Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನ

ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನ

ವಾರ್ತಾಭಾರತಿವಾರ್ತಾಭಾರತಿ24 Sept 2025 3:06 PM IST
share
ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನ

ಬೆಂಗಳೂರು, ಸೆ.24: ಪ್ರತಿಷ್ಠಿತ ‘ಸರಸ್ವತಿ ಸಮ್ಮಾನ್ ಪ್ರಶಸ್ತಿ’ ಪುರಸ್ಕೃತರಾದ ಕನ್ನಡ ಖ್ಯಾತ ಕಾದಂಬರಿಕಾರ, ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ(94) ಬುಧವಾರ ಮಧ್ಯಾಹ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಮಧ್ಯಾಹ್ನ 2:38ಕ್ಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಮೃತರು ಪತ್ನಿ ಸತ್ಯವತಿ, ಇಬ್ಬರು ಗಂಡು ಮಕ್ಕಳು ಸೇರಿದಂತೆ ಅಪಾರ ಸಂಖ್ಯೆಯ ಅಭಿಮಾನಿ ಬಳಗ ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.

ಭೈರಪ್ಪ ಅವರು 1931ರ ಆ.20ರಂದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಸಂತೇಶಿವರ ಎಂಬ ಹಳ್ಳಿಯಲ್ಲಿ ಜನಿಸಿದರು. ಚನ್ನರಾಯಪಟ್ಟಣದ ನವೋದಯ ಪ್ರೌಢಶಾಲೆ ಮತ್ತು ಮೈಸೂರಿನ ಶಾರದಾ ವಿಲಾಸ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿದರು. ಅವರು ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ ಬಿಎ(ಆನರ್ಸ್) ಪದವಿಯನ್ನು, ತತ್ವಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರು. ಬರೋಡಾದ ಮಹಾರಾಜ ಸಯಾಜಿರಾವ್ ವಿಶ್ವ ವಿದ್ಯಾನಿಲಯದಲ್ಲಿ ಪಿಎಚ್‌ಡಿ ಪದವಿಯನ್ನು ಪಡೆದರು.

ಡಾಕ್ಟರೇಟ್ ಪದವಿ ಪಡೆದ ನಂತರ, ಅವರು ಕರ್ನಾಟಕದಾದ್ಯಂತ ವಿವಿಧ ಕಾಲೇಜುಗಳಲ್ಲಿ ತತ್ವಶಾಸ್ತ್ರದ ಪ್ರಾಧ್ಯಾಪಕರಾಗಿ ವೃತ್ತಿ ಜೀವನವನ್ನು ಪ್ರಾರಂಭಿಸಿದರು. ಹುಬ್ಬಳ್ಳಿಯ ಶ್ರೀ ಕಾಡಸಿದ್ಧೇಶ್ವರ ಕಾಲೇಜು, ಗುಜರಾತ್‌ನ ಸರ್ದಾರ್ ಪಟೇಲ್ ವಿಶ್ವ ವಿದ್ಯಾನಿಲಯದಲ್ಲಿ ಉಪನ್ಯಾಸಕರಾಗಿದ್ದರು. ಹೊಸದಿಲ್ಲಿಯ ರಾಷ್ಟ್ರೀಯ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ (ಎನ್‌ಸಿಇಆರ್‌ಟಿ) 1967-71ರವರೆಗೆ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ್ದಾರೆ. ಮೈಸೂರಿನ ಪ್ರಾದೇಶಿಕ ಶಿಕ್ಷಣ ಕಾಲೇಜಿನಲ್ಲಿ ತತ್ವಶಾಸ್ತ್ರ ಮತ್ತು ಶಿಕ್ಷಣ ವಿಜ್ಞಾನದ ಪ್ರಾಧ್ಯಾ ಪಕರಾಗಿ ಸೇವೆ ಸಲ್ಲಿಸಿ 1991ರಲ್ಲಿ ನಿವೃತ್ತರಾದರು.

ಕಾದಂಬರಿಗಳ ಗುಚ್ಛ: ವಂಶವೃಕ್ಷ, ತಂತು, ಪರ್ವ, ಗೃಹಭಂಗ, ಸಾರ್ಥ, ಮಂದ್ರ, ಕವಲು, ಯಾನ, ನಾಯಿ ನೆರಳು, ತಬ್ಬಲಿಯು ನೀನಾದೆ ಮಗನೆ, ಭೀಮಕಾಯ, ಗೃಹಭಂಗ ಸೇರಿದಂತೆ 26 ಕಾದಂಬರಿಗಳನ್ನು ರಚಿಸಿದ್ದಾರೆ. ಭೈರಪ್ಪ ಅವರ ಬಹುತೇಕ ಕಾದಂಬರಿಗಳು ಸಂಸ್ಕೃತ, ಮರಾಠಿ, ಹಿಂದಿ, ತಮಿಳು, ಇಂಗ್ಲಿಷ್, ತೆಲುಗು ಸೇರಿದಂತೆ ಇತರ ಭಾರತೀಯ ಭಾಷೆಗಳಿಗೆ ಅನುವಾದಗೊಂಡಿವೆ.

ಸಿನೆಮಾದಲ್ಲೂ ಜನಪ್ರಿಯತೆ: ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ, ಮತದಾನ, ನಾಯಿ ನೆರಳು ಕಾದಂಬರಿಗಳು ಚಲನಚಿತ್ರಗಳಾಗಿದ್ದು, ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ಗಳಿಸಿ ಅತ್ಯಂತ ಜನಪ್ರಿಯಗೊಂಡಿವೆ. ಗೃಹಭಂಗ ಮತ್ತು ದಾತು ಧಾರಾವಾಹಿಯಾಗಿ ದೂರದರ್ಶನದಲ್ಲಿ ಪ್ರಸಾರಗೊಂಡಿದ್ದು, ಈ ಎರಡು ಕಾದಂಬರಿಗಳು ಇಂಗ್ಲಿಷ್ ಸೇರಿದಂತೆ ಭಾರತದ 14 ಭಾಷೆಗಳಲ್ಲಿ ಅನುವಾದಗೊಂಡಿರುವುದು ನಿಜಕ್ಕೂ ಹೆಮ್ಮೆಯ ಸಂಗತಿಯಾಗಿದೆ.

ಕಾದಂಬರಿಗಳಲ್ಲದೆ ಸಾಹಿತ್ಯ ವಿಮರ್ಶೆ, ತತ್ವಶಾಸ್ತ್ರದ ಕುರಿತು ಅನೇಕ ಕೃತಿಗಳನ್ನು ಭೈರಪ್ಪ ಅವರು ರಚಿಸಿದ್ದಾರೆ. ಸಾಹಿತ್ಯ ಮತ್ತು ಪ್ರತೀಕಾ, ಕಥೆ ಮತ್ತು ಕಥಾವಸ್ತು, ಸಂದರ್ಭ: ಸಂವಾದ, ನಾನೇಕೆ ಬರೆಯುತ್ತೇನೆ? ಎಂಬ ಪುಸ್ತಕಗಳು ವಿಮರ್ಶೆ ಕೃತಿಗಳಾಗಿದ್ದು, ಸತ್ಯ ಮತ್ತು ಸೌಂದರ್ಯ ಡಾಕ್ಟರೇಟ್ ಪ್ರಬಂಧಗಳಾಗಿದೆೆ. ‘ಭಿತ್ತಿ’ ಭೈರಪ್ಪನವರ ಆತ್ಮಕಥನವಾಗಿದೆ.

ಸಾಹಿತ್ಯ ಕ್ಷೇತ್ರಕ್ಕೆ ಎಸ್.ಎಲ್ ಭೈರಪ್ಪ ಅವರ ಕೊಡುಗೆಯನ್ನು ಪರಿಗಣಿಸಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಅನೇಕ ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ. ಕೇಂದ್ರಿಯ ವಿಶ್ವವಿದ್ಯಾಲಯ ಕಲಬುರ್ಗಿ ಮೈಸೂರು ವಿಶ್ವ ವಿದ್ಯಾನಿಲಯ, ಗುಲ್ಬರ್ಗಾ ವಿಶ್ವ ವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿವೆ.

‘ದಾಟು’ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ, ‘ಮಂದ್ರ’ ಕಾದಂಬರಿಗೆ ಸರಸ್ವತಿ ಸಮ್ಮಾನ್ ಪ್ರಶಸ್ತಿ ಲಭಿಸಿದೆ. ಪದ್ಮಭೂಷಣ, ಪದ್ಮಶ್ರೀ, ಪಂಪ ಪ್ರಶಸ್ತಿ, ನಾಡೋಜ ಸೇರಿದಂತೆ ಹಲವಾರು ಪ್ರಶಸ್ತಿ, ಪುರಸ್ಕಾರಗಳಿಗೆ ಭೈರಪ್ಪ ಅವರು ಭಾಜನರಾಗಿದ್ದಾರೆ. ಅವರು 1999ರಲ್ಲಿ ಕನಕಪುರದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು.

ಕಲಾಕ್ಷೇತ್ರ ಆವರಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ

ಸೆ.25ರಂದು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಇಲ್ಲಿನ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಭೈರಪ್ಪಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಸಾರ್ವಜನಿಕರು ಪೂರ್ಣಿಮಾ ಥಿಯೇಟರ್ ರಸ್ತೆ ಹಾಗೂ ಜೆ.ಸಿ.ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದ ಮುಖ್ಯ ಪ್ರವೇಶ ದ್ವಾರದ ಮೂಲಕ ಪ್ರವೇಶಿಸಿ ಅಂತಿಮ ದರ್ಶನ ಪಡೆಯಬಹುದು. ದರ್ಶನದ ನಂತರ ಪುರಭವನ (ಟೌನ್‌ಹಾಲ್) ಗೇಟ್ ಮೂಲಕ ನಿರ್ಗಮಿಸಲು ಅವಕಾಶ ಕಲ್ಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X