Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹಿರಿಯ ಚಿತ್ರನಟ ಬ್ಯಾಂಕ್ ಜನಾರ್ದನ್...

ಹಿರಿಯ ಚಿತ್ರನಟ ಬ್ಯಾಂಕ್ ಜನಾರ್ದನ್ ಇನ್ನಿಲ್ಲ

ವಾರ್ತಾಭಾರತಿವಾರ್ತಾಭಾರತಿ14 April 2025 9:27 AM IST
share
ಹಿರಿಯ ಚಿತ್ರನಟ ಬ್ಯಾಂಕ್ ಜನಾರ್ದನ್ ಇನ್ನಿಲ್ಲ

ಬೆಂಗಳೂರು : ಹಿರಿಯ ಚಿತ್ರನಟ ಬ್ಯಾಂಕ್ ಜನಾರ್ಧನ್(76) ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ.

ಬ್ಯಾಂಕ್ ಜನಾರ್ಧನ್ ಅವರ ಮೃತದೇಹವನ್ನು ನಗರದ ಸುಲ್ತಾನ್ ಪಾಳ್ಯದಲ್ಲಿರುವ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ. ಸಂಜೆ 4ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಬ್ಯಾಂಕ್ ಜನಾರ್ಧನ್ ಪುತ್ರ ಗುರುಪ್ರಸಾದ್ ತಿಳಿಸಿದ್ದಾರೆ.

ಕೆಲ ತಿಂಗಳುಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದ ಬ್ಯಾಂಕ್ ಜನಾರ್ಧನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊಂಚ ಚೇತರಿಸಿಕೊಂಡ ಬಳಿಕ ಮನೆಗೆ ಕರೆತರಲಾಗಿತ್ತು. ಮೂರು ದಿನಗಳ ಹಿಂದಷ್ಟೇ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದರಿಂದ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟರು ಎಂದು ಪುತ್ರ ಗುರುಪ್ರಸಾದ್ ಮಾಹಿತಿ ನೀಡಿದ್ದಾರೆ.

ಚಿತ್ರದುರ್ಗ ಸಮೀಪದ ಹೊಳಲ್ಕೆರೆಯಲ್ಲಿ ಬ್ಯಾಂಕ್ ಉದ್ಯೋಗಿಯಾಗಿದ್ದ ಜನಾರ್ಧನ್ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದರು. 1985ರಲ್ಲಿ ‘ಪಿತಾಮಹ' ಎಂಬ ಸಿನಿಮಾ ಮೂಲಕ ಬೆಳ್ಳಿತೆರೆ ಪ್ರವೇಶಿಸಿದ್ದರು. ಉಪೇಂದ್ರ ನಿರ್ದೇಶನದ ‘ಶ್’, 'ತರ್ಲೆ ನನ್‍ಮಗ' ಹಾಗೂ ‘ಗಣೇಶ ಸುಬ್ರಹ್ಮಣ್ಯ', ‘ಜಿಪುಣ ನನ್ನ ಗಂಡ' ಸೇರಿದಂತೆ ಅನೇಕ ಸಿನಿಮಾಗಳಲ್ಲಿ ತಮ್ಮ ಹಾಸ್ಯಮಯ ಪಾತ್ರಗಳ ಮೂಲಕ ಗಮನ ಸೆಳೆದಿದ್ದರು.

ಸುಮಾರು 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ಅವರು, 80, 90ರ ದಶಕದ ಬಹುಬೇಡಿಕೆಯ ಹಾಸ್ಯನಟರಲ್ಲಿ ಒಬ್ಬರಾಗಿದ್ದರು. ಒಟ್ಟಾರೆ ಬ್ಯಾಂಕ್ ಜನಾರ್ಧನ್ ಅವರು 500ಕ್ಕೂ ಅಧಿಕ ಕನ್ನಡ ಸಿನಿಮಾಗಳಲ್ಲಿ ನಟಿಸಿ ಕನ್ನಡದ ಪ್ರೇಕ್ಷಕರನ್ನು ರಂಜಿಸಿದ್ದಾರೆ.

ಬ್ಯಾಂಕ್ ಜನಾರ್ಧನ್ ಅವರ ನಿಧನಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾರ್ಮಿಕ ಸಚಿವ ಸಂತೋಷ್ ಲಾಡ್, ನಟರಾದ ಉಪೇಂದ್ರ, ಶರಣ್, ಜಗ್ಗೇಶ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X