Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಗಿಡಕ್ಕೆ ನೀರೆರೆಯುವುದು, ಹಸಿದವರಿಗೆ...

ಗಿಡಕ್ಕೆ ನೀರೆರೆಯುವುದು, ಹಸಿದವರಿಗೆ ಅನ್ನ ನೀಡುವುದು ಧರ್ಮ : ಈಶ್ವರ್‌ ಖಂಡ್ರೆ

ʼಶಿಕ್ಷಣ, ವೈದ್ಯಕೀಯ ಕ್ಷೇತ್ರಕ್ಕೆ ವೀರಶೈವ ಮಠಮಾನ್ಯಗಳ ಕೊಡುಗೆ ಅನುಪಮʼ

ವಾರ್ತಾಭಾರತಿವಾರ್ತಾಭಾರತಿ12 March 2025 2:29 PM IST
share
Photo of program

ಬೆಂಗಳೂರು : ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿ ಸಾಲಿನಲ್ಲಿದ್ದು, ಇದಕ್ಕೆ ವೀರಶೈವ, ಲಿಂಗಾಯತ ಮಠ ಮಾನ್ಯಗಳು ಹಾಗೂ ವಿವಿಧ ಸಂಘ, ಸಂಸ್ಥೆಗಳ ಕೊಡುಗೆ ಅಪಾರವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಬಿ.ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ರವೀಂದ್ರ ಕಲಾಕ್ಷೇತ್ರದಲ್ಲಿಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದಗಂಗೆ ಮಠ, ಸುತ್ತೂರು ಸಂಸ್ಥಾನ, ಸಿರಿಗೆರೆ ಸೇರಿದಂತೆ ನಮ್ಮ ಸಮಾಜದ ಹಲವು ಮಠಗಳು ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡಿದ ಸಾವಿರಾರು ಪ್ರತಿಭಾವಂತರು ಇಂದು ದೇಶ, ವಿದೇಶಗಳಲ್ಲಿ ನಾಡಿಗೆ ಕೀರ್ತಿ ತಂದಿದ್ದಾರೆ ಎಂದು ತಿಳಿಸಿದರು.

ಶ್ರೀ ಜಗದ್ಗುರು ರೇಣುಕಾಚಾರ್ಯರು ತಮ್ಮ ಜೀವನವನ್ನು ಕೇವಲ ಧಾರ್ಮಿಕ, ಆಧ್ಯಾತ್ಮಿಕತೆಗಷ್ಟೇ ಸೀಮಿತಗೊಳಿಸದೆ, ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದವರು. ಅವರು ಧರ್ಮ ದಂಡಯಾತ್ರೆ ಕೈಗೊಂಡು ವೀರಶೈವ ಧರ್ಮ ಕೇಂದ್ರಗಳು, ಭೂರುದ್ರ ಭಕ್ತ ಸಂಘಗಳನ್ನು ಸ್ಥಾಪಿಸಿ ಮಹಿಳೆಯರಿಗೆ ಧಾರ್ಮಿಕ ಸ್ವಾತಂತ್ರ್ಯ ನೀಡಿದ ಅಗ್ರೇಸರರೆಂದರು.

ಸಾವಿರಾರು ವರ್ಷಗಳ ಹಿಂದೆಯೇ ರೈತರ ಕಲ್ಯಾಣಕ್ಕಾಗಿ ಬಡಜನರ ಉದ್ದಾರಕ್ಕಾಗಿ ಶ್ರೀ ಜಗದ್ಗುರು ರೇಣುಕಾಚಾರ್ಯರು ಕೈಗೊಂಡ ನಿರ್ಧಾರಗಳು ಅವರಿಗಿದ್ದ ಸಾಮಾಜಿಕ ಕಾಳಜಿಗೆ ಸಾಕ್ಷೀಭೂತವಾಗಿವೆ ಎಂದ ಈಶ್ವರ್‌ ಖಂಡ್ರೆ, ಅದೇ ಪರಂಪರೆಯನ್ನು ನಮ್ಮ ವೀರಶೈವ ಮಠಗಳು ಅನೂಚಾನವಾಗಿ ಮುಂದುವರಿಸಿಕೊಂಡು ಬಂದಿವೆ ಎಂದು ತಿಳಿಸಿದರು.

ಇಂತಹ ಜಯಂತಿ ಆಚರಣೆ ಇಂದಿನ ಪೀಳಿಗೆಗೆ ನಮ್ಮ ಪೂರ್ವಜರ ಮಹತ್ಕಾರ್ಯ, ಜನಸೇವೆಯ ಬಗ್ಗೆ ತಿಳಿಯಹೇಳುತ್ತದೆ. ಇದು ನಮ್ಮ ಸಂಸ್ಕೃತಿಯನ್ನು ಗಟ್ಟಿಗೊಳಿಸುತ್ತದೆ. ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಪಡುವಂತೆ ಮಾಡುತ್ತದೆ. ಇದು ಯುವ ಪೀಳಿಗೆಯಲ್ಲಿ ಮನಃಪರಿವರ್ತನೆಗೆ ಬೆಳಕಾಗಿ, ಸಮಾಜದ ಪರಿವರ್ತನೆಗೆ ದಾರಿದೀಪವಾಗುತ್ತದೆ ಎಂದು ಹೇಳಿದರು.

ಹಸಿದವರಿಗೆ ಅನ್ನ ನೀಡುವುದೇ ಧರ್ಮ :

ವಿಶ್ವಗುರು ಬಸವಣ್ಣನವರು ದಯಯೇ ಧರ್ಮದ ಮೂಲವಯ್ಯ ಎಂದು ಹೇಳಿದ್ದಾರೆ. ಬಿದ್ದವರನ್ನು ಮೇಲೆತ್ತುವುದೇ ಧರ್ಮ, ಹಸಿದವರಿಗೆ ಅನ್ನ ಹಾಕುವುದು ಧರ್ಮ, ವೃದ್ಧ ತಂದೆ, ತಾಯಿಯನ್ನು ಪ್ರೀತಿಯಿಂದ ನೋಡಿಕೊಳ್ಳುವುದು ಧರ್ಮ, ಗಿಡಮರಗಳಿಗೆ ನೀರೆರೆದು ಪೋಷಿಸುವುದು ಧರ್ಮ. ಇಂತಹ ಧರ್ಮದ ಪ್ರಚಾರವನ್ನು ವೀರಶೈವ, ಲಿಂಗಾಯತ ಮಠ ಮಾನ್ಯಗಳು ಮಾಡುತ್ತಿವೆ ಎಂದು ಹೇಳಿದರು.

ಪ್ರಕೃತಿ ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ :

ಈ ಭೂಮಿಯಲ್ಲಿ ಹುಟ್ಟಿದ ಎಲ್ಲ ಮಹಾಪುರುಷರೂ ಪ್ರಕೃತಿ, ಪರಿಸರ ಹಾಗೂ ಅರಣ್ಯವನ್ನು ಉಳಿಸಲು ಮಹತ್ವದ ಕಾಳಜಿ ತೋರಿದ್ದಾರೆ. ಪ್ರಕೃತಿ ಮತ್ತು ಪರಿಸರ ಉಳಿಸುವುದು ನಮ್ಮೆಲ್ಲರ ಹೊಣೆಯಾಗಿದೆ. ಪ್ರತಿಯೊಬ್ಬರೂ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾದರೆ ಮುಂದಿನ ಪೀಳಿಗೆಗೆ ಇರುವ ಒಂದೇ ಭೂಮಿಯನ್ನು ಉತ್ತಮವಾಗಿ ಹಸ್ತಾಂತರಿಸಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ವೀರಶೈವ ಮತ್ತು ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್, ಶ್ರೀಕ್ಷೇತ್ರ ಯಡೆಯೂರು ಸಂಸ್ಥಾನದ ಪರಮಪೂಜ್ಯ ಶ್ರೀ ರೇಣುಕಾ ಶಿವಾಚಾರ್ಯ ಮಹಾಸ್ವಾಮಿಗಳು ಮತ್ತಿತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X