Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜನತೆ ಧಿಕ್ಕರಿಸಿದ್ದರಿಂದ ಕಾಂಗ್ರೆಸ್ಸಿಗೆ...

ಜನತೆ ಧಿಕ್ಕರಿಸಿದ್ದರಿಂದ ಕಾಂಗ್ರೆಸ್ಸಿಗೆ ಡಾ.ಅಂಬೇಡ್ಕರರ ನೆನಪು : ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ14 April 2025 8:18 PM IST
share
ಜನತೆ ಧಿಕ್ಕರಿಸಿದ್ದರಿಂದ ಕಾಂಗ್ರೆಸ್ಸಿಗೆ ಡಾ.ಅಂಬೇಡ್ಕರರ ನೆನಪು : ವಿಜಯೇಂದ್ರ

ಬೆಂಗಳೂರು : ರಾಜ್ಯದ ಜನತೆ ಇದೀಗ ಕಾಂಗ್ರೆಸ್ಸನ್ನು ಧಿಕ್ಕರಿಸಿದ್ದಾರೆ. ಆದ್ದರಿಂದ ಅವರಿಗೆ ಈಗ ಡಾ.ಅಂಬೇಡ್ಕರರ ನೆನಪಾಗುತ್ತಿದೆ. ಸಂವಿಧಾನಶಿಲ್ಪಿ ಎಂದು ಇದೀಗ ಅವರು ನೆನಪು ಮಾಡಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.

ಸೋಮವಾರ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತಕ್ಕೆ ಸಂವಿಧಾನ ಕೊಟ್ಟ ಅಂಬೇಡ್ಕರ್‌ ಅವರನ್ನು ಕಾಂಗ್ರೆಸ್‍ನವರು ಹೇಗೆ ನಡೆಸಿಕೊಂಡರು ಎಂಬ ಸತ್ಯ ದೇಶದ ಜನತೆಗೆ ಗೊತ್ತಾಗಬೇಕಿದೆ ಎಂದು ತಿಳಿಸಿದರು.

ಭಾರತದ ನಿಜವಾದ ರತ್ನವಾಗಿದ್ದ ಅಂಬೇಡ್ಕರ್‌ ಅವರಿಗೆ ಭಾರತರತ್ನ ಕೊಡಲು ಅಟಲ್ ಬಿಹಾರಿ ವಾಜಪೇಯಿ ಅವರ ನೇತೃತ್ವದ ಬಿಜೆಪಿ ಬೆಂಬಲಿಸಿದ ವಿ.ಪಿ.ಸಿಂಗ್ ಅವರ ಸರಕಾರವೇ ಬರಬೇಕಾಯಿತಲ್ಲವೇ? ಎಂದ ಅವರು, ಕಾಂಗ್ರೆಸ್‍ನವರು ಸ್ವಾತಂತ್ರ್ಯದ ನಂತರದಲ್ಲಿ 50-55 ವರ್ಷಗಳ ಕಾಲ ಸುದೀರ್ಘವಾಗಿ ಆಡಳಿತ ನಡೆಸಿದ್ದಾರೆ. 40-45 ವರ್ಷಗಳ ಕಾಲ ಸುದೀರ್ಘವಾಗಿ ಗಾಂಧಿ ಕುಟುಂಬವೇ ಈ ದೇಶದ ಆಡಳಿತದ ಚುಕ್ಕಾಣಿ ಹಿಡಿದಿದ್ದರೂ ಮಹಾನ್ ನಾಯಕ ಅಂಬೇಡ್ಕರ್‌ ಅವರಿಗೆ ಭಾರತರತ್ನ ಕೊಡಲು ಆಗಲಿಲ್ಲ ಎಂದು ಟೀಕಿಸಿದರು.

ಗಾಂಧಿ ಕುಟುಂಬಕ್ಕೆ 3 ಭಾರತರತ್ನ ಸಿಗುತ್ತದೆ. ಆದರೆ, ಸಂವಿಧಾನಶಿಲ್ಪಿ ಅಂಬೇಡ್ಕರ್‌ಅವರಿಗೆ ಭಾರತರತ್ನ ಕೊಡಬೇಕೆಂಬ ವಿಚಾರವು ಕಾಂಗ್ರೆಸ್‍ನವರ ತಲೆಯಲ್ಲಿ ಯಾವತ್ತೂ ಬರಲಿಲ್ಲ. ಅಂಬೇಡ್ಕರ್ ಅವರ ಕನಸನ್ನು ನನಸು ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಪತ್ರಿಕಾ ಸಂದರ್ಶನದಲ್ಲಿ ತಿಳಿಸಿದ್ದಾರೆ. ಹಲವು ದಶಕಗಳ ಕಾಲ ಆಡಳಿತ ನಡೆಸಿದ್ದು ಕಾಂಗ್ರೆಸ್ಸಿನವರಿಗೆ ಸಾಕಾಗಿಲ್ಲ ಎಂದು ಟೀಕಿಸಿದರು.

ಕಾಂಗ್ರೆಸ್ ಬೆತ್ತಲಾಗುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಡಾ.ಅಂಬೇಡ್ಕರ್‌ ಅವರು ಅವರ ಜೀವಿತಾವಧಿಯಲ್ಲಿ ಇದ್ದುದಕ್ಕಿಂತ ಹೆಚ್ಚು ಈಗ ಪ್ರಸ್ತುತವಾಗಿದ್ದಾರೆ. ಬಹುಕಾಲ ನಮ್ಮನ್ನು ಆಡಳಿತ ಮಾಡಿದವರು ನ್ಯೂನತೆಗಳನ್ನು ಸರಿಪಡಿಸಿದ್ದಾರಾ? ಸಮಸ್ಯೆಗಳನ್ನು ಪರಿಹರಿಸಿದ್ದಾರಾ? ಎಂದು ಕೇಳಿದರು.

ಕಾಂಗ್ರೆಸ್ ಪಕ್ಷವು ಅನೇಕ ಸತ್ಯಗಳನ್ನು ಬಚ್ಚಿಟ್ಟು, ಕತ್ತಲಲ್ಲಿಟ್ಟು ಸಮಾಜಕ್ಕೆ ಬೇರೆಯದನ್ನೇ ತೋರಿಸುತ್ತಿದ್ದರು. ಕಾಂಗ್ರೆಸ್ಸಿನ ಕತ್ತಲ ಕೋಣೆಯ ಸತ್ಯಗಳು ನನಗೂ ಅರಿವಿದೆ. ಈಗ ಸತ್ಯಗಳ ಅನಾವರಣ ಒಂದೊಂದಾಗಿ ಆಗುತ್ತಿದೆ. ಕತ್ತಲು ಹೋಗಿ ಕಾಂಗ್ರೆಸ್ ಬೆತ್ತಲಾಗುತ್ತಿದೆ ಎಂದು ನಾರಾಯಣಸ್ವಾಮಿ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X