ಹಿರಿಯ ರಂಗ ಕಲಾವಿದೆ ವಿಮಲಾ ರಂಗಾಚಾರ್ ನಿಧನ

ಬೆಂಗಳೂರು : ಹಿರಿಯ ರಂಗ ಕಲಾವಿದೆ, ಲಲಿತಕಲೆಗಳ ಪೋಷಕರಾಗಿದ್ದ ವಿಮಲಾ ರಂಗಾಚಾರ್ (97) ಇಂದು(ಫೆ.25) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ವಿಮಲಾ ರಂಗಾಚಾರ್ ಅವರು ಬೆಂಗಳೂರಿನ ಎಂಇಎಸ್ ಸಂಸ್ಥೆಯ ಸ್ಥಾಪಕ ಸದಸ್ಯರಾಗಿ, ಅಧ್ಯಕ್ಷರಾಗಿದ್ದರು. ಬೆಂಗಳೂರಿನ ಸೇವಾ ಸದನ ಕಟ್ಟಿ ಬೆಳೆಸಿದ ಅವರು, ಕಮಲಾದೇವಿ ಚಟ್ಟೋಪಾಧ್ಯಾಯ ಅವರು ಕಟ್ಟಿದ ಭಾರತೀಯ ನಾಟ್ಯ ಸಂಘದ ಕರ್ನಾಟಕ ಘಟಕದ ಅಧ್ಯಕ್ಷರಾಗಿದ್ದರು.
ವಿಮಲಾ ಅವರ ಅಂತ್ಯಕ್ರಿಯೆ ಫೆ.27ರಂದು ನಡೆಯಲಿದೆ ಎಂದು ತಿಳಿದು ಬಂದಿದೆ.
Next Story





