಿ-ರಾಮ್ ಜಿ ಯೋಜನೆಯಡಿ ‘ನರೇಗಾ’ ಸಿಬ್ಬಂದಿ ಮುಂದುವರಿಕೆಗೆ ಆದೇಶ ಹೊರಡಿಸಲು ಆಗ್ರಹಿಸಿ ಧರಣಿ

ಬೆಂಗಳೂರು : ವಿಬಿ ಜಿ-ರಾಮ್‍ಜಿ ಯೋಜನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮನರೇಗಾ ಸಿಬ್ಬಂದಿಗಳ ಮುಂದುವರಿಕೆಯ ಕುರಿತು ಸರಕಾರ ಸೂಕ್ತ ಆದೇಶ ಹೊರಡಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ನಗರದ ಫ್ರೀಡಂ ಪಾರ್ಕ್‍ನಲ್ಲಿ ಕರ್ನಾಟಕ ರಾಜ್ಯ ಮಹಾತ್ಮಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಧರಣಿ ನಡೆಸಲಾಯಿತು.

2008ರಿಂದ ನಿರಂತರವಾಗಿ ನರೇಗಾ ಯೋಜನೆಯಡಿ ದಕ್ಷತೆ, ಪ್ರಾಮಾಣಿಕವಾಗಿ ಕರ್ತವ್ರ್ಯ ನಿರ್ವಹಿಸಿ ಯೋಜನೆ ಅನುಷ್ಠಾನವನ್ನು ಉತ್ತಮ ರೀತಿಯಲ್ಲಿ ಮಾಡಿದ್ದೇವೆ. ಹೊರಗುತ್ತಿದೆ ಸಿಬ್ಬಂದಿಗಳಾದ ನಾವು ಸುಮಾರು 12ರಿಂದ 15 ವರ್ಷಗಳ ಕಾಲ ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಿದ್ದೇವೆ. ನಮ್ಮ ಸೇವೆಯನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಸೇವಾ ಭದ್ರತೆಯನ್ನು ರೂಪಿಸಿ, ಖಾಯಂಗೊಳಿಸಬೇಕು ಎಂದು ಧರಣಿನಿರತರು ಆಗ್ರಹಿಸಿದರು.

ಆರ್‍ಡಿಪಿಆರ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ವಿದ್ಯಾರ್ಹತೆಗೆ ಅನುಗುಣವಾಗಿ ಮನರೇಗಾ ಸಿಬ್ಬಂದಿಗಳನ್ನೇ ನೇರ ನೇಮಕ ಅಥವಾ ಪರೀಕ್ಷೆಯ ಮೂಲಕ ನೇಮಕ ಮಾಡಿಕೊಳ್ಳಲು, ಸೂಕ್ತ ಆದೇಶ ಹೊರಡಿಬೇಕು. ಎಲ್ಲ ನೌಕರರಿಗೆ ಸುಪ್ರೀಂ ಕೋರ್ಟ್ ಆದೇಶದಂಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವ ಕುರಿತು ಸರಕಾರಿ ಆದೇಶ ಹೊರಡಿಸಿ, ಆದೇಶವನ್ನು ಪರಿಣಾಮಕಾರಿ ಜಾರಿಯಾಗುವಂತೆ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

ಪ್ರತಿ ತಿಂಗಳು ನಿಗದಿತ ದಿನಾಂಕದಂದು ಮಾನವ ಸಂಪನ್ಮೂಲ ಸಂಸ್ಥೆಗಳಿಂದ ವೇತನ ಪಾವತಿಸಿ, ಕಡ್ಡಾಯವಾಗಿ ಪಾವತಿಸಿರುವ ವೇತನ, ಪಿಎಫ್ ಹಾಗೂ ಇಎಸ್‍ಐ ವಿವರ ನೀಡಿದ ನಂತರ ಮಾನವ ಸಂಪನ್ಮೂಲ ಸಂಸ್ಥೆಗಳಿಗೆ ಸರಕಾರ ಹಣ ಪಾವತಿ ಮಾಡಬೇಕು. ಹೊರಗುತ್ತಿಗೆ ಸಿಬ್ಬಂದಿ ವರ್ಗಾವಣೆಗೆ ಸಂಬಂದಿಸಿದಂತೆ ಅಂತರ್ ಜಿಲ್ಲಾ ವರ್ಗಾವಣೆಯ ಅರ್ಜಿಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಿ, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

10 ವರ್ಷಕ್ಕಿಂತ ಹೆಚ್ಚು ಅವಧಿ ಸೇವೆ ಸಲ್ಲಿಸಿರುವ ಸಿಬ್ಬಂದಿ ಕೆಲಸ ಬಿಟ್ಟ ಮೇಲೆ ಅವರಿಗೆ ಗ್ರ್ಯಾಚುಟಿ ಸೌಲಭ್ಯ ಒದಗಿಸುವಂತೆ ಮಾನವ ಸಂಪನ್ಮೂಲ ಸಂಸ್ಥೆಗಳಿಗೆ ಸೂಕ್ತ ನಿರ್ದೇಶನ ನೀಡಿ, ಆದೇಶ ಹೊರಡಿಸಬೇಕು. ಕುಂದು ಕೊರತೆಗಳ ಕುರಿತು ಚರ್ಚಿಸಲು ಜಿಲ್ಲಾಮಟ್ಟದಲ್ಲಿ ಪ್ರತಿ 3 ತಿಂಗಳಿಗೊಮ್ಮೆ ಹಾಗೂ ರಾಜ್ಯಮಟ್ಟದಲ್ಲಿ 6 ತಿಂಗಳಿಗೊಮ್ಮೆ ಸಭೆ ನಡೆಸಬೇಕು ಎಂದು ಧರಣಿನಿರತರು ಆಗ್ರಹಿಸಿದರು.

ಧರಣಿಯಲ್ಲಿ ವಿವಿಧ ಜಿಲ್ಲೆಗಳಿಂದ ಬಂದ ಸಾವಿರಾರು ಜನ ಮನರೇಗಾ ನೌಕರರು ಭಾಗವಹಿಸಿದ್ದರು.

ಪ್ರಮುಖ ಆಗ್ರಹಗಳು:

•ಪಿಎಫ್ ಹಣ ದುರುಪಯೋಗ ಮಾಡಿಕೊಂಡ ಮಾನವ ಸಂಪನ್ಮೂಲ ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಸೂಕ್ತ ನ್ಯಾಯ ಒದಗಿಸಬೇಕು.

•ಕಾರ್ಮಿಕ ಇಲಾಖೆಯಿಂದ ನಿಗದಿ ಪಡಿಸಿರುವ ಕನಿಷ್ಟ ವೇತನ ನೀಡುವುದು.

•ವೈದ್ಯಕೀಯ ರಜೆ, ಪಿತೃತ್ವ ರಜೆ ಹಾಗೂ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ವೇತನ ಸಹಿತ ಋತುಚಕ್ರ ರಜೆಯನ್ನು ನೀಡಬೇಕು.

•ಪ್ರತಿ ವರ್ಷ ಶೇ.10ರಷ್ಟು ವೇತನ ಹೆಚ್ಚಳ ಮಾಡಬೇಕು.

•ಪ್ರಯಾಣ ಭತ್ಯೆಯನ್ನು 2 ಸಾವಿರ ರೂ.ದಿಂದ 5 ಸಾವಿರ ರೂ.ಗೆ ಹೆಚ್ಚಿಸಬೇಕು.

Tags

VB G-RAM G
share
ವಾರ್ತಾಭಾರತಿ
ವಾರ್ತಾಭಾರತಿ
Next Story
X