ವೀರೇಂದ್ರ ಹೆಗ್ಗಡೆ ಕುಟುಂಬ, ಸಂಸ್ಥೆಗಳ ವಿರುದ್ಧ ಹೇಳಿಕೆ ವಿಚಾರ | ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಬೆಂಬಲಿಗರ ವಿರುದ್ಧ ಹೈಕೋರ್ಟ್ ಗರಂ

ಬೆಂಗಳೂರು : ಧರ್ಮಸ್ಥಳದ ಡಾ.ಡಿ.ವೀರೇಂದ್ರ ಹೆಗ್ಗಡೆ, ಕುಟುಂಬ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳದ ಸಂಸ್ಥೆಗಳ ವಿರುದ್ಧ ಮಾನಹಾನಿ ಹೇಳಿಕೆ ನೀಡದಂತೆ ಹೈಕೋರ್ಟ್ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅನುಯಾಯಿಗಳಿಗೆ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶಿದೆ.
ಈ ಕುರಿತು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಆರ್.ದೇವದಾಸ್ ಅವರ ಏಕಸದಸ್ಯ ಪೀಠ, ಸಾರ್ವಜನಿಕ ಸಭೆ, ಸಾಮಾಜಿಕ ಮಾಧ್ಯಮಗಳಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬ ಅಲ್ಲದೆ ಧರ್ಮಸ್ಥಳದ ಸಂಸ್ಥೆಗಳು ಹಾಗೂ ಸಂಸ್ಥೆಯ ಯೋಜನೆಗಳ ಬಗ್ಗೆ ಯಾವುದೇ ಅಪಪ್ರಚಾರ ಮಾಡದಂತೆ ಮಹೇಶ್ ಶೆಟ್ಟಿ ಮತ್ತು ಅನುಯಾಯಿಗಳಿಗೆ ತಾಕೀತು ಮಾಡಿದೆ.
ಸಿವಿಲ್ ನ್ಯಾಯಾಲಯದ ತಡೆಯಾಜ್ಞೆ ಇದ್ದರೂ, ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಇತರರು ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಅಪಪ್ರಚಾರ, ಮಾನಹಾನಿ ಮಾಡಿದ್ದಲ್ಲದೇ ನ್ಯಾಯಾಂಗ ವ್ಯವಸ್ಥೆ ಮತ್ತು ನ್ಯಾಯಮೂರ್ತಿಗಳ ವಿರುದ್ಧ ನಿಂದನೆ ಮಾತುಗಳನ್ನಾಡಿರುವ ಬಗ್ಗೆ ಹೈಕೋರ್ಟ್ ಪೀಠ ತೀವ್ರ ಗರಂ ಆಗಿತ್ತು. ಈ ವಿಚಾರವಾಗಿ ಮಹೇಶ್ ಶೆಟ್ಟಿ ನ್ಯಾಯಾಲಯದಲ್ಲಿ ಬೇಷರತ್ ಕ್ಷಮೆಯಾಚಿಸಿದರೂ ತಮ್ಮ ವರ್ತನೆ ಸರಿಪಡಿಸಿಕೊಂಡಿಲ್ಲ ಎಂದಿರುವ ಹೈಕೋರ್ಟ್ ಇದು ಹೀಗೆ ಮುಂದುವರಿದಲ್ಲಿ ಕಾನೂನಿನಡಿಯಲ್ಲಿ ತಕ್ಷಣ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ಹೈಕೋರ್ಟ್ ನಿರ್ದೇಶಿಸಿ ಆದೇಶಿದೆ.







