Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನ.30 ರವರೆಗೆ ತುಂಗಭದ್ರಾ ಜಲಾಶಯದಿಂದ...

ನ.30 ರವರೆಗೆ ತುಂಗಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು: ಸಚಿವ ಶಿವರಾಜ್ ತಂಗಡಗಿ

ವಾರ್ತಾಭಾರತಿವಾರ್ತಾಭಾರತಿ27 Jun 2025 8:52 PM IST
share
ನ.30 ರವರೆಗೆ ತುಂಗಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು : ತುಂಗಭದ್ರಾ ಜಲಾಶಯದಲ್ಲಿ ಪ್ರಸಕ್ತ 57 ಟಿಎಂಸಿ ನೀರಿನ ಸಂಗ್ರಹ ಇದ್ದು, ಜು.2 ರಿಂದ ನ.30ರವರೆಗೆ ಕಾಲುವೆಗಳಿಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಹೇಳಿದರು.

ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ತುಂಗಭದ್ರಾ ಯೋಜನೆ ಹಾಗೂ ವಿಜಯನಗರ ಕಾಲುವೆಗಳ 124ನೇ ನೀರಾವರಿ ಸಲಹಾ ಸಮಿತಿ ಸಭೆಯ ಬಳಿಕ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಜಲಾಶಯದಲ್ಲಿನ ನೀರಿನ ಸಂಗ್ರಹ ಲಭ್ಯತೆಯ ಮೇರೆಗೆ ನೀರಿನ ಬಳಕೆ ಮಾಡಲಾಗುತ್ತಿದೆ. ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಜು.2 ರಿಂದ ಜು.15 ರವರೆಗೆ 2000 ಕ್ಯೂಸೆಕ್ಸ್ ನಂತೆ, ಜು.16 ರಿಂದ 31ರವರೆಗೆ 3000 ಕ್ಯೂಸೆಕ್ಸ್ ನಂತೆ ಮತ್ತು ಆ.1ರಿಂದ ನ.30ರವರೆಗೆ 4100 ಕ್ಯೂಸೆಕ್ಸ್ ನಂತೆ ನೀರು ಹರಿಸಲಾಗುವುದು ಎಂದು ಶಿವರಾಜ್ ತಂಗಡಗಿ ಹೇಳಿದರು.

ಬಲದಂಡೆ ಮೇಲ್ಮಟ್ಟದ ಕಾಲುವೆಗೆ ಜು.10ರಿಂದ ಜು.31ರವರೆಗೆ ಸರಾಸರಿ 700 ಕ್ಯೂಸೆಕ್ಸ್, ಆ.1ರಿಂದ ನ.30ರವರೆಗೆ 1300 ಕ್ಯೂಸೆಕ್ಸ್, ಬಲದಂಡೆಯ ಕೆಳಮಟ್ಟದ ಕಾಲುವೆಗೆ 500 ಕ್ಯೂಸೆಕ್ಸ್, ಆ.1 ರಿಂದ ನ.30ರವರೆಗೆ 650 ಕ್ಯೂಸೆಕ್ಸ್ ನೀರನ್ನು ಹರಿಸಲಾಗುವುದು ಎಂದು ಅವರು ತಿಳಿಸಿದರು.

ರಾಯ ಬಸವಣ್ಣ ಕಾಲುವೆಗೆ 220 ಕ್ಯೂಸೆಕ್ಸ್ ಹಾಗೂ ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆಗೆ 25 ಕ್ಯೂಸೆಕ್ ಅಥವಾ ಕಾಲುವೆಯಡಿ ನೀರಿನ ಲಭ್ಯತೆ ಆಧಾರದ ಮೇರೆಗೆ ನೀರು ಹರಿಸಲು ಸಲಹಾ ಸಮಿತಿಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಶಿವರಾಜ್ ತಂಗಡಗಿ ತಿಳಿಸಿದರು.

ಸಿಎಂ ಮತ್ತು ಡಿಸಿಎಂ ನೇತೃತ್ವದಲ್ಲಿ ಸಭೆ:

ಸಭೆಯಲ್ಲಿ ವಿಸ್ಕೃತವಾದ ಚರ್ಚೆ ನಡೆದಿದ್ದು, ಅಣೆಕಟ್ಟೆಯ ಸುರಕ್ಷತೆ ಮತ್ತು ಬೆಳೆ ಸಂರಕ್ಷಣೆ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನೇತೃತ್ವದಲ್ಲಿ ನಾಲ್ಕು ಜಿಲ್ಲೆಯ ಶಾಸಕರು ಹಾಗೂ ರೈತರನ್ನು ಒಳಗೊಂಡಂತೆ ಸಭೆ ನಡೆಸಬೇಕೆಂದು ರೈತರು ಬೇಡಿಕೆ ಇಟ್ಟಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿ ಗಮನಕ್ಕೆ ತಂದು ಜುಲೈ 2ನೇ ವಾರ ಅಥವಾ ಮೂರನೇ ವಾರದಲ್ಲಿ ಸಭೆ ನಡೆಸಲು ದಿನಾಂಕ ನಿಗದಿಪಡಿಸಲಾಗುವುದು ಎಂದು ಅವರು ಹೇಳಿದರು.

ಅಧಿಕಾರಿಗಳು ಈ ಬಾರಿ ಒಂದು ಬೆಳೆಗೆ ಮಾತ್ರ ನೀರು ನೀಡಲಾಗುವುದು ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ ಎಂದು ರೈತರು ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಇದೀಗ ಒಂದು ಬೆಳೆಗೆ ನೀರು ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ಮುಂದಿನ ಸಭೆಯಲ್ಲಿ ಎರಡನೇ ಬೆಳೆಗೆ ನೀರು ನೀಡುವ ಸಂಬಂಧ ತೀರ್ಮಾನ ಕೈಗೊಳ್ಳಲಾಗುವುದು. ರೈತರ ಹಿತ ಕಾಪಾಡುವುದು ನಮ್ಮ ಉದ್ದೇಶ. ಇದರಲ್ಲಿ ಯಾರೂ ಕೂಡ ರಾಜಕಾರಣ ಮಾಡಬಾರದು ಎಂದು ಹೇಳಿದರು.

ಜಲಾಶಯದ 32 ಗೇಟ್ ಅನ್ನು ಬದಲಾವಣೆ ಮಾಡುವ ಬಗ್ಗೆ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರು ಆದ ಉಪಮುಖ್ಯಮಂತ್ರಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಈ ಸಭೆಯಲ್ಲಿ ಅಣೆಕಟ್ಟೆಯ ಪರಿಣಿತ ತಜ್ಞರು ಪಾಲ್ಗೊಳ್ಳಲಿದ್ದಾರೆ ಎಂದು ಶಿವರಾಜ್ ತಂಗಡಗಿ ವಿವರಿಸಿದರು.

ಸಭೆಯಲ್ಲಿ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್, ಝಮೀರ್ ಅಹ್ಮದ್ ಖಾನ್, ಮಾಜಿ ಸಚಿವ ಬಿ.ನಾಗೇಂದ್ರ, ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ್, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್, ಎಚ್.ಆರ್.ಗವಿಯಪ್ಪ, ಹಂಪನಗೌಡ ಬಾದರ್ಲಿ, ಬಸವನಗೌಡ ತುರುವಿಹಾಳ್, ಶಿವರಾಜ್ ಪಾಟೀಲ್, ಬಿ.ಎಂ.ನಾಗರಾಜ್, ರೈತ ಮುಖಂಡರು, ಕೊಪ್ಪಳ, ಬಳ್ಳಾರಿ, ರಾಯಚೂರು ಜಿಲ್ಲಾಧಿಕಾರಿಗಳು ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X