Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜ್ಯ ಬಜೆಟ್ ನಲ್ಲಿ ಕರಾವಳಿಗೆ ಏನೆಲ್ಲ...

ರಾಜ್ಯ ಬಜೆಟ್ ನಲ್ಲಿ ಕರಾವಳಿಗೆ ಏನೆಲ್ಲ ಕೊಡುಗೆಗಳು?: ಇಲ್ಲಿದೆ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ7 March 2025 2:17 PM IST
share
ರಾಜ್ಯ ಬಜೆಟ್ ನಲ್ಲಿ ಕರಾವಳಿಗೆ ಏನೆಲ್ಲ ಕೊಡುಗೆಗಳು?: ಇಲ್ಲಿದೆ ಮಾಹಿತಿ

ಬೆಂಗಳೂರು: ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಬಜೆಟ್ ನಲ್ಲಿ ಕರಾವಳಿಗೆ ಘೋಷಿಸಿರುವ ಕೊಡುಗೆಗಳ ವಿವರ ಇಂತಿವೆ.

*ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪನೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಕ್ರಮ.

*ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ನವೀಕರಣ.

* ಉಳ್ಳಾಲದಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರಿಗಾಗಿ ವಸತಿ ಸಹಿತ ಪಿಯು ಕಾಲೇಜು ಸ್ಥಾಪನೆ.

* ಆಳ ಸಮುದ್ರ ಮೀನುಗಾರಿಕೆಯನ್ನು ಪ್ರೋತ್ಸಾಹಿಸಲು ಪ್ರಸಕ್ತ ಇರುವ ಮೀನುಗಾರಿಕೆ ದೋಣಿಗಳ ಉದ್ದದ ಮಿತಿ ಸಡಿಲಿಕೆ.

* ಮಂಗಳೂರಿನಲ್ಲಿರುವ ಮೀನುಗಾರಿಕೆ ಕಾಲೇಜಿಗೆ ಪ್ರಸಕ್ತ ನಿಗದಿಪಡಿಸಿರುವ ವಿದ್ಯಾರ್ಥಿಗಳ ಸಂಖ್ಯಾಬಲ ದ್ವಿಗುಣ.

*ಕರಾವಳಿ ಜಿಲ್ಲೆಗಳಲ್ಲಿನ ಮೀನುಗಾರಿಕೆ ಕೊಂಡಿ ರಸ್ತೆಗಳನ್ನು ನಬಾರ್ಡ್ ಸಹಯೋಗದಲ್ಲಿ ಅಭಿವೃದ್ಧಿಗೆ 30 ಕೋಟಿ ರೂ.

*ಪರಿಶಿಷ್ಟ ಜಾತಿ / ಪಂಗಡದ ಆಯ್ದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂ. ಆರ್ಥಿಕ ನೆರವು.

* ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಕಾಲಾವಧಿ ಮೀರಿರುವ ಹಳೆಯ ಇಂಜಿನ್ ಗಳನ್ನು ಬದಲಾಯಿಸಿ, ಹೊಸ ಇಂಜಿನ್ ಖರೀದಿಸಲು ಶೇ.50ರಷ್ಟು ಒಂದು ಲಕ್ಷ ರೂ. ಮಿತಿಗೊಳಪಟ್ಟು ಸಹಾಯಧನ.

* ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ 'ಮಲ್ಟಿ-ಲೆವೆಲ್ ಪಾರ್ಕಿಂಗ್' ವ್ಯವಸ್ಥೆ ನಿರ್ಮಾಣ.

* ಪಿಲಿಕುಳದಲ್ಲಿ ಭಾರತ್ ಸೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಯುವಕರ ತರಬೇತಿ ಕೇಂದ್ರದ ಅಭಿವೃದ್ಧಿಗಾಗಿ ಎರಡು ಕೋಟಿ ರೂ.

* ಬೆಂಗಳೂರು, ಕಲಬುರಗಿ, ಮಂಗಳೂರು, ಮತ್ತು ಬೆಳಗಾವಿ ಕೆಜಿಟಿಟಿಐ ಕೇಂದ್ರಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ “Industry-4.0' ಗೆ ಅನುಗುಣವಾಗಿ ಹೊಸ ತಂತ್ರಜ್ಞಾನ ಆಧಾರಿತ ಪಠ್ಯಕ್ರಮದೊಂದಿಗೆ ಹೊಸ ಪ್ರಯೋಗಾಲಯ ಸ್ಥಾಪನೆ.

* ಬಯಲುಸೀಮೆ, ಮಲೆನಾಡು ಹಾಗೂ ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಗಳಿಗೆ ಒಟ್ಟಾರೆಯಾಗಿ 83 ಕೋಟಿ ರೂ. ಅನುದಾನ.

* ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ರಾಮನಗರ ಮತ್ತು ಉಳ್ಳಾಲಕ್ಕೆ 705 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರು ಯೋಜನೆ ಅನುಷ್ಠಾನ.

* ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಕ್ರೂಸ್, ವಾಟರ್ ಮೆಟ್ರೋ, ಕೋಸ್ಟಲ್ ಬರ್ತ್, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಕಿ ಬಂದರು, ಹೊನ್ನಾವರದಲ್ಲಿ ಹಡಗು ನಿರ್ಮಾಣ ಕ್ಷೇತ್ರ ಹಾಗೂ ನದಿ ಕ್ರೂಸ್ ಪ್ರವಾಸೋದ್ಯಮ ಯೋಜನೆಗಳಿಗೆ ವಿಸ್ತೃತ ಯೋಜನೆ.

* ಪ್ರತಿ ವರ್ಷಮುಂಗಾರು ಮಳೆಯ ಸಮಯ ಕರಾವಳಿ ತೀರದಲ್ಲಿ ಕಡಲ್ಕೊರೆತ ಸಂಭವಿಸುವುದನ್ನು ತಡೆಗಟ್ಟಲು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು:

ಕಡಲ್ಕೊರೆತದ ಪರಿಣಾಮಗಳನ್ನು ಸಮಗ್ರವಾಗಿ ಎದುರಿಸಲು ಚೆನ್ನೈ ಐಐಟಿ ಸಿದ್ಧಪಡಿಸಿರುವ ಶೋರ್ಲೈನ್ ಮ್ಯಾನೇಜ್ ಮೆಂಟ್ ಪ್ಲಾನ್ (Shoreline Management Plan) ಅನ್ನು ಜಾರಿಗೊಳಿಸಲು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಪ್ರತ್ಯೇಕವಾಗಿ ವಿಸ್ತೃತ ಯೋಜನಾ ವರದಿಗಳನ್ನು ಸಿದ್ಧಪಡಿಸಲಾಗುವುದು. ಈ ವರದಿಯಲ್ಲಿನ ಕಡಲ್ಕೊರೆತ ತಡೆಗಟ್ಟುವ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುವುದು. ಇದಕ್ಕಾಗಿ ರಾಷ್ಟ್ರೀಯ ವಿಪತ್ತು ಉಪಶಮನ ನಿಧಿಯಡಿ 200 ಕೋಟಿ ರೂ. ಖರ್ಚು ಮಾಡಲಾಗುವುದು.

*ಮಂಗಳೂರಿನಲ್ಲಿ ಜಲಸಾರಿಗೆ ಸಂಗ್ರಹಾಲಯ ಮತ್ತು ಅನುಭವ ಕೇಂದ್ರವನ್ನು ಪಿಪಿಪಿ ಮಾದರಿಯಲ್ಲಿ ಸ್ಥಾಪನೆ.

* ಕಾರ್ಕಳದಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಜವಳಿ ಪಾರ್ಕ್ ಸ್ಥಾಪನೆ.

* ಕಿಯೋನಿಕ್ಸ್ ವತಿಯಿಂದ ಮಂಗಳೂರಿನಲ್ಲಿ ಪ್ಲಗ್-ಅಂಡ್-ಪ್ಲೇ ಸೌಲಭ್ಯಗಳನ್ನೊಳಗೊಂಡ ಹೊಸ ಜಾಗತಿಕ ತಂತ್ರಜ್ಞಾನ ಕೇಂದ್ರ (GTC) ಸ್ಥಾಪನೆ.

* ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಅಭಿವೃದ್ಧಿ ಹಾಗೂ ರಸ್ತೆಬದಿ ಸೌಲಭ್ಯಗಳನ್ನು (Highway Hubs) ಉನ್ನತೀಕರಿಸುವ ಮೂಲಕ ಶೈಕ್ಷಣಿಕ, ಆರೋಗ್ಯ, ಸಾಹಸ, ಪರಿಸರ, ಜಲಸಾರಿಗೆ ಹಾಗೂ ಕಡಲ ತೀರದ ಪ್ರವಾಸೋದ್ಯಮಗಳಿಗೆ ಲಭ್ಯವಿರುವ ಅವಕಾಶಗಳನ್ನು ಬಳಸಲು ಕ್ರಮ.

* ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ತಲಾ 3 ಕೋಟಿ ರೂ. ನಂತೆ ಒಟ್ಟು 6 ಕೋಟಿ ರೂ. ಅನುದಾನ.

* ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭೂ ಕುಸಿತ ತಡೆಯಲು 200 ಕೋಟಿ ರೂ. ವೆಚ್ಚದಲ್ಲಿ ಕ್ರಮ.

* ವಾಹನ ಸಂಚಾರವನ್ನು ಮೇಲ್ವಿಚಾರಣೆ ಮಾಡಲು ಮತ್ತು ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಹಚ್ಚಿ ನಿಯಂತ್ರಿಸಲು ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಕಲಬುರಗಿ, ಬೆಳಗಾವಿ, ಚಿತ್ರದುರ್ಗ, ಹಾವೇರಿ, ಹೊಸಪೇಟೆ, ಬಳ್ಳಾರಿ, ವಿಜಯಪುರ ಜಿಲ್ಲೆಗಳ ಒಟ್ಟು 60 ಸ್ಥಳಗಳಲ್ಲಿ 50 ಕೋಟಿ ರೂ. ವೆಚ್ಚದಲ್ಲಿ AI ಆಧಾರಿತ ವಿದ್ಯುನ್ಮಾನ ಕ್ಯಾಮರಾಗಳನ್ನು ಅಳವಡಿಕೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X