Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಮೀಸಲಾತಿ ಹೆಚ್ಚಳ ರದ್ದು’ | ಸುಪ್ರೀಂ...

‘ಮೀಸಲಾತಿ ಹೆಚ್ಚಳ ರದ್ದು’ | ಸುಪ್ರೀಂ ಕೋರ್ಟ್ ಮೊರೆ ಹೋಗಬೇಕು : ವಿ.ಎಸ್.ಉಗ್ರಪ್ಪ

ವಾರ್ತಾಭಾರತಿವಾರ್ತಾಭಾರತಿ14 Oct 2026 7:52 PM IST
share
‘ಮೀಸಲಾತಿ ಹೆಚ್ಚಳ ರದ್ದು’ | ಸುಪ್ರೀಂ ಕೋರ್ಟ್ ಮೊರೆ ಹೋಗಬೇಕು : ವಿ.ಎಸ್.ಉಗ್ರಪ್ಪ

ಬೆಂಗಳೂರು : ಎಸ್‍ಸಿ, ಎಸ್‍ಟಿ, ಒಬಿಸಿ ಮೀಸಲಾತಿ ಹೆಚ್ಚಳವನ್ನು ರದ್ದುಪಡಿಸಿ ನ್ಯಾಯಾಲಯ ನೀಡಿರುವ ತೀರ್ಪು ಸಾಮಾಜಿಕ ನ್ಯಾಯಕ್ಕೆ ಮರಣ ಶಾಸನದಂತಿದೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್ಥಿಕವಾಗಿ ಹಿಂದುಳಿದ ಕೆಲವು ಸಮುದಾಯಗಳು ದೇಶದ ಜನಸಂಖ್ಯೆಯಲ್ಲಿ ಶೇ.7.5ರಷ್ಟು ಇದ್ದರೂ, ಅವರಿಗೆ ಶೇ.10ರಷ್ಟು ಮೀಸಲಾತಿ ನೀಡಲಾಗಿದೆ. ಇದನ್ನು ನ್ಯಾಯಾಲಯಗಳು ಸಮ್ಮತಿಸಿವೆ. ಆದರೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಒಳಮೀಸಲಾತಿ ವಿಚಾರದಲ್ಲಿ ಇಂದ್ರಾ ಸಹಾನಿ ಪ್ರಕರಣದ ತೀರ್ಪನ್ನು ಉಲ್ಲೇಖಿಸುತ್ತಿರುವುದು ಸಾಮಾಜಿಕ ನ್ಯಾಯದ ಆಶಯಕ್ಕೆ ವಿರುದ್ಧವಾಗಿದೆ ಎಂದು ಟೀಕಿಸಿದರು.

ಒಳಮೀಸಲಾತಿಗೆ ಸಂಬಂಧಿಸಿದ ಆದೇಶವನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸುವಂತೆ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಂತರ ಸಿದ್ದರಾಮಯ್ಯ ಅವರು ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದರೂ, ಕೇಂದ್ರ ಸರಕಾರ ಈ ವಿಚಾರದಲ್ಲಿ ಸೂಕ್ತ ನಿರ್ಧಾರ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಕೇಂದ್ರ ಸರಕಾರ ಈ ಬೇಡಿಕೆಯನ್ನು ಒಪ್ಪಿಯೂ ಇಲ್ಲ, ತಿರಸ್ಕರಿಸಿಯೂ ಇಲ್ಲ. ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ ಹಾಗೂ ಪ್ರಲ್ಹಾದ್ ಜೋಶಿ ಅವರು ಸಂಸತ್ತಿನಲ್ಲಿದ್ದಾರೆ. ಪ್ರಧಾನಮಂತ್ರಿ ಮೇಲೆ ಒತ್ತಡ ತಂದು ಆದೇಶವನ್ನು 9ನೇ ಅನುಸೂಚಿಗೆ ಸೇರಿಸುವ ಪ್ರಯತ್ನ ಮಾಡಿದ್ದರೆ ಇಂದಿನ ಪರಿಸ್ಥಿತಿ ಎದುರಾಗುತ್ತಿರಲಿಲ್ಲ. ಈಗಲಾದರೂ ಈ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಮಯ ನೀಡಿದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನಿಯೋಗದೊಂದಿಗೆ ತೆರಳಿ, ಈ ಸಮಸ್ಯೆಯನ್ನು ಹೇಗೆ ಎದುರಿಸಬಹುದು ಎಂಬ ಬಗ್ಗೆ ಸಲಹೆ ನೀಡಲು ಸಿದ್ಧರಿದ್ದೇವೆ. ರಾಜ್ಯ ಸರಕಾರ ಕೂಡಲೇ ಸರ್ವಪಕ್ಷ ಸಭೆ ಕರೆದು, ಪ್ರಧಾನಿ ನರಂದ್ರ ಮೋದಿ ಅವರನ್ನು ಭೇಟಿ ಮಾಡಿ ಆದೇಶವನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸಲು ಒತ್ತಾಯಿಸಬೇಕು. ಜತೆಗೆ, ಸುಪ್ರೀಂ ಕೋರ್ಟ್‍ನಲ್ಲಿ ವಿಶೇಷ ಅನುಮತಿ ಅರ್ಜಿ (ಎಸ್‍ಎಲ್‍ಪಿ) ಸಲ್ಲಿಸಿ ತೀರ್ಪಿಗೆ ತಡೆ ಪಡೆಯಲು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಶಾಸಕರು, ಸಂಸದರು ಹಾಗೂ ವಿವಿಧ ಕ್ಷೇತ್ರಗಳ ಮುಖಂಡರು ಈ ವಿಚಾರದಲ್ಲಿ ಧ್ವನಿ ಎತ್ತಬೇಕು. ಸಮುದಾಯದ ಹಿತದೃಷ್ಟಿಯಿಂದ ಎಲ್ಲರೂ ಒಗ್ಗಟ್ಟಾಗಿ ಹೋರಾಟಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.

ವಾಲ್ಮೀಕಿ ಜಯಂತಿಯಂದು ಮೌನ ಪ್ರತಿಭಟನೆ: ಮೀಸಲಾತಿ ಹೆಚ್ಚಳ ರದ್ದುಪಡಿಸಿರುವುದನ್ನು ವಿರೋಧಿಸಿ ಅ.26ರಂದು ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಯಂತಿಯಂದು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಗಮನ ಸೆಳೆಯಲು ಕಪ್ಪುಪಟ್ಟಿ ಧರಿಸಿ ಸಾಂಕೇತಿಕ ಮೌನ ಪ್ರತಿಭಟನೆ ನಡೆಸಲಾಗುವುದು. ವಾಲ್ಮೀಕಿ ಪ್ರಶಸ್ತಿ ಪುರಸ್ಕೃ ತರು ಸೇರಿದಂತೆ ಸಮುದಾಯದ ಮುಖಂಡರು ಬೀದಿಗಿಳಿದು ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಮನವಿ ಮಾಡಿದ್ದಾರೆ.

ಹೋರಾಟಕ್ಕೆ ನಟ ಸುದೀಪ್ ಬೆಂಬಲ ಕೇಳಿದ್ದರಲ್ಲಿ ತಪ್ಪೇನಿದೆ?: ‘ಮೀಸಲಾತಿ ವಿಚಾರದಲ್ಲಿ ನಟ ಸುದೀಪ್ ಹೋರಾಟಕ್ಕೆ ಮುಂದಾಗುವಂತೆ ಕೇಳಿಕೊಂಡಿರುವುದರಲ್ಲಿ ಯಾವುದೇ ತಪ್ಪಿಲ್ಲ. ನಟ ಡಾ. ರಾಜ್‍ಕುಮಾರ್ ಗೋಕಾಕ್ ಚಳವಳಿಯಲ್ಲಿ ಹಾಗೂ ಅಂಬರೀಶ್ ಕಾವೇರಿ ಹೋರಾಟದಲ್ಲಿ ಬೀದಿಗಿಳಿದಿರಲಿಲ್ಲವೇ? ಸಮಾಜ ಉಳಿದರೆ ನಾವು ಉಳಿಯುತ್ತೇವೆ. ಸಮುದಾಯದ ಬೆಂಬಲ ಕೇಳುವುದರಲ್ಲಿ ತಪ್ಪೇನಿದೆ? ರಾಜಕೀಯ ನಾಯಕರ ಹೇಳಿಕೆಗಳಿಂದ ಮಾತ್ರ ಸಮಸ್ಯೆ ಬಗೆಹರಿಯುವುದಿಲ್ಲ. ಸಮುದಾಯದ ನೋವು ಮತ್ತು ಆಕ್ರೋಶವನ್ನು ಅರ್ಥಮಾಡಿಕೊಳ್ಳಬೇಕು ವಿ.ಎಸ್.ಉಗ್ರಪ್ಪ ಸ್ಪಷ್ಟಪಡಿಸಿದ್ದಾರೆ.

Tags

V.S. Ugrappa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X