ವಿಜಯಪುರ | ಟ್ಯಾಂಕರ್ ವಾಹನಕ್ಕೆ ಬೈಕ್ ಢಿಕ್ಕಿ; ಸವಾರ ಮೃತ್ಯು

ವಿಜಯಪುರ : ಟ್ಯಾಂಕರ್ ವಾಹನಕ್ಕೆ ಬೈಕ್ ಢಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಜಿಲ್ಲೆಯ ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದ ಬಳಿ ಶನಿವಾರ ನಡೆದಿದೆ.
ಮೃತರನ್ನು ದ ಶ್ರೀಶೈಲ ಸಾತಪುರ (42) ಎಂದು ಗುರುತಿಸಲಾಗಿದೆ. ಶ್ರೀಶೈಲ ಜಮೀನಿನಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂಡಿ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Next Story





