Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸರಕಾರದ ಭ್ರಷ್ಟಾಚಾರ ಬಹಿರಂಗಪಡಿಸಿರುವ...

ಸರಕಾರದ ಭ್ರಷ್ಟಾಚಾರ ಬಹಿರಂಗಪಡಿಸಿರುವ ರಾಯರೆಡ್ಡಿ: ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ9 April 2025 10:09 PM IST
share
ಸರಕಾರದ ಭ್ರಷ್ಟಾಚಾರ ಬಹಿರಂಗಪಡಿಸಿರುವ ರಾಯರೆಡ್ಡಿ: ವಿಜಯೇಂದ್ರ

ಬೆಂಗಳೂರು, ಎ.9: ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಭ್ರಷ್ಟಾಚಾರ, ಲೂಟಿಕೋರತನ ರಾಜ್ಯ ಕಾಂಗ್ರೆಸ್ ಸರಕಾರದ ಅವಿಭಾಜ್ಯ ಅಂಗ ಎಂಬುದನ್ನು ಸ್ವತಃ ನಿಮ್ಮ ಆರ್ಥಿಕ ಸಲಹೆಗಾರರೂ ಆಗಿರುವ ಶಾಸಕ ಬಸವರಾಜ ರಾಯರೆಡ್ಡಿ ಅವರೇ ಸ್ಪಷ್ಟವಾಗಿ ಬಹಿರಂಗಪಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಬುಧವಾರ ಈ ಸಂಬಂಧ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ‘ದೇಶದಲ್ಲೇ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂ.1’ ಎಂದು ಹೇಳುವ ಮೂಲಕ ಈ ಸರಕಾರದ ಕರಾಳ ಭ್ರಷ್ಟತೆಯ ಮುಖವಾಡವನ್ನು ಬಯಲು ಮಾಡಿ ರಾಜ್ಯದ ಘನತೆ ಕುಗ್ಗಿದ ಸ್ವರೂಪವನ್ನು ಬಿಚ್ಚಿಟ್ಟಿದ್ದಾರೆ. ಆ ಮೂಲಕ ರಾಷ್ಟ್ರ ಮಟ್ಟದಲ್ಲಿ ರಾಜ್ಯ ನಿಮ್ಮ ಆಡಳಿತದಲ್ಲಿ ಸಂಪೂರ್ಣ ಭ್ರಷ್ಟತೆಯ ಕಪ್ಪುಮಸಿ ಮೆತ್ತಿಕೊಂಡಿರುವುದನ್ನು ಅನಾವರಣ ಮಾಡಿ ಕರ್ನಾಟಕ ವಿಶ್ವಮಟ್ಟದಲ್ಲಿ ತಲೆತಗ್ಗಿಸುವ ಪರಿಸ್ಥಿತಿ ಇರುವುದನ್ನು ವಿವರಿಸಿದ್ದಾರೆ ಎಂದು ಹೇಳಿದ್ದಾರೆ.

‘ಜನಪ್ರತಿನಿಧಿಗಳು ಹೇಗೆ ಇರುತ್ತಾರೊ ಅದರಂತೆಯೇ ಅಧಿಕಾರಿಗಳೂ ಇರುತ್ತಾರೆ, ಮುಖ್ಯಮಂತ್ರಿ ಏನೇ ಹೇಳಿದರೂ ಭ್ರಷ್ಟಾಚಾರದ ಕುರಿತು ನನ್ನ ವೈಯಕ್ತಿಕ ಅಭಿಪ್ರಾಯ ಇದೇ ಇರುತ್ತದೆ’ ಎಂದು ಹೇಳುವ ಮೂಲಕ ‘ಯಥಾ ರಾಜ ತಥಾ ಮಂತ್ರಿಗಳು, ಅಧಿಕಾರಿಗಳು’ ಎಂಬ ಮಾತು ನಿಮ್ಮ ಆಡಳಿತದಲ್ಲಿ ಅಕ್ಷರಶಃ ಅನ್ವಯಿಸುತ್ತಿದೆ ಎನ್ನುವುದನ್ನು ಹೇಳುವ ಮೂಲಕ ವಾಸ್ತವ ಸ್ಥಿತಿಯ ಮೇಲೆ ನೇರವಾಗಿ ಬೆಳಕು ಚೆಲ್ಲಿದ್ದಾರೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

ಹಿಂದಿನ ನಮ್ಮ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರವನ್ನು 40 ಪರ್ಸೆಂಟ್ ಸರಕಾರ ಎಂಬ ಸುಳ್ಳು ಅಪಪ್ರಚಾರಗಳನ್ನು ನಡೆಸಿ ರಾಜ್ಯದ ಜನತೆಯನ್ನು ದಿಕ್ಕು ತಪ್ಪಿಸಿ ಜಗತ್ತಿನಲ್ಲಿ ‘ನಾವೇ ಸತ್ಯವಂತರು’ ಎಂದು ಡಂಗುರ ಸಾರಿ ಅಧಿಕಾರಕ್ಕೆ ಬಂದ ನಿಮ್ಮ ನೈಜ ಮುಖವಾಡ ಇದೀಗ ಕಳಚಿ ಬಿದ್ದಿದೆ ಎಂದು ಅವರು ಟೀಕಿಸಿದ್ದಾರೆ.

ಭ್ರಷ್ಟತೆಯ ಕೆನ್ನಾಲಿಗೆ ರಾಜ್ಯದಲ್ಲಿ ಪ್ರತಿಯೊಂದು ವಸ್ತುಗಳ ಬೆಲೆ ಏರಿಸುವ ಮೂಲಕ ಜನಸಾಮಾನ್ಯರು ಹಾಗೂ ಕಡು ಬಡವರ ದೈನಂದಿನ ಬದುಕಿನ ಸ್ಥಿತಿಯನ್ನು ಸುಡುತ್ತಿದೆ. ಇದಕ್ಕಾಗಿ ನಿಮ್ಮ ಸರ್ಕಾರದ ವಿರುದ್ಧ ಜನಬೆಂಬಲಿತ ‘ಬಿಜೆಪಿ ಜನಾಕ್ರೋಶದ ಹೋರಾಟದ ಯಾತ್ರೆ’ ರಾಜ್ಯಾದ್ಯಂತ ಯಶಸ್ವಿಯಾಗಿ ಮುನ್ನಡೆದಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ನಿಮ್ಮ ಆಡಳಿತದಿಂದ ರಾಜ್ಯವನ್ನು ಮುಕ್ತಗೊಳಿಸದೇ ಕರುನಾಡಿಗೆ ಮುಕ್ತಿಯಿಲ್ಲ ಎಂಬ ನಿರ್ಧಾರಕ್ಕೆ ರಾಜ್ಯದ ಜನ ಬಂದಿದ್ದಾರೆ. ಸದ್ಯದಲ್ಲೇ ಜನಾಕ್ರೋಶದ ಬಿಸಿ ನಿಮ್ಮ ಸರಕಾರವನ್ನು ಸುಟ್ಟು ಪಥನಗೊಳಿಸಲಿದೆ ಎಣದಯ ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X